ರಾಜ್ಯಸಭೆ ಉಪಚುನಾವಣೆ ಅಧಿಸೂಚನೆ; ಡಿ.1ರಂದು ಮತದಾನ

Please follow and like us:
  • ಅಶೋಕ್‌ ಗಸ್ತಿ ಅವರ ನಿಧನದಿಂದ ತೆರವಾಗಿರುವ ರಾಜ್ಯಸಭೆಯ ಒಂದು ಸ್ಥಾನ

 

ಬೆಂಗಳೂರು: ಅಶೋಕ್‌ ಗಸ್ತಿ ಅವರ ನಿಧನದಿಂದ ತೆರವಾಗಿರುವ ರಾಜ್ಯಸಭೆಯ ಒಂದು ಸ್ಥಾನಕ್ಕೆ ಡಿ.1 ರಂದು ಉಪ ಚುನಾವಣೆ ನಡೆಯಲಿದ್ದು, ಈ ಸಂಬಂಧ ಬುಧವಾರ ಅಧಿಸೂಚನೆ ಹೊರಡಿಸಲಾಗಿದೆ.

ನವೆಂಬರ್‌ 18ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ನ.19 ರಂದು ನಾಮಪತ್ರ ಪರಿಶೀಲನೆ ಪ್ರಕ್ರಿಯೆ ನಡೆಯಲಿದೆ. ನಾಮಪತ್ರ ಹಿಂದಕ್ಕೆ ಪಡೆಯಲು ನ.23 ಕೊನೆಯ ದಿನವಾಗಿದೆ. ಅಗತ್ಯವಿದ್ದರೆ ಡಿ.1ರಂದು ಮತದಾನ ನಡೆಯಲಿದೆ.

Please follow and like us:
Donate Janashakthi Media

Leave a Reply

Your email address will not be published. Required fields are marked *