ಬೆಂಗಳೂರು: ರಾಜ್ಯ ಸರ್ಕಾರ ಸಾರಿಗೆ ನೌಕರರ ವೇತನ ಪರಿಷ್ಕರಣೆ ಕುರಿತು ಮಹತ್ವದ ಆದೇಶ ಹೊರಡಿಸಿದ್ದು, ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿಗೆ ಮೂಲ ವೇತನದಲ್ಲಿ ಶೇ.12.5ರಷ್ಟು ಹೆಚ್ಚಳ ಮಾಡಲಾಗಿದೆ. ರಾಜ್ಯ
ಕೆಎಸ್ಆರ್ಟಿಸಿ, ಬಿಎಂಟಿಸಿ, ಎನ್ಡಬ್ಲ್ಯುಕೆಆರ್ಟಿಸಿ ಹಾಗೂ ಕೆಕೆಆರ್ಟಿಸಿ ನಿಗಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಒಟ್ಟು 1.05 ಲಕ್ಷಕ್ಕೂ ಹೆಚ್ಚು ನೌಕರರು ಈ ವೇತನ ಹೆಚ್ಚಳದಿಂದ ಪ್ರಯೋಜನ ಪಡೆಯಲಿದ್ದಾರೆ. ಪರಿಷ್ಕೃತ ವೇತನವನ್ನು 2025ರ ಏಪ್ರಿಲ್ 1ರಿಂದ ಪೂರ್ವಾನ್ವಯವಾಗಿ ಜಾರಿಗೆ ತರಲಾಗಿದೆ.
ಸಾರಿಗೆ ಇಲಾಖೆ ಅಧಿಕಾರಿಗಳ ಪ್ರಕಾರ, ನೌಕರರಿಗೆ ಬಾಕಿಯಾಗಿದ್ದ ಹಿಂಬಾಕಿ ಮೊತ್ತದ ಮೊದಲ ಕಂತನ್ನು ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ಉಳಿದ ಮೊತ್ತವನ್ನು ಹಂತ ಹಂತವಾಗಿ ಮುಂದಿನ ತಿಂಗಳುಗಳಲ್ಲಿ ಪಾವತಿಸಲಾಗುವುದು.
ಇದನ್ನೂ ಓದಿ: ಜುಲೈನಲ್ಲಿ 94% ಮಾತ್ರ ಮಳೆ ನಿರೀಕ್ಷೆ: ಐಎಂಡಿ ಮುನ್ಸೂಚನೆ
ಚಾಲಕರು, ನಿರ್ವಾಹಕರು, ತಾಂತ್ರಿಕ ವಿಭಾಗದ ಸಿಬ್ಬಂದಿ ಹಾಗೂ ಆಡಳಿತ ಸಿಬ್ಬಂದಿ ಸೇರಿದಂತೆ ಎಲ್ಲಾ ವಿಭಾಗದ ನೌಕರರಿಗೆ ಈ ಪರಿಷ್ಕರಣೆ ಅನ್ವಯವಾಗಲಿದೆ ಎಂದು ತಿಳಿಸಲಾಗಿದೆ.
ವೇತನ ಹೆಚ್ಚಳದಿಂದ ಸರ್ಕಾರಕ್ಕೆ ಪ್ರತಿ ತಿಂಗಳು ಸುಮಾರು ₹72.80 ಕೋಟಿ ಹೆಚ್ಚುವರಿ ವೆಚ್ಚವಾಗಲಿದ್ದು, ವಾರ್ಷಿಕವಾಗಿ ₹873 ಕೋಟಿ ಆರ್ಥಿಕ ಹೊರೆ ಉಂಟಾಗಲಿದೆ ಎಂದು ಅಂದಾಜಿಸಲಾಗಿದೆ.
ಮಾಜಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಈ ವೇತನ ಪರಿಷ್ಕರಣೆ ಪ್ರಕ್ರಿಯೆಗೆ ಅನುಮೋದನೆ ನೀಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ನೋಡಿ: ‘ಅರ್ಬುದನ ಡೈರಿ’ | ಕ್ಯಾನ್ಸರ್ ಪೀಡಿತರಿಗೆ ವಿಶ್ವಾಸ ತುಂಬುವ ಅನುಭವ ಕಥನ Janashakthi Media
