- ಅಶೋಕ್ ಗಸ್ತಿ ಅವರ ನಿಧನದಿಂದ ತೆರವಾಗಿರುವ ರಾಜ್ಯಸಭೆಯ ಒಂದು ಸ್ಥಾನ
ಬೆಂಗಳೂರು: ಅಶೋಕ್ ಗಸ್ತಿ ಅವರ ನಿಧನದಿಂದ ತೆರವಾಗಿರುವ ರಾಜ್ಯಸಭೆಯ ಒಂದು ಸ್ಥಾನಕ್ಕೆ ಡಿ.1 ರಂದು ಉಪ ಚುನಾವಣೆ ನಡೆಯಲಿದ್ದು, ಈ ಸಂಬಂಧ ಬುಧವಾರ ಅಧಿಸೂಚನೆ ಹೊರಡಿಸಲಾಗಿದೆ.
ನವೆಂಬರ್ 18ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ನ.19 ರಂದು ನಾಮಪತ್ರ ಪರಿಶೀಲನೆ ಪ್ರಕ್ರಿಯೆ ನಡೆಯಲಿದೆ. ನಾಮಪತ್ರ ಹಿಂದಕ್ಕೆ ಪಡೆಯಲು ನ.23 ಕೊನೆಯ ದಿನವಾಗಿದೆ. ಅಗತ್ಯವಿದ್ದರೆ ಡಿ.1ರಂದು ಮತದಾನ ನಡೆಯಲಿದೆ.