ಕೊಪ್ಪಳ: ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಪಿಎಸ್‌ಐ ನೇಮಕಾತಿಯಲ್ಲಿ ನಡೆದ ಅಕ್ರಮದ ಬಾಕಿಕ ಇದುವರೆಗೂ ಯಾವುದೇ ಪೊಲೀಸ್ ನೇಮಕಾತಿ ಆಗಿಲ್ಲ. ಸದ್ಯ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಒಂದು ಸಾವಿರ ಪಿಎಸ್‌ಐ ಹುದ್ದೆಗಳು ಖಾಲಿಯಿದ್ದು ಶೀಘ್ರದಲ್ಲೇ ನೇಮಕಾತಿ ಆರಂಭಿಸುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಜೂನ್ 22 ಭಾನುವಾರದಂದು ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಗೃಹ ಸಚಿವರು, ಪ್ರಸ್ತುತ ರಾಜ್ಯದಲ್ಲಿ 8 ಸಾವಿರ ಕಾನ್ಸ್ಟೇಬಲ್ ಹುದ್ದೆಗಳು ಖಾಲಿಯಿದ್ದು,ಈಗಾಗಲೇ 500 ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ. ಇಲಾಖೆ
ಇದನ್ನೂ ಓದಿ: 2 ವರ್ಷಗಳಿಂದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; 13 ಜನ ಆರೋಪಿ ಬಂಧನ
ಇನ್ನುಳಿದ ಬಾಕಿಯಿರುವ ಹುದ್ದೆಗಳಿಗೆ ಆದ್ಯತೆಯ ಮೇರೆಗೆ ಆದಷ್ಟು ಬೇಗ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಮತ್ತು ಹೆಚ್ಚುವರಿ ಟ್ರಾಫಿಕ್ ಪೊಲೀಸ್ ಸ್ಟೇಷನ್ ಸೇರಿದಂತೆ ಇತರೆ ವಿಚಾರಗಳ ಕುರಿತು ಮುಂದಿನ ಬಜೆಟ್ನಲ್ಲಿ ಅನುದಾನ ಮೀಸಲಿಡಲಾಗುವುದು ಎಂದಿದ್ದಾರೆ.
ಇದನ್ನೂ ನೋಡಿ: ಕೌಶಲ್ಯದ ಹೆಸರಲ್ಲಿ ಕಾರ್ಮಿಕ ಮಂಡಳಿಯ ಹಣ ವ್ಯಯ – ಕಾರ್ಮಿಕ ಸಂಘಟನೆಗಳ ಆಕ್ಷೇಪ
