ಸೋಮವಾರ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ; ಮೊಬೈಲ್​ಗೆ  ಬರಲಿದೆ ಫಲಿತಾಂಶ

ಚಾಮರಾಜನಗರ:  ಕೊರೊನಾ ಭೀತಿಯಲ್ಲೂ ಯಶಸ್ವಿಯಾಗಿ ನಡೆಸಿದ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ  ಆಗಸ್ಟ್ 10ರ ಸೋಮವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟಗೊಳ್ಳಲಿದೆ. ಕೊರೊನಾ ಸೋಂಕಿನ ಭಿತಿ ಇರುವ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಫಲಿತಾಂಶ ಪ್ರಕಟಿಸುವ ಬದಲು ಈ ಬಾರಿ ವಿದ್ಯಾರ್ಥಿಗಳ ಮೊಬೈಲ್​ಗೆ ಎಸ್.ಎಂ.ಎಸ್. ಮೂಲಕ ಫಲಿತಾಂಶ ಬರಲಿದೆ.

 
ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು,  ಕೋವಿಡ್-19 ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಗುಂಪು ಗೂಡಬಾರದು ಎಂಬ ದೃಷ್ಟಿಯಿಂದ ಪ್ರತಿ ವಿದ್ಯಾರ್ಥಿಯ ಮೊ

ಬೈಲ್ ಗೆ ಫಲಿತಾಂಶ  ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ವೆಬ್​ಸೈಟ್​ನಲ್ಲೂ ಫಲಿತಾಂಶ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು.

ಈ ಬಾರಿ ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಪರೀಕ್ಷೆ ಬರೆದಿದ್ದಾರೆ. ಒಳ್ಳೆಯ ಫಲಿ

ತಾಂಶವೂ ಬರಬೇಕೆಂಬುದು ನಮ್ಮೆಲ್ಲರ ಅಪೇಕ್ಷೆಯಾಗಿದೆ. ಅನುತ್ತೀರ್ಣರಾದವರು ಯಾರು ಸಹ ನಿರಾಶರಾಗುವುದು ಬೇಡ. ಜೀವನದಲ್ಲಿ ಇದೇ ಕೊನೇ ಅಲ್ಲ. ಇದೂ ಒಂದು ಭಾಗ ಅಷ್ಟೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.

ಸೆಪ್ಟೆಂಬರ್​ನಲ್ಲಿ ಪೂರಕ ಪರೀಕ್ಷೆ ನಡೆಸಲಾಗುವುದು. ಜೂನ್, ಜುಲೈನಲ್ಲಿ ನಡೆದ ಪರೀಕ್ಷೆಯಲ್ಲಿ ಕೊರೋನಾ ಕಾರಣದಿಂದ ಸುಮಾರು 16 ಸಾವಿರ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು. ಇವರೆಲ್ಲರನ್ನು ಪೂರಕ ಪರೀಕ್ಷೆಯಲ್ಲಿ ಫ್ರೆಶ್ ಸ್ಟೂಡೆಂಟ್ ಎಂದು  ಪರಿಗಣಿಸಲಾಗುವುದು. ಅಂಕಪಟ್ಟಿಯಲ್ಲೂ ಸಹ ಅಟೆಂಪ್ಟ್ ಎಂದು ನಮೂದಿಸುವುದಿಲ್ಲ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದರು.

ಎಸ್​ಎಸ್​ಎಲ್​ಸಿ ಫಲಿತಾಂಶ ವೀಕ್ಷಿಸಲು ಈ ಲಿಂಕ್ ಕ್ಲಿಕ್ ಮಾಡಿhttp://kseeb.kar.nic.in/

Donate Janashakthi Media

Leave a Reply

Your email address will not be published. Required fields are marked *