ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಫೈನಲ್ ತಲುಪಿದರೂ ಪದಕ ವಂಚಿತರಾದ ಕುಸ್ತಿಪಟು ವಿನೇಶ್ ಪೊಗಟ್ ಸ್ವದೇಶಕ್ಕೆ ಶನಿವಾರ ಬೆಳಿಗ್ಗೆ ಮರಳಿದರು.
ವಿನೇಶ್ ಪೊಗಟ್ ಅವರಿಗೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದ್ದು, ಕುಸ್ತಿಪಟು ಭಜರಂಗ್ ಪೂನಿಯಾ ಸೇರಿದಂತೆ ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದರು.
50 ಕೆಜಿ ವಿಭಾಗದ ಫ್ರಿಸ್ಟೈಲ್ ವಿಭಾಗದಲ್ಲಿ ಫೈನಲ್ ತಲುಪಿದ್ದ ವಿನೇಶ್ ಪೊಗಟ್ 100 ಗ್ರಾಂ ತೂಕ ಹೆಚ್ಚಾಗಿದೆ ಎಂಬ ಕಾರಣಕ್ಕೆ ಫೈನಲ್ ನಿಂದ ಅನರ್ಹಗೊಂಡಿದ್ದರು. ವಿನೇಶ್ ಪೊಗಟ್ ವೈಯಕ್ತಿಕವಾಗಿ ಹಾಗೂ ಭಾರತ ಸಲ್ಲಿಸಿದ್ದ ಮೇಲ್ಮನವಿಯನ್ನು ಒಲಿಂಪಿಕ್ಸ್ ಸಮಿತಿ ವಜಾಗೊಳಿಸಿತ್ತು.