ಬೆಳಗಾವಿ : ಹಿಂದುಳಿದ ಸಮುದಾಯಗಳ ಮಕ್ಕಳಿಗೆ ಹೆಚ್ಚಿನ ಹಾಸ್ಟೆಲ್‌ಗಳ ಬೇಡಿಕೆ ಇರುವುದರಿಂದ ಹೆಚ್ಚಿನ ವಿದ್ಯಾರ್ಥಿಗಳಿಗೆ ವಸತಿ ಕಲ್ಪಿಸಲು 100 ಹೊಸ ಹಾಸ್ಟೆಲ್‌ಗಳನ್ನು ತೆರೆಯಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಸಮಸ್ಯೆ ಕರ್ನಾಟಕದಾದ್ಯಂತ ಪ್ರಚಲಿತದಲ್ಲಿರುವುದರಿಂದ ಮಧ್ಯಂತರ ಪರಿಹಾರಕ್ಕೆ ಮುಂದಾಗದೆ, ಸಮಸ್ಯೆ ಬಗೆಹರಿಸಲು ದೀರ್ಘಾವಧಿ ಯೋಜನೆ ರೂಪಿಸುವಂತೆ ವಿಧಾನಸಭಾಧ್ಯಕ್ಷ ಯುಟಿ ಖಾದರ್ ಸರ್ಕಾರಕ್ಕೆ ಸೂಚಿಸಿದರು. ಸಮುದಾಯಗಳ
ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರಿಗೆ ಉತ್ತರಿಸಿದ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ, ಒಬಿಸಿ ಸಮುದಾಯದ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳದ ಹಿನ್ನೆಲೆಯಲ್ಲಿ ಈಗಿರುವ ಹಾಸ್ಟೆಲ್‌ಗಳಲ್ಲಿ ಅವರಿಗೆ ವಸತಿ ಕಲ್ಪಿಸಲು ತೊಂದರೆಯಾಗುತ್ತಿದೆ ಎಂಬುದನ್ನು ಒಪ್ಪಿಕೊಂಡರು. ಇದು ಇಲಾಖೆಯ ಗಮನಕ್ಕೂ ಬಂದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು. ಹೊಸ
ಇದನ್ನೂ ಓದಿ:ಪಿಎಚ್.ಡಿ. ಮತ್ತು ಎಂ.ಫಿಲ್. ರೀಸರ್ಚ್ ಫೆಲೋಶಿಪ್ ಆದೇಶ ಮರುಪರಿಶೀಲನೆ ಮಾಡಲು ಎಸ್‌ಎಫ್‌ಐ ಒತ್ತಾಯ
ನೂತನ ಹಾಸ್ಟೆಲ್ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಕೆ
ರಾಜ್ಯದಲ್ಲಿ ಹಾಸ್ಟೆಲ್ ಸಮಸ್ಯೆಗಳಿದ್ದು, ಬೆಂಗಳೂರು, ಮೈಸೂರು, ಧಾರವಾಡ, ಬೆಳಗಾವಿ ಸೇರಿದಂತೆ ಹಲವು ಕಡೆ ಹೆಚ್ಚಿನ ಹಾಸ್ಟೆಲ್ ನಿರ್ಮಾಣ ಮಾಡುವ ಸಂಬಂಧ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ತಂಗಡಗಿ ಅವರು ಹೇಳಿದರು.
ಹಾಸ್ಟೆಲ್ ಸೌಲಭ್ಯ ಪಡೆಯದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಿದ್ಯಾಸಿರಿ ಯೋಜನೆಗೆ ಸರ್ಕಾರ 30 ಕೋಟಿ ರೂ. ಗಳನ್ನು ಮಂಜೂರು ಮಾಡಿರುವುದರಿಂದ ಅವರಿಗೆ 10 ತಿಂಗಳಿಗೆ ಮಾಸಿಕ 1,500 ರೂ. ನೀಡಲಾಗುತ್ತದೆ. ಶೈಕ್ಷಣಿಕ ವರ್ಷ ಪ್ರಾರಂಭವಾಗುವುದರೊಂದಿಗೆ ಜೂನ್‌ನಲ್ಲಿಯೇ ಹಾಸ್ಟೆಲ್‌ಗಳನ್ನು ತೆರೆಯಲು ಚಿಂತಿಸಲಾಗಿದೆ. ಇನ್ನು ಕೊರೊನಾದಿಂದ ಶೈಕ್ಷಣಿಕ ವರ್ಷದಲ್ಲಿ ಏರುಪೇರಾಗಿದೆ. ಪದವಿ, ತಾಂತ್ರಿಕ ಹಾಗೂ ವೃತ್ತಿಪರ ವಿದ್ಯಾರ್ಥಿಗಳಿಗೆ ಬೇರೆ ತಿಂಗಳಲ್ಲಿ ಕಾಲೇಜುಗಳು ಪ್ರಾರಂಭವಾಗುತ್ತವೆ. ಇದರಿಂದ ತೊಂದರೆಯಾಗಿದ್ದು, ಸಂಬಂಧಪಟ್ಟ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದು ಸಚಿವರು ಉತ್ತರಿಸಿದರು. ಸಮುದಾಯಗಳ
30 ಸಾವಿರ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ
ಕುಂದಾನಗರಿ ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾಸಭೆ ಚಳಿಗಾಲ ಅಧಿವೇಶನದಲ್ಲಿ ವಿದ್ಯಾರ್ಥಿಗಳ ಹಾಸ್ಟೆಲ್ ವಿಚಾರ ಚರ್ಚೆಗೆ ಬಂತು. ರಾಜ್ಯದಲ್ಲಿ ಹೆಚ್ಚು ಬೇಡಿಕೆ ಇರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಸಂಖ್ಯಾಬಲವನ್ನು ಶೇ. 25ರಷ್ಟು ಹೆಚ್ಚಿಸಿ 30 ಸಾವಿರ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.
