ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ : ಯಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಮಳೆ ಮುಂದುವರಿಯಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಂಭವವಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬೆಳಗಾವಿ, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸೆ.8ರ ವರೆಗೆ ಮಳೆ ಹೆಚ್ಚಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ಬಾಗಲಕೋಟೆ ಜಿಲ್ಲೆಗಳ ಹಲವೆಡೆ ಇಂದು ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Donate Janashakthi Media

Leave a Reply

Your email address will not be published. Required fields are marked *