ಡಿಎಂಕೆ-ಎಐಎಡಿಎಂಕೆ ಮೈತ್ರಿ ಆದರೆ ರಾಜೀನಾಮೆ ಎಚ್ಚರಿಕೆ: ಟಿವಿಕೆ ಶಾಸಕರಿಂದ ಹೊಸ ರಾಜಕೀಯ ಸಂಚಲನ

ತಮಿಳುನಾಡಿನ ರಾಜಕೀಯದಲ್ಲಿ ಸರ್ಕಾರ ರಚನೆ ಕುರಿತ ಅನಿಶ್ಚಿತತೆ ನಡುವೆ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೊಸ ಎಚ್ಚರಿಕೆ ನೀಡಿದೆ. ಡಿಎಂಕೆ ಅಥವಾ ಎಐಎಡಿಎಂಕೆ ಸರ್ಕಾರ ರಚನೆಗೆ ಮುಂದಾದರೆ, ತಮ್ಮ ಪಕ್ಷದ 107 ಶಾಸಕರು ರಾಜೀನಾಮೆ ನೀಡುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ಹೇಳಿವೆ. ಡಿಎಂಕೆ

ವಿಧಾನಸಭೆ ಚುನಾವಣೆಯಲ್ಲಿ ಟಿವಿಕೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ, ಸ್ಪಷ್ಟ ಬಹುಮತಕ್ಕೆ ಅಗತ್ಯ ಸಂಖ್ಯೆಯಿಂದ ಕೆಲ ಸ್ಥಾನಗಳು ಕಡಿಮೆಯಾಗಿವೆ. ಈ ಹಿನ್ನೆಲೆ, ಸರ್ಕಾರ ರಚನೆಗೆ ವಿವಿಧ ಪಕ್ಷಗಳೊಂದಿಗೆ ಮಾತುಕತೆ ನಡೆಯುತ್ತಿದೆ ಎನ್ನಲಾಗಿದೆ. ಇದೇ ವೇಳೆ ಡಿಎಂಕೆ ಮತ್ತು ಎಐಎಡಿಎಂಕೆ ನಡುವೆ ಸಹಕಾರದ ಸಾಧ್ಯತೆಗಳ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆಗಳು ಜೋರಾಗಿವೆ.

ಇದನ್ನೂ ಓದಿ : ಕರ್ನಾಟಕದಲ್ಲಿ ಆತ್ಮಹತ್ಯೆ ಹೆಚ್ಚಳ – NCRB ವರದಿ ಡಿಎಂಕೆ

ರಾಜ್ಯಪಾಲರನ್ನು ಭೇಟಿಯಾದ ವಿಜಯ್ ಸರ್ಕಾರ ರಚನೆಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದ್ದು, ಬಹುಮತದ ಬೆಂಬಲದ ದಾಖಲೆಗಳನ್ನು ತೋರಿಸುವಂತೆ ರಾಜ್ಯಪಾಲರು ಸೂಚಿಸಿರುವುದಾಗಿ ವರದಿಯಾಗಿದೆ.

ಟಿವಿಕೆ ಪಕ್ಷದ ವಲಯದಲ್ಲಿ, “ಅತಿದೊಡ್ಡ ಪಕ್ಷಕ್ಕೆ ಮೊದಲು ಅವಕಾಶ ನೀಡಬೇಕು” ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ರಾಜಕೀಯ ಬೆಳವಣಿಗೆಗಳ ನಡುವೆ ತಮಿಳುನಾಡಿನಲ್ಲಿ ಮೈತ್ರಿ ಸಮೀಕರಣಗಳ ಚರ್ಚೆ ಮತ್ತಷ್ಟು ತೀವ್ರಗೊಂಡಿದೆ.

ಇದನ್ನೂ ನೋಡಿ : ಕರಾವಳಿ ಪ್ರವಾಸೋದ್ಯಮ : ಸ್ಥಳೀಯರ ಬದುಕು ಉಳಿಯಬೇಕೇ ಹೊರತು ಕಾರ್ಪೊರೇಟ್ ಲಾಭಕ್ಕಲ್ಲ – ಮುನೀರ್ ಕಾಟಿಪಳ್ಳ

Donate Janashakthi Media

Leave a Reply

Your email address will not be published. Required fields are marked *