ಅರಣ್ಯದಿಂದ 1 ಕಿ.ಮೀ ವ್ಯಾಪ್ತಿಯಲ್ಲಿ ಮನೆ,ಕಟ್ಟಡ ನಿರ್ಮಿಸಲು ಅವಕಾಶ| ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡ ಒಂದು ಕಿ.ಮೀ ವ್ಯಾಪ್ತಿಯಲ್ಲಿ ಮನೆ, ಕಟ್ಟಡಗಳು ನಿರ್ಮಿಸಲು ಇದ್ದ ನಿರ್ಬಂಧವನ್ನು ಸರ್ಕಾರ ಸಡಿಲಿಸಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. 

ಅರಣ್ಯ ಸಚಿವ ಈಶ್ವರ ಖಂಡ್ರೆ ಅಧ್ಯಕ್ಷತೆಯಲ್ಲಿ ಬುಧುವಾರ (ಅಕ್ಟೋಬರ್-11) ನಡೆದ ಸಂಪುಟ ಉಪಸಮಿತಿ ಸಭೆಯಲ್ಲಿ ಮನೆ, ಕಟ್ಟಡಗಳ ನಿರ್ಮಾಣದ ಮೇಲಿನ ನಿರ್ಬಂಧಗಳ ಸಡಿಲಿಕೆ ಬಗ್ಗೆ ಕ್ರಮ ತೆಗೆದುಕೊಳ್ಳಲಾಗಿದೆ. 

ಇದನ್ನೂ ಓದಿ:ಅರಣ್ಯ ಪ್ರದೇಶದ ವಿಸ್ತರಣೆಯಾದಾಗ ಮಾತ್ರ ಹವಾಮಾನ ವೈಪರೀತ್ಯಗಳನ್ನು ತಡೆಯಲು ಸಾಧ್ಯ:ಸಿಎಂ ಸಿದ್ದರಾಮಯ್ಯ

ಸಂಪುಟ ಉಪಸಮಿತಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈವರೆಗೆ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡ ಒಂದು ಕಿ.ಮೀ ವ್ಯಾಪ್ತಿಯಲ್ಲಿ  ಮನೆ, ಕಟ್ಟಡಗಳನ್ನು ನಿರ್ಮಿಸಲು ಅನುಮತಿ ಇರಲಿಲ್ಲ. ಈ ವ್ಯಾಪ್ತಿಯಲ್ಲಿರುವ  ಖಾಸಗಿ ಭೂಮಿಯಲ್ಲಿ ಫಾರಂ ಹೌಸ್, ರೆಸಾರ್ಟ್‌, ಸಾ ಮಿಲ್‌, ಪವನ ವಿದ್ಯುತ್‌ ಘಟಕಗಳನ್ನು ನಿರ್ಮಾಣ ಮಾಡಬಹುದು. ಅದಕ್ಕೆ ಅನುಮತಿ ದೊರೆಯಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಸುಮಾರು 35  ಪ್ರದೇಶಗಳನ್ನು ಗುರುತಿಸಲಾಗಿದ್ದು, ಈ ಪೈಕಿ 29 ಪ್ರದೇಶಗಳಲ್ಲಿ ಇಂತಹ ಚಟುವಟಿಕೆಗಳಿಗೆ ಅನುಮತಿ ನೀಡಲು ಸಹಮತ ವ್ಯಕ್ತವಾಗಿತ್ತು. ನಾಗರಹೊಳೆ ಸೇರಿ ಇನ್ನೂ 6 ಪ್ರದೇಶಗಳಲ್ಲಿ ಈ ನಿಯಮಗಳನ್ನು ಸಡಿಲಿಸುವ ಕುರಿತು ಸಹಮತ ವ್ಯಕ್ತವಾಗಿದೆ ಎಂದು ಸಚಿವರು ಹೇಳಿದರು.

ವಿಡಿಯೋ ನೋಡಿ:ಅಕ್ರಮವಾಗಿ ರೈತರ ಕೃಷಿ ಭೂಮಿ ವಶಪಡಿಸಿಕೊಳ್ಳುತ್ತಿರುವ ನೈಸ್‌ ಕಂಪನಿವಿರುದ್ಧ ಗುಡುಗಿದ ರೈತರು Janashakthi Media

Donate Janashakthi Media

Leave a Reply

Your email address will not be published. Required fields are marked *