ಇನಾಂವೀರಾಪುರ ಮಾನ್ಯ ಹತ್ಯೆ ಪ್ರಕರಣದಲ್ಲಿ ಗಾಯಗೊಂಡಿದ್ದ ವಿವೇಕಾನಂದ ದೊಡ್ಡಮನಿ ಕುಟುಂಬಕ್ಕೆ ₹5 ಲಕ್ಷ ಚೆಕ್ ವಿತರಿಸಿದ ಡಿಸಿ

ಹುಬ್ಬಳ್ಳಿ: ಇನಾಂವೀರಾಪುರ ಗ್ರಾಮದಲ್ಲಿ ಇತ್ತೀಚೆಗೆ  ನಡೆದ ಗರ್ಭಿಣಿ ಮಾನ್ಯ ಹತ್ಯೆ ಹಾಗೂ ದೌರ್ಜನ್ಯ ಪ್ರಕರಣದಲ್ಲಿ ಗಾಯಗೊಂಡಿದ್ದ ವಿವೇಕಾನಂದ ದೊಡ್ಡಮನಿ ಅವರ ಕುಟುಂಬಸ್ಥರಿಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ಮಂಗಳವಾರ 5 ಲಕ್ಷ ರೂ. ಚೆಕ್ ವಿತರಣೆ ಮಾಡಿದರು.

ದೇಶಪಾಂಡೆ ನಗರದಲ್ಲಿರುವ ವಿವೇಕಾನಂದ ಆಸ್ಪತ್ರಗೆ ದಾಖಲಾಗಿರುವ ಅವರ ಆರೋಗ್ಯ ಹಾಗೂ ಚಿಕಿತ್ಸೆ ಕುರಿತು ಜಿಲ್ಲಾಧಿಕಾರಿ ವೈದ್ಯರಿಂದ ಮಾಹಿತಿ ಪಡೆದುಕೊಂಡರು. ಪ್ರಕರಣದಲ್ಲಿ ಮರೇಪ್ಪ ದೊಡ್ಡಮನಿ, ಸುನೀಲ್ ಹರಿಜನ, ಸಂಗೀತಾ ಹರಿಜನ, ರೇಣವ್ವ, ಅನನ್ಯಾ ದೊಡ್ಡಮನಿ, ಯಲ್ಲಪ್ಪ ದೊಡ್ಡಮನಿ, ಹೂವಮ್ಮ ದೊಡ್ಡಮನಿ ಹಾಗೂ ವಿವೇಕಾನಂದ ದೊಡ್ಡಮನಿ ಅವರು ಗಾಯಗೊಂಡಿದ್ದರು.

ಇದನ್ನೂ ಓದಿ : ಹುಬ್ಬಳ್ಳಿ | ಮರ್ಯಾದೆಗೇಡು ಹತ್ಯೆ: ಸಿಪಿಐ(ಎಂ) ನಿಯೋಗ ಭೇಟಿ ಕುಟುಂಬಕ್ಕೆ ಸಾಂತ್ವನ : ಕಠಿಣ ಶಿಕ್ಷೆಗೆ ಆಗ್ರಹ

ಈ ಸಂದರ್ಭದಲ್ಲಿ ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ್​ ಜೆ.ಬಿ.ಮಜ್ಜಗಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಶುಭಾ ಪಿ., ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಪ್ರಿಯದರ್ಶಿನಿ ಹಿರೇಮಠ, ಆಸ್ಪತ್ರೆಯ ವೈದ್ಯರು, ಕುಟುಂಬಸ್ಥರು ಇತರರು ಹಾಜರಿದ್ದರು.

DC DISTRIBUTES 5 LAKH CHEQUE TO VIVEKANANDA DODDAMANI FAMILY
ಮಾನ್ಯಳ ಗಂಡ ವಿವೇಕಾನಂದ ನೀಡಿದ ದೂರಿನ ಅನ್ವಯ ಪ್ರಮುಖ ಆರೋಪಿಗಳು ಸೇರಿದಂತೆ 15 ಮಂದಿ ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಯುವತಿಯ ತಂದೆ ಪ್ರಕಾಶ ಗೌಡ ಸೇರಿ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು.

ಈ ಮದುವೆಗೆ ಮೇಲ್ವರ್ಗಕ್ಕೆ ಸೇರಿದ ಯುವತಿಯ ಮನೆಯವರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆದರೆ, ಪೊಲೀಸರ ಸಮ್ಮುಖದಲ್ಲಿ ನಡೆದ ರಾಜಿ ಪಂಚಾಯಿತಿಯ ಬಳಿಕ ಏಳು ತಿಂಗಳ ಹಿಂದೆ ಇಬ್ಬರೂ ವಿವಾಹವಾಗಿದ್ದರು. ಮಾನ್ಯ ಪಾಟೀಲ ಇನಾಂವೀರಾಪುರ ಗ್ರಾಮದ ದಲಿತ ಸಮುದಾಯದ ಯುವಕ ವಿವೇಕಾನಂದ ದೊಡ್ಡಮನಿ ಎಂಬಾತನನ್ನು ಪ್ರೀತಿಸಿದ್ದಳು. ನಂತರ ಪ್ರಾಣ ಭಯದಿಂದ ಹಾವೇರಿ ಜಿಲ್ಲೆಯಲ್ಲಿ ನೆಲೆಸಿದ್ದ ದಂಪತಿ, ಡಿಸೆಂಬರ್​​ 8ರಂದು ಊರಿಗೆ ಮರಳಿದ್ದರು. ಆದರೆ, ವೈರತ್ವದ ಕಿಚ್ಚು ಹಚ್ಚಿಕೊಂಡಿದ್ದ ಯುವತಿಯ ತಂದೆ, ಇತರರು ಭಾನುವಾರ ಸಂಜೆ ವಿವೇಕಾನಂದನ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಭೀಕರ ದಾಳಿ ನಡೆಸಿದ್ದರು.

ದಾಳಿ ಸಂದರ್ಭದಲ್ಲಿ ಮಾನ್ಯಳನ್ನು ರಕ್ಷಿಸಲು ಬಂದ ವಿವೇಕಾನಂದನ ಮನೆಯವರ ಮೇಲೂ ಮನಬಂದಂತೆ ತೀವ್ರ ಹಲ್ಲೆ ನಡೆಸಲಾಗಿತ್ತು. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಗರ್ಭಿಣಿ ಮಾನ್ಯ ಚಿಕಿತ್ಸೆ ಫಲಿಸದೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

ಇದನ್ನೂ ನೋಡಿ : ಹಾವೇರಿ | ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್‌ ವಿದ್ಯಾರ್ಥಿನಿಯರು ಅಸ್ವಸ್ಥ Janashakthi Media

 

Donate Janashakthi Media