ಇದನ್ನೂ ಓದಿ:ವಸತಿ ನಿಲಯ ಕೊಠಡಿ ಕೊರತೆ ನೀಗಿಸಿ-ಸ್ಥಳವಕಾಶ ನೀಡಿ; ಉನ್ನತ ಶಿಕ್ಷಣ ವಿದ್ಯಾರ್ಥಿಗಳ ಮನವಿ
ವಿಧಾನಸಭೆಯಲ್ಲಿ ಡಿ-6 ಗುರುವಾರ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಶಾಸಕ ಬಿ ಪಿ ಹರೀಶ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇಲಾಖೆಯಲ್ಲಿ ಒಟ್ಟು 2443 ವಿದ್ಯಾರ್ಥಿ ನಿಲಯಗಳು ಕಾರ್ಯ ನಿರ್ವಹಿಸುತ್ತಿದ್ದು, ಒಟ್ಟು 2,28,411 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶದ ಸೌಲಭ್ಯ ಕಲ್ಪಿಸಲಾಗಿದೆ. ಹರಿಹರ ವಿಧಾನಸಭಾ ಕ್ಷೇತ್ರದ 9 ಹಾಸ್ಟೆಲ್ಗಳಲ್ಲಿ 745 ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲಾಗಿದೆ. ವಿದ್ಯಾರ್ಥಿನಿಲಯಗಳ ಪ್ರವೇಶ ಪ್ರಕ್ರಿಯೆ ಮುಗಿದ ಬಳಿಕ ಜಿಲ್ಲೆಯಲ್ಲಿ ಆಯಾ ತಾಲೂಕಿನ ವಿದ್ಯಾರ್ಥಿ ನಿಲಯಗಳಿಗೆ ತಾತ್ಕಾಲಿಕವಾಗಿ ಸ್ಥಾನಗಳನ್ನು ಆಂತರಿಕ ವರ್ಗಾವಣೆ ಮಾಡಿಕೊಂಡು ಹೆಚ್ಚುವರಿ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶವನ್ನು ಕಲ್ಪಿಸಲಾಗಿದೆ ಎಂದು ಹೇಳಿದರು.ಸಮುದಾಯಗಳ
ವಿದ್ಯಾರ್ಥಿ ನಿಲಯಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ, ಪ್ರವೇಶ ದೊರಕದ ಅರ್ಹ ಹಿಂದುಳಿದ ವಿದ್ಯಾರ್ಥಿಗಳಿಗೆ ಪರ್ಯಾಯವಾಗಿ ಅನುದಾನದ ಲಭ್ಯತೆಯ ಅನುಸಾರ, ವಿದ್ಯಾಸಿರಿ ಯೋಜನೆಯಡಿ ಪ್ರತಿ ವಿದ್ಯಾರ್ಥಿಗಳಿಗೆ ತಿಂಗಳಿಗೆ 1500 ರೂ. ನಂತೆ ಗರಿಷ್ಠ 10 ತಿಂಗಳಿಗೆ 15 ಸಾವಿರ ರೂ. ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಇದೇ ವೇಳೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಅವರು, ಭವಿಷ್ಯದ ದೃಷ್ಟಿಯಿಂದ ಹಾಸ್ಟೆಲ್ಗಳ ಸಂಖ್ಯೆಯನ್ನು ಹೆಚ್ಚಿಸಿ, ಪ್ರಸ್ತುತ ಸಮಸ್ಯೆಗೆ ಮಾತ್ರವಲ್ಲ. ಭವಿಷ್ಯದ ದೃಷ್ಟಿಯಿಂದ ಯೋಜನೆ ರೂಪಿಸಿ ಎಂದು ಸಲಹೆ ನೀಡಿದರು.
ವಿಡಿಯೋ ನೋಡಿ:ಮಹಾಧರಣಿ| ಸರ್ವಾಧಿಕಾರಿ ಮನೋಭಾವದ ಸರಕಾರಗಳಿಗೆ ದೇಶದ ಜನ ಪಾಠ ಕಲಿಸಿದ್ದಾರೆ – ಪ್ರೊ. ರವಿವರ್ಮಕುಮಾರ್