ಅಮರಾವತಿ: ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಕಲ್ಲು ಗಣಿಯಲ್ಲಿ ಸಂಭವಿಸಿದ ಸ್ಫೋಟದಿಂದ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, ಇಬ್ಬರಿಗೆ ತುಂಬಾ ಗಂಭೀರದ ಗಾಯಗಳಾಗಿವೆ. ಇಂದು ನಡೆದ ಈ ಘಟನೆಯು ಕಡಪದ ಮಾಮಿಲ್ಲಪಲ್ಲೆ ಗ್ರಾಮದ ಸಮೀಪ ಸಂಭವಿಸಿದೆ ಎಂದು ತಿಳಿದುಬಂದಿದೆ. ಜಿಲೆಟಿನ್ ಕಡ್ಡಿಗಳನ್ನು ಶೇಖರಿಸುವ ಸಂದರ್ಭದಲ್ಲಿ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಇದನ್ನು ಓದಿ: ಅಸ್ಸಾಂ: ಮುಖ್ಯಮಂತ್ರಿ ಆಯ್ಕೆಯಲ್ಲಿ ಬಿಕ್ಕಟ್ಟು, ದೆಹಲಿ ತಲುಪಿದ ಬಿಜೆಪಿ ನಾಯಕರು
ಸ್ಥಳದಲ್ಲಿ ಗಣಿಗಾರಿಕೆ ಕಾಮಗಾರಿಗಳು ಚಾಲ್ತಿದ್ದು ಕಾರ್ಮಿಕರು ಕಲ್ಲುಗಳನ್ನು ಸ್ಪೋಟಗೊಳಿಸಲು ತಯಾರಿಗಳ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು ಕಾರ್ಮಿಕರು ರಂಧ್ರಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದರು ಎಂಬುದು ತಿಳಿದು ಬಂದಿದೆ.
ಕಡಪ ಪೊಲೀಸ್ ಅಧಿಕಾರಿ ಕೆ.ಎ. ಅನ್ಬುರಾಜನ್ ಅವರು ಅನುಮತಿ ಪಡೆದುಕೊಂಡೇ ಗಣಿಗಾರಿಕೆ ನಡೆಸಲಾಗುತ್ತಿತ್ತು. ಜಿಲೆಟಿನ್ ಕಡ್ಡಿಗಳನ್ನು ಬುದ್ವೆಲ್ ಪ್ರದೇಶದಿಂದ ವಾಹನದಲ್ಲಿ ತರಲಾಗಿತ್ತು ಅವುಗಳನ್ನು ಸಂಗ್ರಹಿಸುವ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ ಎಂದು ಎಂದು ಹೇಳಿದ್ದಾರೆ.
ಇದನ್ನು ಓದಿ: ಮೇ 10 ರಿಂದ 24ರ ವರೆಗೆ ರಾಜ್ಯದ್ಯಂತ ಲಾಕ್‌ಡೌನ್: ಸಿಎಂ ಯಡಿಯೂರಪ್ಪ ಘೋಷಣೆ
ಸ್ಪೋಟದಲ್ಲಿ ಮೃತರಾದವರು ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಸ್ಥಳೀಯ ಗ್ರಾಮವಾದ ಪುಲಿವೆಂಡುಲ ಮೂಲದವರು ಎಂದು ಹೇಳಲಾಗುತ್ತಿದೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿಯವರು ಕಡಪ ಜಿಲ್ಲೆಯ ಅಧಿಕಾರಿಗಳೊಂದಿಗೆ ಫೋನ್ ಮೂಲಕ ಮಾತುಕತೆ ನಡೆಸಿ ಘಟನಾ ಸ್ಥಳದ ಪರಿಸ್ಥಿತಿಯನ್ನು ತಿಳಿದುಕೊಂಡಿದ್ದಾರೆ. ಅಲ್ಲದೆ, ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರ ಕುರಿತು ತೀವ್ರ ಸಂತಾಪ ಸೂಚಿಸಿದ್ದಾರೆ.