- ರಾಜ್ಯದ ಕರಾವಳಿ ಮತ್ತು ಒಳನಾಡಿನ ಹಲವು ಕಡೆ ಉತ್ತಮ ಮಳೆಯಾಗಿದೆ
- ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ
- ಮುಂದಿನ ಐದು ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ
- 9 ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ
ಬೆಂಗಳೂರು : ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ನಾಳೆಯಿಂದ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಾಧರಣದಿಂದ ಅಧಿಕ ಮಳೆ ಹಾಗೂ ಅಲ್ಲಲ್ಲಿ ಭಾರೀ ಮಳೆ. ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಅಧಿಕ ಮಳೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಜುಲೈ 2 ರಿಂದ 4 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಮಲೆನಾಡಿನ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜುಲೈ 1 ರಿಂದ ನಾಲ್ಕು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
9 ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ : ಮುಂದಿನ ಕೆಲವು ದಿನಗಳಲ್ಲಿ ಉತ್ತರಾಖಂಡ, ಉತ್ತರ ಪ್ರದೇಶ, ಬಿಹಾರ ಮತ್ತು ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು IMD ಎಚ್ಚರಿಕೆ ನೀಡಿದೆ. ಮುಂದಿನ 5 ದಿನಗಳ ಕಾಲ ಗೋವಾದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಇದಲ್ಲದೇ ಗುಜರಾತ್, ಕರ್ನಾಟಕ, ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲೂ ಭಾರೀ ಮಳೆ ಬೀಳುವ ಎಚ್ಚರಿಕೆ ನೀಡಲಾಗಿದೆ.