11 ಸಾವಿರ ಪೌರಕಾರ್ಮಿಕರನ್ನು ಖಾಯಂಗೊಳಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಮಹಾನಗರ ಪಾಲಿಕೆ ಸೇರಿದಂತೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 11,133 ಪೌರಕಾರ್ಮಿಕರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ. ಈಗಾಗಲೇ, ಸರ್ಕಾರಿ ನೌಕರರೆಂದು ಪರಿಗಣಿಸಲು ಸಚಿವ ಸಂಪುಟ ಅನುಮೋದನೆ ನೀಡಿತು.

ಸೇವೆ ಸಲ್ಲಿಸುತ್ತಿದ್ದ 11,133 ಪೌರಕಾರ್ಮಿಕರಿಗೆ ವಿಶೇಷ ನೇಮಕಾತಿ ನಿಯಮಗಳ ಅಡಿಯಲ್ಲಿ ನೇಮಕಾತಿ ಮಾಡಿಕೊಳ್ಳುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿತ್ತು. ಹಣಕಾಸಿನ ಸಮಸ್ಯೆಗಳಿದ್ದು, ನಾವು ಎಲ್ಲವನ್ನು ಒಂದೇ ಬಾರಿಗೆ ಖಾಯಂ ಮಾಡಲು ಸಾಧ್ಯವಾಗಿಲ್ಲ. ಉಳಿದ 12,800 ಕಾರ್ಮಿಕರ ಸೇರ್ಪಡೆಗಾಗಿ ನಾವು ಕಾಯಬೇಕಾಗಿದೆ ಎಂದು  ಸಚಿವರೊಬ್ಬರು ಮಾಹಿತಿ ನೀಡಿದ್ದಾರೆ.

ಪೌರಕಾರ್ಮಿಕರನ್ನು ಸರ್ಕಾರಿ ನೌಕರ ವೇತನ ಶ್ರೇಣಿ ಅಡಿಯಲ್ಲಿ ಸೇವೆ ಸಲ್ಲಿಸುವಂತೆ ಅವಕಾಶ ಕಲ್ಪಿಸಲಾಗಿದೆ. 11,133 ಪೌರ ಕಾರ್ಮಿಕ ಖಾಯಂಯಾತಿಯಾಗಿದ್ದು ಅನೇಕ ದಿನಗಳಿಂದ ಹೋರಾಟ ಮಾಡುತ್ತಿದ್ದ ಪೌರಕಾರ್ಮಿಕರ ಹೋರಾಟಕ್ಕೆ ಸಿಕ್ಕ ಪ್ರತಿಫಲವಾಗಿದೆ.

ಬಿಬಿಎಂಪಿಯ 3673 ನೌಕರರು, ನಗರಸಭೆ, ಪುರಸಭೆಗಳಲ್ಲಿ 5533 ಮತ್ತು ಮಹಾನಗರ ಪಾಲಿಕೆಗಳಲ್ಲಿನ 1927 ಪೌರಕಾರ್ಮಿಕರು ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದಾರೆ. ಈಗ ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಇದರಿಂದ ಪೌರಕಾರ್ಮಿಕರು 17,000-28,980 ವೇತನ ಶ್ರೇಣಿ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಾರೆ.

26,000 ಪೌರಕಾರ್ಮಿಕರನ್ನು ಖಾಯಂ ಮಾಡಬೇಕೆಂದು,  ಇದರಲ್ಲಿ ಕಸಗುಡಿಸುವವರನ್ನೂ ಸೇರಿಸಬೇಕು ಎಂಬ ಬೇಡಿಕೆ ಇತ್ತು. ಇದು ಮೊದಲ ಕಂತಾಗಿದ್ದು, ಉಳಿದ 12,800 ಪೌರಕಾರ್ಮಿಕರಿಗೆ ಶೀಘ್ರದಲ್ಲೇ ಸರ್ಕಾರಿ ನೌಕಕರೆಂದು ಆದೇಶಿಸಲಾಗುವುದು ಎಂದು ಸರ್ಕಾರ ಹೇಳಿದೆ.

ಎಲ್ಲಾ 26,000 ಜನರನ್ನು ಸೇರಿಸಬೇಕೆಂದು ನಾವು ಬಯಸಿದ್ದೇವೆ. 24,000 ಕಾರ್ಮಿಕರಲ್ಲಿ ಇತರರನ್ನು ಲೋಡರ್‌ಗಳು, ಡ್ರೈವರ್‌ಗಳು ಮತ್ತು ಕ್ಲೀನರ್‌ಗಳು ಎಂದು ವರ್ಗೀಕರಿಸಲಾಗಿದೆ. ಇದನ್ನು ಪ್ರತ್ಯೇಕವಾಗಿ ವರ್ಗೀಕರಿಸಲು ಸಾಧ್ಯವಿಲ್ಲ’ ಎಂದು ಪೌರಕಾರ್ಮಿಕ ಸಮಿತಿಯ ಸದಸ್ಯ ಕ್ಲಿಪ್ಟಾನ್ ರೋಜಾರಿಯೋ ತಿಳಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *