ರಾಜ್ಯದಲ್ಲಿ ಅತಿವೃಷ್ಟಿ: ತುರ್ತಾಗಿ ವಿಶೇಷ ಪ್ಯಾಕೇಜ್ ಘೋಷಿಸಲು ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಕಳೆದ ವರ್ಷದ ಮಳೆಯ ಅವಾತರದಿಂದಾಗಿ ಜನ ಇನ್ನು ಚೇತರಿಸಿಕೊಂಡಿಲ್ಲ. ಅಷ್ಟರಲ್ಲೇ ಈ ವರ್ಷದ ವರುಣನ ಅಬ್ಬರ ಹೆಚ್ಚಾಗಿದ್ದು ಜನ ಕಂಗಾಲಾಗಿದ್ದಾರೆ.  ಈ ವರ್ಷದ ಆಗಷ್ಟ್ ತಿಂಗಳಿನಿಂದ ರಾಜ್ಯದ ಉದ್ದಗಲಕ್ಕೂ ಅತಿವೃಷ್ಟಿ ಉಂಟಾಗಿದೆ. ಅದರಲ್ಲೂ ಕಲ್ಯಾಣ ಕರ್ನಾಟಕದಲ್ಲಿ ಕಳೆದ 50 ವರ್ಷಗಳಲ್ಲಿ ಹಿಂದೆಂದು ಕಾಣದಂತಹ ಮಳೆಯಾಗಿದೆ.

ಈ ಮಳೆಯಿಂದಾಗಿ ಈರುಳ್ಳಿ, ಶೇಂಗಾ, ಹತ್ತಿ, ಮೆಣಸಿನ ಕಾಯಿ, ರಾಗಿ, ಮುಸುಕಿನ ಜೋಳ, ಬಿಳಿ ಜೋಳ ಮುಂತಾದ ಬೆಳೆಗಳು ಸಹ ಹೊಲದಲ್ಲೇ ಕೊಳೆತು ಹೋಗುತ್ತಿವೆ. ಬೆಳೆಗಳು ಬಹುತೇಕ ನೀರುಪಾಲಾಗಿದ್ದು, ಇನ್ನಿಷ್ಟು ನಷ್ಟ ಉಂಟಾಗುವುದರೊಳ್ಳಗಾಗಿ ಖರೀದಿ ಕೆಂದ್ರಗಳನ್ನು ತೆರೆದು ಕನಿಷ್ಟ ಬೆಂಬಲ ಬೆಲೆ ನಿಗದಿ ಮಾಡಿರುವ ಮೊತ್ತಾಕಾದರೂ ರೈತರು ಬೆಳೆದ ಬೆಳೆಯನ್ನು ಖರೀದಿ ಮಾಡಬೇಕೆಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯರವರು ಸರ್ಕಾರ ಒತ್ತಾಯಿಸಿದ್ದಾರೆ.

ಅತಿವೃಷ್ಟಿಯಿಂದಾಗಿ ಬೆಳೆಗಳು ಹಾನಿಯಾಗಿವೆ, ಅವುಗಳನ್ನು ಸಮರ್ಪಕವಾಗಿ ಸಮೀಕ್ಷೆ ಮಾಡಬೇಕು. ಜೊತೆಗೆ ಅತ್ಯಂತ ತುರ್ತಾಗಿ ವಿಶೇಷ ಪ್ಯಾಕೇಜ್ ಘೋಷಣೆ ನೀಡುವುದರ ಮೂಲಕ ಸರ್ಕಾರ ರೈತರ ಪರವಾಗಿ ನಿಲ್ಲಬೇಕೆಂದು ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ  ಸಿದ್ದರಾಮಯ್ಯನವರು ಪತ್ರ ಬರೆದಿದ್ದಾರೆ.

ಈ ವರ್ಷದ ಮುಂಗಾರಿನಲ್ಲಿ ಬಿತ್ತನೆ ಮಾಡಲಾದ ಹೆಸರು, ಉದ್ದು ಸೇರಿದಂತೆ ಬೆಳೆಗಳು ಕಟಾವು ಮಾಡುವ ಸಂದರ್ಭದಲ್ಲಿ ವಿಪರೀತ ಮಳೆ ಬಂದು ಗಿಡದಲ್ಲೇ ಕಾಳುಗಳು ಮೊಳಕೆ ಬಂದು ಬೆಳೆ ನಾಶವಾಗಿದೆ. ಇನ್ನು ಅಕ್ಟೋಬರ್ –ನವೆಂಬರ್ ತಿಂಗಳಿನಲ್ಲಿ ಅಗತ್ಯಕ್ಕಿಂತ ಮಳೆಯಾದರೆ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *