ನವದೆಹಲಿ : ‘ರೀಮಲ್’ ಚಂಡಮಾರುತ ಹಿನ್ನಲೆಯಲ್ಲಿ ಪಶ್ಚಿಮ ಬಂಗಾಳ ಕರಾವಳಿಯಲ್ಲಿ 1 ಲಕ್ಷ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.
ಚಂಡಮಾರುತ ತೀವ್ರ ಸ್ವರೂಪ ಪಡೆಯುತ್ತಿದ್ದು, ಇಂದು ಮಧ್ಯರಾತ್ರಿ ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಕರಾವಳಿಯಲ್ಲಿ 1 ಲಕ್ಷ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ನೆರೆಯ ಬಾಂಗ್ಲಾದೇಶವು ಸಹ ಕರಾವಳಿಯ ಸತ್ಕೀರ ಮತ್ತು ಕಾಕ್ಸ್ ಬಜಾರ್ ಜಿಲ್ಲೆಗಳಿಂದ 8 ಲಕ್ಷ ಜನರನ್ನು ಸ್ಥಳಾಂತರಿಸಿದೆ.
ಇದನ್ನು ಓದಿ : ಪೂರ್ವ ದೆಹಲಿಯ ನ್ಯೂ ಬಾರ್ನ್ ಬೇಬಿ ಕೇರ್ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ
‘ರೀಮಲ್’ ತೀವ್ರ ಸ್ವರೂಪ ಪಡೆಯುತ್ತಿದ್ದು, ಅಸ್ಸಾಂನಲ್ಲಿ ಭಾರಿ ಮಳೆಯಾಗುವ ಸಂಭವವಿದೆ. ಈ ಹಿನ್ನೆಲೆ 7 ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಹಾಗೂ 11 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.
ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಭಾರಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಕೆಲವೆಡೆ ಈಗಾಗಲೇ ಮಳೆ ಆರಂಭವಾಗಿದೆ. 100 ರಿಂದ 110 ಕಿ.ಮೀ ವೇಗದಲ್ಲಿ ಚಂಡಮಾರುತ ಬೀಸುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖಾಧಿಕಾರಿಗಳು ತಿಳಿಸಿದ್ದಾರೆ.
ಇದನ್ನು ನೋಡಿ : “ಸಂವಿಧಾನ ಭಾರತ- ಧರ್ಮಕಾರಣ”ಎಂಬ ಆಶಯವಾಕ್ಯದೊಂದಿಗೆ ಮೇ ಸಹಿತ್ಯ ಮೇಳಕ್ಕೆ ಚಾಲನೆ Janashakthi Media