ಚಿತ್ರದುರ್ಗ: ನಗರದ ವಾಸವಿ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಡೆದ SSLC ಪರೀಕ್ಷೆಯ ವೇಳೆ ಅಕ್ರಮ ನಡೆದಿದ್ದು, ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿದ್ದ 10 ಶಿಕ್ಷಕರನ್ನು ಡಿಡಿಪಿಐ ಮಂಜುನಾಥ್ ಸಸ್ಪೆಂಡ್ ಮಾಡಿದ್ದಾರೆ.
ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಕ್ರಮ ಕೈಗೊಂಡಿರುವ ಡಿಡಿಪಿಐ ಮಂಜುನಾಥ್ ಹಾಗೂ ಬಿಇಓ ನಾಗಭೂಷಣ್ ಇಬ್ಬರಿಗೂ ಶೋಕಾಸ್ ನೋಟೀಸ್ ಜಾರಿಗೊಳಿಸಲಾಗಿದೆ. ಕರ್ತವ್ಯ ಲೋಪ ಎಸಗಿದ ಶಿಕ್ಷಕರಾದ ಕೆಂಚಮೂರ್ತಿ, ರೋಷನ್ ಅರಾ, ಕವಿತಾ, ಶಿವಕುಮಾರ್, ರಂಗಮ್ಮ, ವಿಜಯಲಕ್ಷ್ಮಿ, ಉಮಾಪತಿ ಸೇರಿದಂತೆ ಹತ್ತು ಮಂದಿಯನ್ನು ಅಮಾನತುಗೊಳಿಸಲಾಗಿದೆ.
ಈ ಅಕ್ರಮದಲ್ಲಿ ರಶ್ಮಿ ಎಂಬ ಅಪರಿಚಿತ ಮಹಿಳೆಯೂ ಭಾಗಿಯಾಗಿದ್ದು, ಸಿಸಿಟಿವಿ ದೃಶ್ಯಗಳಲ್ಲಿ ಆಕೆಯ ಅಕ್ರಮ ಚಟುವಟಿಕೆಗಳು ದೃಢಪಟ್ಟಿವೆ. ಈ ಬಗ್ಗೆ ಬಿಇಓ ನಾಗಭೂಷಣ್ ಅವರು ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ: ಶಾಲಾರಂಭದ ದಿನವೇ ಸೈಕಲ್ ವಿತರಣೆ
ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಪ್ರತಿಕ್ರಿಯೆ
ವಾಸವಿ ಪ್ರೌಢಶಾಲೆಯಲ್ಲಿ ನಡೆದ SSLC ಪರೀಕ್ಷೆಯ ವೇಳೆ ಸಾಮೂಹಿಕ ಕಾಪಿ ಮಾಡಲಾಗಿದೆ ಎಂಬ ಮಾಹಿತಿ ದೊರೆತಿತ್ತು. ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದಾಗ, ಅನಧಿಕೃತ ಮಹಿಳೆಯೊಬ್ಬರು ಕೆಲವು ಪರೀಕ್ಷಾ ಕೊಠಡಿಗಳಿಗೆ ಭೇಟಿ ನೀಡಿದ್ದು ಕಂಡುಬಂದಿದೆ.
ಈ ಆಧಾರದ ಮೇಲೆ 10 ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ಬಿಇಓ ಮತ್ತು ಡಿಡಿಪಿಐ ಇಬ್ಬರಿಗೂ ಶೋಕಾಸ್ ನೋಟೀಸ್ ನೀಡಲಾಗಿದೆ. ಜೊತೆಗೆ, ಸೆಂಟ್ರಲ್ ಚೀಫ್ ಸೂಪರಿಂಟೆಂಡೆಂಟ್ ಹಾಗೂ ಅಪರಿಚಿತ ಮಹಿಳೆ ವಿರುದ್ಧ ದೂರು ದಾಖಲಿಸಲಾಗಿದೆ. ಈ ಎಲ್ಲಾ ಮಾಹಿತಿಯನ್ನು ಒಳಗೊಂಡ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ.
ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.
ಇದನ್ನೂ ನೋಡಿ: ಪಹಲ್ಗಾಂಮ್ ಹತ್ಯಾಕಾಂಡ| ಕುಟುಂಬದವರನ್ನು ಕಳೆದುಕೊಂಡವರ ಪ್ರಶ್ನೆಗಳಿಗೆ ಉತ್ತರಿಸುವಿರಾ? Janashakthi Media