ಸ್ವಾತಂತ್ರ್ಯೋತ್ಸವ ದಿನಾಚರಣೆಯ ಕಾರ್ಯಕ್ರಮಕ್ಕೆ ಬಿಗಿ ಬಂದೋಬಸ್ತ್: ಕಮಿಷನರ್ ದಯಾನಂದ

ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ ನಡೆಯಲಿರುವ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 100ಕ್ಕೂ ಹೆಚ್ಚು ಸಿಸಿ ಟಿವಿ ಕಣ್ಗಾವಲು ಇಡಲಾಗಿದ್ದು, 2 ಬ್ಯಾಗೇಜ್ ಸ್ಕ್ಯಾನರ್ ಅಳವಡಿಕೆ ಮಾಡಲಾಗಿದೆ. ಅಂಬ್ಯುಲೆನ್ಸ್ ಮತ್ತು ವೈದ್ಯಕೀಯ  ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ ಎಂದರು.

ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಭದ್ರತೆಗೆ ಕಳೆದ 15 ದಿನಗಳಿಂದ ಕ್ರಮ ಕೈಗೊಳ್ಳಲಾಗಿದೆ. 10 ಡಿಸಿಪಿ, 17 ಎಸಿಪಿ, 42 ಇನ್ಸ್ಪೆಕ್ಟರ್ ಗಳು ಸೇರಿ 1583 ಅಧಿಕಾರಿ ಸಿಬ್ಬಂದಿ ಬಂದೋಬಸ್ತ್ ಕರ್ತವ್ಯ ಕ್ಕೆ ನಿಯೋಜಿಸಲಾಗಿದೆ ಎಂದರು.

ಸಂಚಾರ ನಿರ್ವಹಣೆಗೆ 3 ಡಿಸಿಪಿ, 6 ಎಸಿಪಿ, 19 ಸಂಚಾರ ಇನ್ ಸ್ಪೆಕ್ಟರ್, ಮೈದಾನದ ಬಂದೋಬಸ್ತ್ರ ಕರ್ತವ್ಯಕ್ಕೆ 10 ಕೆಎಸ್ ಆರ್ ಪಿ, ಸಿಎಆರ್ ತುಕಡಿ ಮತ್ತು ಕ್ಯೂ ಆರ್ ಟಿ ಟೀಮ್, ಡಿ ಸ್ವಾಟ್ ಟೀಮ್, ಗರಡು ಪೋರ್ಸ್ ಪಡೆ ನಿಯೋಜನೆ ಮಾಡಲಾಗಿದೆ ಎಂದು ಅವರು ವಿವರಿಸಿದರು.

ವಾಹನ ನಿಲುಗಡೆ ನಿಷಿದ್ಧ ರಸ್ತೆಗಳು

  1. ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆವೃತ್ತದಿಂದ ಶಿವಾಜಿನಗರ ಬಸ್ ನಿಲ್ದಾಣದವರೆಗೆ.
  2. ಕಬ್ಬನ್ರಸ್ತೆ, ಸಿ.ಟಿ.ಓ. ವೃತ್ತದಿಂದಕೆ.ಆರ್.ರಸ್ತೆ & ಕಬ್ಬನ್ರಸ್ತೆ ಜಂಕ್ಷನ್ ವರೆಗೆ.
  3. ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆ ವೃತ್ತ ದಿಂದ ಕ್ಲೀನ್ಸ್ ವೃತ್ತದವರೆಗೆ.

ಬೆಂಗಳೂರು ಸಂಚಾರ ಪೊಲೀಸರಿಂದ ವಿಶೇಷ ಮನವಿ.

  1. ಮಾಣಿಕ್ ಷಾ ಪರೇಡ್ ಮೈದಾನ ಹಾಗೂ ಸುತ್ತಮುತ್ತ ವಾಹನಗಳ ನಿಲುಗಡೆಗೆ ಸ್ಥಳಾವಕಾಶ ಕೊರತೆ ಇರುವುದರಿಂದ ಹಾಗೂ ಸಂಚಾರ ದಟ್ಟಣೆಯನ್ನು ಕಡಿಮೆಮಾಡಲು ಸಾರ್ವಜನಿಕರು, ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮತ್ತು ಮೆಟ್ರೋ ಸೇವೆಯನ್ನು ಬಳಸಿ
  2. ಯಾವುದೇ ಸಹಾಯಕ್ಕಾಗಿ ಪೊಲೀಸರು ಸದಾ ನಿಮ್ಮೊಂದಿಗಿರುತ್ತಾರೆ. ದಯವಿಟ್ಟು ಸ್ಥಳದಲ್ಲಿರುವ ಪೊಲೀಸರನ್ನು ಸಂಪರ್ಕಿಸಿ ಅಥವಾ-112ಗೆ ಕರೆಮಾಡಿ.
  3. ಸ್ವಾತಂತ್ರೋತ್ಸವ ದಿನಾಚರಣೆ ಸಂಭ್ರಮಾಚರಣೆಯನ್ನು ಯಶಸ್ವಿಗೊಳಿಸಲು ತಮ್ಮ ಸಹಕಾರ ನೀಡಿ
  4. ಬಿಬಿಎಂಪಿ ವ್ಯವಸ್ಥೆ ಮಾಡಿದ ಕುಡಿಯುವ ನೀರು ಮತ್ತು ಶೌಚಾಲಯಗಳನ್ನು ಸದುಪಯೋಗ ಪಡಿಸಿಕೊಳ್ಳಿ
  5. ಕವಾಯತು ಆಗಮಿಸುವವರಿಗೆ ವೀಕ್ಷಣೆಗೆ ನಿರ್ಬಂಧವಿರುವುದನ್ನು ಗಮನಿಸಿ ಸಹಕರಿಸಿ. ಮುಂತಾದ ಸೆಲ್ಫಿ ಮೊಬೈಲ್ ಬಳಕೆಗೆ ನಿಷೇಧ

ಮಾಣಿಕ್ ಷಾ ಮೈದಾನಕ್ಕೆ ನಿಷೇಧ ವಸ್ತು

ಹರಿತವಾದ ವಸ್ತು ಹಾಗೂ ಚಾಕು-ಚೂರಿಗಳು

ಸಿಗರೇಟ್, ಬೆಂಕಿ ಪೆಟ್ಟಿಗೆ, ಕರಪತ್ರಗಳು , ಕಪ್ಪು ಕರವಸ್ತ್ರಗಳು, ಬಣ್ಣದ ದ್ರಾವಣಗಳು ,

ತಿಂಡಿ, ತಿನಿಸುಗಳು., ವಿಡಿಯೋ ಮತ್ತು ಸ್ಟಿಲ್ ಕ್ಯಾಮರಾಗಳು. ಮದ್ಯದ ಬಾಟಲ್ಗಳು/ಮಾದಕ ವಸ್ತುಗಳ,

ನೀರಿನ ಬಾಟಲ್ಗಳು ಹಾಗೂ ಕ್ಯಾನ್ಗಳು, ಕೊಡೆ (ಛತ್ರಿ) ಶಸ್ತ್ರಾಸ್ತ್ರಗಳು

ಪಟಾಕಿ ಮತ್ತು ಸ್ಫೋಟಕ ವಸ್ತುಗಳು.

Donate Janashakthi Media

Leave a Reply

Your email address will not be published. Required fields are marked *