ಚಿಕ್ಕಬಳ್ಳಾಪುರ: ಆರ್.ಟಿ.ಒ ಅಧಿಕಾರಿಗಳು ತೆರಿಗೆ ಕಟ್ಟದೇ ರಾಜ್ಯದಲ್ಲಿ ಸಂಚರಿಸುತ್ತಿದ್ದ 10ಕ್ಕೂ ಹೆಚ್ಚು ಐಷಾರಾಮಿ ಖಾಸಗಿ ಬಸ್ ಗಳನ್ನು ಜಪ್ತಿ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 44ರ ಚಿಕ್ಕಬಳ್ಳಾಪುರದ ಬಳಿ ಕಾರ್ಯಾಚರಣೆ ನಡೆಸಿದ ಆರ್.ಟಿ.ಒ ಅಧಿಕಾರಿಗಳು 10ಕ್ಕೂ ಹೆಚ್ಚು ಖಾಸಗಿ ಬಸ್ ಗಳನ್ನು ಸೀಜ್ ಮಾಡಿದ್ದಾರೆ.
ಇದನ್ನೂ ಓದಿ: ಕೇರಳ | ಸ್ಥಳೀಯ ಸಂಸ್ಥೆ ಚುನಾವಣೆ : ಕುಟುಂಬದ ಮೂರು ಸಹೋದರಿಯರು ಸ್ಪರ್ದೆ
ಹೈದರಾಬಾದ್ ಸೇರಿದಂತೆ ವಿವಿಧೆಡೆಗಳಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಯಾಣಿಕರಿಗೆ ಬೇರೆ ವ್ಯವಸ್ಥೆ ಮಾಡಲಾಗಿದೆ. ನಾಗಾಲ್ಯಾಂಡ್, ಅರುಣಾಚಲಪ್ರದೇಶ ಸೇರಿ ಬೇರೆ ಬೇರೆ ರಾಜ್ಯಗಳ ನೋಂದಣಿ ಹೊಂದಿದ್ದ ಬಸ್ ಗಳನ್ನು ಜಪ್ತಿ ಮಾಡಲಾಗಿದೆ.
ಇದನ್ನೂ ನೋಡಿ: ನಿರಂಜನ ಜನಮುಖಿ ಬರಹಗಾರ: ಮುಕುಂದರಾಜ್ Janashakthi Media
