ಗುಜರಾತ್, ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಎರಡು ರಾಜ್ಯಗಳಲ್ಲಿ ಹೊಸ ದಾಖಲೆಗಳನ್ನು ಬರೆಯುವ ಉಮೇದಿನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿವೆ. ಈ ಮಧ್ಯೆ ಎಎಪಿ ಕೂಡ ಉತ್ತಮ ಪ್ರದರ್ಶನ ತೋರುವ ವಿಶ್ವಾಸ ಹೊಂದಿದೆ. ರಾಜಕೀಯ ಪಕ್ಷಗಳ ಜಿದ್ದಾಜಿದ್ದಿ ಹಾಗೂ ಫಲಿತಾಂಶದ ಕ್ಷಣಕ್ಷಣದ ಮಾಹಿತಿ ಇಲ್ಲಿದೆ.
ಗುಜರಾತ್‌ನಲ್ಲಿ ಬಿಜೆಪಿ 154, ಕಾಂಗ್ರೆಸ್ 19, ಎಎಪಿ 6, ಇತರರು 3 ಕ್ರೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಬಿಜೆಪಿ 28, ಕಾಂಗ್ರೆಸ್ 37, ಎಎಪಿ 0, ಇತರರು 3 ಕ್ರೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಆಮ್ ಅದ್ಮಿ ಪಕ್ಷ ನಿರೀಕ್ಷಿತ ಫಲಿತಾಂಶ ಪಡೆಯುವಲ್ಲಿ ವಿಫಲವಾಗಿದೆ. ಆದರೂ ಆಮ್ ಆದ್ಮಿ ಪಕ್ಷದ 6 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಮಹತ್ವದ ಮೈಲಿಗಲ್ಲಾಗಿದೆ.
ಇದನ್ನೂ ಓದಿ : ಮತ ಎಣಿಕೆ: ಗುಜರಾತ್‌ನಲ್ಲಿ ಆರಂಭಿಕ ಟ್ರೆಂಡ್‌ಗಳಲ್ಲಿ ಬಿಜೆಪಿ ಮುನ್ನಡೆ! ಹಿಮಾಚಲದಲ್ಲಿ ಸಮಬಲದ ಪೂಪೋಟಿ
ಹಿಮಾಚಲ ಪ್ರದೇಶದಲ್ಲಿ ಮೂವರು ಬಿಜೆಪಿ ರೆಬೆಲ್ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ. ಹಾಲಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಅಭ್ಯರ್ಥಿ ಜೈರಾಂ ಠಾಕೂರ್ ಸೆರಜ್ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಚೇತ್ ರಾಮ್ ವಿರುದ್ಧ ಗೆಲುವು ಸಾಧಿಸಿದ್ದಾರೆ.
ಒಂದೊಮ್ಮೆ ಅಂತಿಮ ಫಲಿತಾಂಶ ಕಾಂಗ್ರೆಸ್ ಪಕ್ಷದ ಪರವಾಗಿ ಬಂದರೂ ಕೂಡ ಮುಖ್ಯಮಂತ್ರಿ ಆಯ್ಕೆ ಅಷ್ಟು ಸುಲಭವಾಗಿಲ್ಲ. ಈಗಷ್ಟೇ ಪಕ್ಷದ ಚುಕ್ಕಾಣಿ ಹಿಡಿದಿರುವ ಮಲ್ಲಿಕಾರ್ಜುನ ಖರ್ಗೆಗೆ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಸವಾಲಾಗುವ ಸಾಧ್ಯತೆಯಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ರೇಸ್‌ನಲ್ಲಿರುವವರ ಸಂಖ್ಯೆ ಅರ್ಧ ಡಜನ್‌ಗಿಂತ ಹೆಚ್ಚಿದೆ. ಈ ಸವಾಲು ಹೇಗೆ ಸರಿಹೋಗಬಹುದು ಎಂಬ ಕುತೂಹಲ ಈಗ ಮನೆ ಮಾಡಿದೆ.