ಬೆಂಗಳೂರು: ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸಾಧನೆಯಾಗಿ, ಕರ್ನಾಟಕಕ್ಕೆ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಿಗೆ ಒಟ್ಟು 1,122 ಹೆಚ್ಚುವರಿ ವೈದ್ಯಕೀಯ ಸೀಟುಗಳು ಲಭ್ಯವಾಗಿವೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಕರ್ನಾಟಕ
ಶನಿವಾರ ವಿಕಾಸ ಸೌಧದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಅವರು, ಮೇ 15ರಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಈ ಸೀಟುಗಳಿಗೆ ಅಂತಿಮ ಅನುಮೋದನೆ ನೀಡಿದೆ ಎಂದು ಹೇಳಿದರು.
ಇದನ್ನೂ ಓದಿ: ‘ನಾವು ತುಸಿಡೈಡ್ಸ್ ಬೋನಿನಿಂದ ತಪ್ಪಿಸಿಕೊಳ್ಳಬಲ್ಲೆವೇ?’ – ಟ್ರಂಪ್ ಗೆ ಶಿ ಪ್ರಶ್ನೆಯ ಅರ್ಥವೇನು?
ಪದವಿ ವೈದ್ಯಕೀಯ ಸೀಟುಗಳಿಗೆ ಕೇಂದ್ರ ಸರ್ಕಾರ ರೂ.495 ಕೋಟಿ ಮತ್ತು ಸ್ನಾತಕೋತ್ತರ ಸೀಟುಗಳಿಗೆ ರೂ.541 ಕೋಟಿ ಅನುದಾನ ನೀಡಲಿದ್ದು, ಒಟ್ಟು ರೂ.1,090 ಕೋಟಿ ಆರ್ಥಿಕ ಸಹಾಯ ದೊರೆಯಲಿದೆ ಎಂದು ಅವರು ವಿವರಿಸಿದರು.
ಒಂದು ರಾಜ್ಯಕ್ಕೆ 1,000 ಕ್ಕೂ ಹೆಚ್ಚು ಸೀಟುಗಳನ್ನು ಮಂಜೂರು ಮಾಡಿರುವುದು ದಾಖಲೆ ಸಾಧನೆಯಾಗಿದೆ ಎಂದು ಸಚಿವರು ಹೇಳಿದರು.
ಈ ಹೆಚ್ಚುವರಿ ಸೀಟುಗಳಿಂದ ಕೊಪ್ಪಳ, ಗದಗ, ಚಾಮರಾಜನಗರ, ಕಾರವಾರ ಹಾಗೂ ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಿಗೆ ಪ್ರಯೋಜನವಾಗಲಿದ್ದು, ರಾಜ್ಯದಾದ್ಯಂತ ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಇದನ್ನೂ ನೋಡಿ: ಪಿಚ್ಚರ್ ಪಯಣ – 172 | ‘ಪ್ಯಾಲೆಸ್ಟೀನ್ 36’ – ಮೊದಲ ರಾಷ್ಟ್ರೀಯ ದಂಗೆಯ ಚಾರಿತ್ರಿಕ ಫಿಲಂ | ಎನ್ ಕೆ. ವಸಂತರಾಜ್
