ಬೆಂಗಳೂರು : ಎಂಎಲ್ಸಿ ಸಿಟಿ ರವಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ವರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಭಾಪತಿ ಬಸವರಾಜ ಹೊರಟ್ಟಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಸೋಮವಾರ ಮಾಧ್ಯಮಗಳ ಜತೆ ಮಾತಾಡಿದ ಬಸವರಾಜ ಹೊರಟ್ಟಿ, ಸದನದ ಸಮಯದಲ್ಲಿ ಯಾವುದೇ ಗಲಾಟೆ ನಡೆದಿಲ್ಲ. ಕಲಾಪ ಮುಗಿದ ಮೇಲೆ ಎಲ್ಲಾ ಗೊಂದಲ ಸೃಷ್ಟಿಯಾಗಿದೆ. ಇದಕ್ಕೂ ನಮಗೂ ಸಂಬಂಧವಿಲ್ಲ.
ಇದನ್ನೂ ಓದಿ : ಮಾಂಸಾಹಾರಕ್ಕೆ ಮಂಡ್ಯ ಸಮ್ಮೇಳನ ಮುನ್ನುಡಿ
ಸಿಟಿ ರವಿ ಬಂಧನಕ್ಕೂ ನಮಗೂ ಯಾವುದೇ ನೇರ ಸಂಬಂಧವಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ. ಆಡಿಯೋ ರೆಕಾರ್ಡ್ ಆಗಿಲ್ಲ ಸಾಕ್ಷಿಗಳು ಮಾತ್ರ ಇವೆ. ರೆಕಾರ್ಡ್ ಹುಡುಕಿದ್ದೇವೆ ನಮಗೆ ಆಡಿಯೋ ಸಿಕ್ಕಿಲ್ಲ. ನಾಲ್ಕು ಜನರು ಸಾಕ್ಷಿ ಹೇಳಿದ್ದಾರೆ.
ಸಿಟಿ ರವಿ ಮತ್ತು ಲಕ್ಷ್ಮೀ ಹೆಬ್ಬಾಳ ಇಬ್ಬರ ದೂರನ್ನೂ ಪಡೆದಿದ್ದೇವೆ ಎಂದು ಹೊರಟ್ಟಿ ತಿಳಿಸಿದರು. ವರ್ಷಗಳ ರಾಜಕೀಯ ಇತಿಹಾಸದಲ್ಲಿ ಇಂತಹ ಘಟನೆ ಆಗಿರಲಿಲ್ಲ .ಲಕ್ಷ್ಮೀ ಹೆಬ್ಬಾಳ್ಳರ್ ಹಾಗೂ ಸಿಟಿ ರವಿ ಅವರನ್ನು ಕರೆದು ಮಾತನಾಡಿದೆ. ಇದನ್ನು ಇಲ್ಲಿಗೆ ಮುಗಿಸೋಣ ಅಂತ ಸಲಹೆ ನೀಡಿದೆ ಎಂದು ಬಸವರಾಜ ಹೊರಟ್ಟಿ ಹೇಳಿದರು.
ಇದನ್ನೂ ನೋಡಿ : ಸದನದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಕ್ಷೇಪಾರ್ಹ ಪದಬಳಸಿದ ಸಿಟಿ ರವಿ Janashakthi Media