ಸಂಕಷ್ಟ ಸಮಯದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುವ ಮೂಲಕ ವಿರೋಧ ಪಕ್ಷಗಳ ಮುಖಂಡರಿಗೆ ಮಹತ್ವದ ಸಂದೇಶ ನೀಡಿದೆ.
ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಮುಡಾ ಪ್ರಕರಣದಲ್ಲಿ ತನಿಖೆಗೆ ಅನುಮತಿ ನೀಡಿರುವುದರಿಂದ ಕಾಂಗ್ರೆಸ್ನಲ್ಲಿ ತಳಮಳ ಶುರುವಾಗಿದೆ. ಈ ನಡುವೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್ ಹಾಗೂ ರಣದೀಪ್ ಸುರ್ಜೆವಾಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಬೆಂಬಲ ವ್ಯಕ್ತಪಡಿಸಿದ್ದಾರೆ.
ಯಾವುದೇ ಕಾರಣಕ್ಕೂ ಎದೆಗುಂದಬೇಡಿ. ನಿಮ್ಮೊಂದಿಗೆ ನಾವಿದ್ದೇವೆ ಎಂದು ದೈರ್ಯ ಹೇಳಿದ್ದಾರೆ. ಬಿಜೆಪಿಯ ಷಡ್ಯಂತ್ರಗಳನ್ನು ನಾವು ರಾಜಕೀಯವಾಗಿ ಎದುರಿಸಲು ಸಿದ್ದತೆ ಮಾಡಿಕೊಳ್ಳಬೇಕು ಎಂದು ಸಲಹೆ ಮಾಡಿದ್ದಾರೆ ಎನ್ನಲಾಗಿದೆ.
ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುತ್ತಿದ್ದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ದೌಡಾಯಿಸಿದರು. ಅಲ್ಲದೇ ಸಿದ್ದರಾಮಯ್ಯ ಹಾಗೂ ಮುಖಂಡರ ಜೊತೆ ಮಾತುಕತೆ ನಡೆಸಿ ಬೆಂಬಲ ಸೂಚಿಸಿದರು. ಅಲ್ಲದೇ ಕರ್ನಾಟಕ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಮತ್ತು ಕೆಸಿ ವೇಣುಗೋಪಾಲ್ ಬೆಂಬಲ ವ್ಯಕ್ತಪಡಿಸಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ರಾಜ್ಯಪಾಲರ ನಿರ್ಣಯವನ್ನು ಖಂಡಿಸಿದರು.