ಮಂಡ್ಯ: ರಾಜ್ಯದಲ್ಲಿ ಮಹಿಳೆಯರ ಸಬಲೀಕರಣಕ್ಕೆ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಗ್ಯಾರಂಟಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಈಗಾಗಲೇ 1.3 ಲಕ್ಷ ಕೋಟಿ ರೂ. ಕ್ಕಿಂತ ಹೆಚ್ಚು ಹಣವನ್ನು ವಿತರಿಸಲಾಗಿದೆ ಎಂದು ಏಪ್ರಿಲ್ 8ರಂದು ಜಿಲ್ಲಾಡಳಿತ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ 2026 ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವರು ಮಾತನಾಡಿದ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು.
ಇದೇ ವೇಳೆ ಸಮಾಜದಲ್ಲಿ ಮಹಿಳೆಯರ ಪಾತ್ರದ ಮಹತ್ವವನ್ನು ಒತ್ತಿಹೇಳಿದ ಅವರು, ಸ್ವಾತಂತ್ರ್ಯಕ್ಕೂ ಮುನ್ನವೇ ಮಹಿಳೆಯರಿಗೆ ಪ್ರತಿನಿಧಿತ್ವ ಮತ್ತು ಮನ್ನಣೆ ದೊರಕಿತ್ತು.. “ಹೆಣ್ಣು ಮಗು ಶಿಕ್ಷಣ ಪಡೆದರೆ ಒಂದು ಶಾಲೆ ತೆರೆದಂತೆಯೇ” ಎಂಬ ಸಂದೇಶದಡಿ ಮಹಿಳಾ ಶಿಕ್ಷಣಕ್ಕೆ ಸರ್ಕಾರ ವಿಶೇಷ ಒತ್ತು ನೀಡುತ್ತಿದೆ. ಶಿಕ್ಷಕರ ನೇಮಕಾತಿಯಲ್ಲಿ ಶೇ.50ರಷ್ಟು ಮೀಸಲಾತಿ ನೀಡಲಾಗಿದೆ. ಜೊತೆಗೆ ಜಿಲಾ ಪಂಚಾಯತ್ ಮತ್ತು ಗ್ರಾಮ ಪಂಚಾಯತ್ ಚುನಾವಣೆಯಲ್ಲೂ ಮಹಿಳೆಯರಿಗೆ ಮೀಸಲಾತಿ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ: ಯುಡಿಎಫ್ ಅಭ್ಯರ್ಥಿಯ ವಿರುದ್ಧ ಪ್ರಕರಣ ದಾಖಲು
ಇನ್ನೂ ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆಯಲ್ಲಿಯೂ ಮಹಿಳೆಯರಿಗೆ ಮೀಸಲಾತಿ ನೀಡುವ ದಿನ ದೂರವಿಲ್ಲ. ಎಂದೂ ಇದೇ ವೇಳೆ ಹೇಳಿದರು.
ಬಳಿಕ ಮಹಿಳೆಯರ ಶಿಕ್ಷಣ ಮತ್ತು ಆರ್ಥಿಕ ಸಬಲೀಕರಣದ ಅಗತ್ಯವನ್ನು ಒತ್ತಿ ಹೇಳಿದ ಅವರು, ರಾಷ್ಟ್ರ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.
ಇದಲ್ಲದೆ, ಎನ್ಆರ್ಎಲ್ಎಂ ಯೋಜನೆಯಡಿ ಮಂಡ್ಯ ಜಿಲ್ಲೆಯಲ್ಲಿ ಮಹಿಳೆಯರು ತಯಾರಿಸುವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವರು ಘೋಷಿಸಿದರು.
ಈ ಸಂದರ್ಭದಲ್ಲಿ ಶಾಸಕ ಪಿ. ರವಿಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಮಹಿಳೆಯರಿಗೆ ಸಣ್ಣ ಕೈಗಾರಿಕೆಗಳನ್ನು ಉತ್ತೇಜಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಸಣ್ಣ ಕೈಗಾರಿಕೆಗಳ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್ ಅವರು ಮಾತನಾಡಿ, ಗಾರ್ಮೆಂಟ್ ಘಟಕಗಳನ್ನು ಸ್ಥಾಪಿಸುವುದರ ಕುರಿತಂತೆಯೂ ಚರ್ಚೆ ನಡಯುತ್ತಿದೆ ಎಂದು ತಿಳಿಸಿದರು.
ಇದನ್ನೂ ನೋಡಿ: ಜನಾರೋಗ್ಯದಲ್ಲಿ ಕೇರಳ ಮಾದರಿ – ಪ್ರಸನ್ನ ಸಾಲಿಗ್ರಾಮ, ಕೆ.ಎಸ್. ವಿಮಲಾ ಮಾತುಕತೆ Janashakthi Media
