ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ ದಿನಾಂಕ ಪ್ರಕಟಿಸದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕ್ಷೇತ್ರ ಮರುವಿಂಗಡಣೆ (Delimitation) ಪ್ರಕ್ರಿಯೆಯ ಬಗ್ಗೆಯೂ ಕೇಂದ್ರ ಸರ್ಕಾರ ಸ್ಪಷ್ಟ ನಿಲುವು ಪ್ರಕಟಿಸಬೇಕು ಎಂದು ಆಗ್ರಹಿಸಿದ್ದಾರೆ.
ಸೋಮವಾರ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ಟೀಕೆ ವ್ಯಕ್ತಪಡಿಸಿದ್ದಾರೆ. ಚಳಿಗಾಲದ ಅಧಿವೇಶನ ಯಾವಾಗ ನಡೆಯಲಿದೆ ಎಂಬುದನ್ನು ದೇಶಕ್ಕೆ ತಿಳಿಸಬೇಕಿತ್ತು ಎಂದು ಪ್ರಶ್ನಿಸಿದ್ದಾರೆ. ಇನ್ನೂ ಅಧಿಕೃತವಾಗಿ ಮುಕ್ತಾಯಗೊಳ್ಳದ ಮುಂಗಾರು ಅಧಿವೇಶನವನ್ನು ಮತ್ತೆ ಯಾವಾಗ ಕರೆಯಲಾಗುತ್ತದೆ ಎಂಬ ಬಗ್ಗೆಯೂ ಸ್ಪಷ್ಟನೆ ಕೇಳಿದ್ದಾರೆ. ಜೈರಾಮ್ ರಮೇಶ್
ಕ್ಷೇತ್ರ ಮರುವಿಂಗಡಣೆ ಸೂತ್ರಕ್ಕೆ ಆಗ್ರಹ
ಲೋಕಸಭೆಯಲ್ಲಿ ಎರಡು–ಮೂರರಷ್ಟು ಬಹುಮತ ಪಡೆಯಲು ಆಡಳಿತಾರೂಢ ಪಕ್ಷ ಪ್ರಯತ್ನಿಸಿದೆ ಎಂದು ಆರೋಪಿಸಿರುವ ಜೈರಾಮ್ ರಮೇಶ್, ಕ್ಷೇತ್ರ ಮರುವಿಂಗಡಣೆಯ ಸೂತ್ರವನ್ನು ಬಹಿರಂಗಪಡಿಸುವಂತೆ ಕೇಂದ್ರವನ್ನು ಆಗ್ರಹಿಸಿದ್ದಾರೆ. ಮೋದಿ ಮತ್ತು ಅಮಿತ್ ಶಾ ವಿರುದ್ಧ ಟೀಕಿಸಿರುವ ಅವರು, ಸಂಸತ್ತಿನ ಘನತೆಗೆ ಧಕ್ಕೆಯಾಗುತ್ತಿದೆ ಎಂದು ಆರೋಪಿಸಿದ್ದಾರೆ. ಇಬ್ಬರನ್ನು ‘GTA (Gyanesh Theft Arrangers) stars’ ಎಂದೂ ವ್ಯಂಗ್ಯವಾಡಿದ್ದಾರೆ.
ಸಿಇಸಿ ವಿಚಾರದಲ್ಲಿ ಚರ್ಚೆಗೆ ಹಿಂದೇಟು ಆರೋಪ
ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ವಿಚಾರವಾಗಿ ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಎದುರಿಸುವುದನ್ನು ಕೇಂದ್ರ ಸರ್ಕಾರ ತಪ್ಪಿಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಚಳಿಗಾಲದ ಅಧಿವೇಶನವನ್ನು ರದ್ದುಗೊಳಿಸಿ ನೇರವಾಗಿ ಬಜೆಟ್ ಅಧಿವೇಶನ ಕರೆಯುವ ಸಾಧ್ಯತೆಯಿದೆ ಎಂಬ ಅನುಮಾನವನ್ನೂ ಪಕ್ಷ ವ್ಯಕ್ತಪಡಿಸಿದೆ.
ಇದನ್ನೂ ಓದಿ: ‘ವಿಕಸಿತ ಭಾರತ’ ಆಗುವವರೆಗೂ ಕ್ಷೇತ್ರ ಮರುವಿಂಗಡಣೆ ಬೇಡ: ಮೋದಿ ಸರ್ಕಾರಕ್ಕೆ ಜೈರಾಮ್ ರಮೇಶ್ ಸವಾಲು
ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 20ರಂದು ಆರಂಭವಾಗಿ ಆಗಸ್ಟ್ 13ರಂದು ಮುಕ್ತಾಯಗೊಂಡಿತ್ತು. 25 ದಿನಗಳ ಅವಧಿಯಲ್ಲಿ 19 ಕಲಾಪಗಳು ನಡೆದಿದ್ದವು. ರಾಷ್ಟ್ರಪತಿಗಳ ಆದೇಶದ ಮೂಲಕ ಸಂಸತ್ತಿನ ಅಧಿವೇಶನವನ್ನು ಅಧಿಕೃತವಾಗಿ ಮುಕ್ತಾಯಗೊಳಿಸುವ ಪ್ರಕ್ರಿಯೆಯನ್ನು ‘ಪ್ರೊರೊಗೇಶನ್‘ ಎಂದು ಕರೆಯಲಾಗುತ್ತದೆ.
ಇದನ್ನೂ ನೋಡಿ: ಎಸ್ಐಆರ್ ರದ್ದಿಗಾಗಿ, ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ ತಿರಂಗಾ ರ್ಯಾಲಿ Janashakthi Media
