ಶಿವಮೊಗ್ಗ | ಟಿಇಟಿ ಬರೆಯಬೇಕೆಂದು ಸುಪ್ರೀಂ ಕೋರ್ಟ್ ಆದೇಶ : ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ

ಶಿವಮೊಗ್ಗ: ನಿವೃತ್ತಿ ಅಂಚಿನಲ್ಲಿರುವವರನ್ನು ಹೊರತುಪಡಿಸಿ, ಉಳಿದೆಲ್ಲ ಶಿಕ್ಷಕರು ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಬರೆಯಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಸಂಬಂಧ ನಮ್ಮ ಸರ್ಕಾರದಿಂದ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲಾಗಿದೆ” ಎಂದು ಶಿಕ್ಷಣ ಸಚಿವ ಎಸ್​.ಮಧು ಬಂಗಾರಪ್ಪ ತಿಳಿಸಿದ್ದಾರೆ.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವರು ಇಂದಿನ ಕಾಲಕ್ಕೆ ತಕ್ಕಂತೆ ಬದಲಾವಣೆ ಆಗಬೇಕು. ಈಗ ರಾಜ್ಯ ಸರ್ಕಾರ ಮುಂದಿನ 25 ವರ್ಷವನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಕರನ್ನು ನೇಮಿಸಿಕೊಳ್ಳುತ್ತದೆ.  ಕೋರ್ಟ್ ಆದೇಶ ಮಾಡಿರುವುದು ಸರಿ ಇದೆ. ಈಗ ಇರುವ ಶಿಕ್ಷಕರು 20ರಿಂದ 30 ವರ್ಷಗಳ ಹಿಂದೆ ನೇಮಕಗೊಂಡವರು.  ಸುಪ್ರೀಂ ಕೋರ್ಟ್ ಮಕ್ಕಳು ದಡ್ಡರಾಗುತ್ತಿದ್ದಾರೆಂದು ಎಂದು ತಿಳಿದು ಟಿಇಟಿ ಬರೆಯಲು ಹೇಳಿರಬೇಕು” ಎಂದರು.

ಇದನ್ನೂ ಓದಿ : ವಿಜಯಪುರ | ಎಂ.ಬಿ. ಪಾಟೀಲರೇ ನೀವು ಬಂಡವಾಳಶಾಹಿಗಳ ಗುಲಾಮರಾಗಬೇಡಿ – ಚಿಂತಕ ಡಾ. ಸಿದ್ದನಗೌಡ ಪಾಟೀಲ ಎಚ್ಚರಿಕೆ

ಶೇ.100ರಷ್ಟು ಫಲಿತಾಂಶ ತರುವ ಶಾಲೆಗೆ ಪ್ರಶಸ್ತಿ:  ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಯಲ್ಲಿ ಶೇ.100ರಷ್ಟು ಫಲಿತಾಂಶ ಬಂದ ಶಾಲೆಗಳಿಗೆ ಪ್ರಶಸ್ತಿ ನೀಡಲಾಗುತ್ತದೆ.  “ನಾವು ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ ಜನ ಸೇವೆಯಲ್ಲಿ ಇರುತ್ತೇವೆ. ಉತ್ತಮ ಫಲಿತಾಂಶ ಬಂದ ಶಾಲೆಗಳಿಗೆ 25 ಸಾವಿರ ರೂಪಾಯಿ ನೀಡಲಾಗುತ್ತಿದೆ” ಎಂದು ತಿಳಿಸಿದರು.

ನಾನೂ ಸಹ ಫೇಲ್ ಆದವನೇ. ಆದರೆ ನನ್ನಲ್ಲಿ ಉತ್ತಮ ಗುಣಗಳನ್ನು ಪೋಷಕರು ಕಲಿಸಿದ್ದಾರೆ. ಅನುದಾನಿತ ಶಾಲೆಗಳಿಗೆ ಆರು ಸಾವಿರ ಶಿಕ್ಷಕರ ನೇಮಕಕ್ಕೆ ಸಿಎಂ ಸೂಚನೆ ನೀಡಿದ್ದಾರೆ. ಕನ್ನಡ ಶಾಲೆಗಳಿಗೆ ಅನುದಾನ ನೀಡಬೇಕೆಂಬ ಬೇಡಿಕೆ ಇದೆ.  “ನಮ್ಮ ಇಲಾಖೆಯಲ್ಲಿ ಅನುದಾನಕ್ಕೆ ಕೊರತೆ ಇಲ್ಲ. ಫಲಿತಾಂಶವೂ ಉತ್ತಮವಾಗಿ ಬಂದಿದೆ. ಇದಕ್ಕೆ ವಿರೋಧ ಪಕ್ಷದವರೂ ಸಹ ಭೇಷ್ ಎಂದಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಮಾನವೀಯ ಗುಣಗಳ ಬಗ್ಗೆ ತಿಳಿಸಿಕೊಡಲಾಗುತ್ತದೆ.  ಕನ್ನಡ ಶಾಲೆಗಳಿಗೆ ಅನುದಾನ ನೀಡಬೇಕೆಂಬ ಬೇಡಿಕೆ ಇದೆ. ಇದರ ಕುರಿತೂ ಸಹ ಸೂಕ್ತ ತೀರ್ಮಾನ ಮಾಡಲಾಗುತ್ತಿದೆ” ಎಂದು ಹೇಳಿದರು.

12 ತರಗತಿ ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಊಟ:  ಎಲ್ಲ ಕೆಪಿಎಸ್ ಶಾಲೆಗಳ 12 ತರಗತಿ ವಿದ್ಯಾರ್ಥಿಗಳಿಗೂ ಸಹ ಮಧ್ಯಾಹ್ನದ ಊಟ ನೀಡಲಾಗುತ್ತದೆ.  “ಕೆಪಿಎಸ್ ಶಾಲೆಯಲ್ಲಿ ದ್ವಿಭಾಷಾ ಮಾಧ್ಯಮ ಇರುತ್ತದೆ. 6ನೇ ತರಗತಿಯಿಂದ ಮಗು ತಾನು ಬಯಸುವ ಭಾಷೆ ಕಲಿಯಬಹುದಾಗಿದೆ. ಇದರಿಂದ ಸರ್ಕಾರಕ್ಕೆ ಹೊರೆ ಆಗುತ್ತದೆ. ಆದರೆ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸರ್ಕಾರ ಇದನ್ನು ಭರಿಸಲಿದೆ. ಇಲ್ಲಿ ದೈಹಿಕ ಹಾಗೂ ಸಂಗೀತ ಶಿಕ್ಷಕರನ್ನು ನೇಮಕ ಮಾಡಲು ಸಿಎಂಗೆ ಮನವಿ ಮಾಡಲಾಗಿದೆ” ಎಂದು ಹೇಳಿದರು.

ಇದನ್ನೂ ನೋಡಿ : ಸರಕಾರಿ ಶಾಲೆಗಳನ್ನು ಮುಚ್ಚುತ್ತಿರುವ ಸರಕಾರ | ತಳ ಸಮುದಾಯಕ್ಕೆ ಎಸಗುತ್ತಿರುವ ದ್ರೋಹ Janashakthi Media

 

 

Donate Janashakthi Media

Leave a Reply

Your email address will not be published. Required fields are marked *