ಅನುಚಿತ ವರ್ತನೆ ಆರೋಪ: ಬಿಜೆಪಿಯ 12 ಶಾಸಕರ ಒಂದು ವರ್ಷದವರೆಗೆ ಅಮಾನತು

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ಕಲಾಪದ ವೇಳೆಯಲ್ಲಿ ವಿಧಾನಸಭಾ ಸಭಾಧ್ಯಕ್ಷ ಭಾಸ್ಕರ್‌ ಜಾಧವ್‌ ಅವರನ್ನು ನಿಂದನೆ ಮಾಡಿದ ಆರೋಪದಡಿಯಲ್ಲಿ ಬಿಜೆಪಿಯ 12 ಶಾಸಕರನ್ನು ಒಂದು ವರ್ಷದವರೆಗೆ ಸದನದಿಂದ ಅಮಾನತುಗೊಂಡಿದ್ದಾರೆ. ಈ ಬಗ್ಗೆ ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ಅನಿಲ್‌ ಪರಬ್ ಅವರು ಬಿಜೆಪಿ ಪಕ್ಷದ 12 ಶಾಸಕರ ಅಮಾನತುಗೊಳಿಸುವ ಬಗ್ಗೆ ನಿರ್ಣಯ ಮಂಡಿಸಿದ್ದು, ಅದನ್ನು ಧ್ವನಿಮತದಿಂದ ಅಂಗೀಕರಿಸಲಾಯಿತು.

ಈ ಪಟ್ಟಿಯಲ್ಲಿ ಸಂಜಯ್ ಕುಟೆ, ಆಶಿಶ್ ಶೆಲಾರ್, ಅಭಿಮನ್ಯು ಪವಾರ್, ಗಿರೀಶ್ ಮಹಾಜನ್, ಅತುಲ್ ಭಟ್ಕಲ್ಕರ್, ಪರಾಗ್ ಅಲವ್ನಿ, ಹರೀಶ್ ಪಿಂಪಾಲೆ, ರಾಮ್ ಸತ್ಪುಟೆ, ವಿಜಯ್ ಕುಮಾರ್ ರಾವಲ್, ಯೋಗೇಶ್ ಸಾಗರ್, ನಾರಾಯಣ್ ಕುಚೆ, ಕೀರ್ತಿಕುಮಾರ್ ಬಾಂಗ್ಡಿಯಾ ಹೆಸರು ಇದೆ.

ಅಮಾನತುಗೊಂಡಿರುವ ಶಾಸಕರು ಮುಂಬೈ ಮತ್ತು ನಾಗಪುರದ ಶಾಸಕಾಂಗ ಆವರಣ ಪ್ರವೇಶಿಸಲು ಅವಕಾಶ ಇರುವುದಿಲ್ಲ ಎಂದು ಅನಿಲ್‌ ಪರಬ್‌ ಅವರು ವಿವರಿಸಿದರು.‌ ಮಹಾರಾಷ್ಟ್ರ ವಿಧಾನಸಭೆಯ ಮುಂಗಾರು ಅಧಿವೇಶನ ಕಲಾಪದ ವೇಳೆ ಸ್ಪೀಕರ್ ಅವರ​​ನ್ನು ನಿಂದನೆ  ಮಾಡಿದ ಆರೋಪದಲ್ಲಿ ಬಿಜೆಪಿ ಪಕ್ಷದ ಶಾಸಕರನ್ನು ಒಂದು ವರ್ಷದವರೆಗೆ ಸದನವು ಅಮಾನತುಗೊಳಿಸಿದೆ.

ಎನ್‌ಸಿಪಿ ಮುಖಂಡ ಮತ್ತು ಸಚಿವ ನವಾಬ್ ಮಲಿಕ್ ಅವರು ʻʻಬಿಜೆಪಿ ಸದಸ್ಯರು ಸಭಾಧ್ಯಕ್ಷರೊಂದಿಗೆ ಕೆಟ್ಟದಾಗಿ ವರ್ತಿಸಿದ್ದರು. ಈ ವಿಚಾರವಾಗಿ ರಾಜ್ಯ ವಿಧಾನಸಭೆಯನ್ನು ನಾಲ್ಕು ಬಾರಿ ಮುಂದೂಡಲಾಯಿತುʼʼ ಎಂದು ತಿಳಿಸಿದ್ದಾರೆ.

ಪ್ರತಿಪಕ್ಷದ ನಾಯಕರು ನನ್ನ ಕಛೇರಿಗೆ ಆಗಮಿಸಿದ ದೇವೇಂದ್ರ ಫಡ್ನವೀಸ್ ಮತ್ತು ಹಿರಿಯ ನಾಯಕ ಚಂದ್ರಕಾಂತ್ ಪಾಟೀಲ್ ಅವರ ನನ್ನ ಮೇಲೆ ಅಸಂಸದೀಯ ಭಾಷೆ ಬಳಸಿ ನನ್ನನ್ನು ನಿಂದಿಸಿದ್ದಾರೆ. ಕೆಲವು ನಾಯಕರು ನನ್ನ ಮೇಲೆ ದಾಳಿ ನಡೆಸಲು ಮುಂದಾಗಿದ್ದರು ಎಂದು ಮಾಧ್ಯಮಗಳಿಗೆ ಭಾಸ್ಕರ್ ಜಾಧವ್ ತಿಳಿಸಿದರು.

ಸ್ಪೀಕರ್​​ನ್ನು ಭೇಟಿಯಾಗಲು ಹೋದ ನಾಯಕರನ್ನು ಸಹ ನಿಂದಿಸಿದ್ದಾರೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ರಾಜ್ಯದ ಸಂಸದೀಯ ವ್ಯವಹಾರಗಳ ಸಚಿವರು ಈ ವಿಷಯದ ಬಗ್ಗೆ ತನಿಖೆ ನಡೆಸುವಂತೆ ಜಾಧವ್ ಅವರು ತಿಳಿಸಿದ್ದಾರೆ.

ಸರಕಾರದ ನಿರ್ಧಾರದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ದೇವೇಂದ್ರ ಫಡ್ನವಿಸ್ ಅವರು ಇದು ಸುಳ್ಳಿನ ಆರೋಪವಾಗಿದೆ. ವಿರೋಧ ಪಕ್ಷಗಳ ಸದಸ್ಯರ ಸಂಖ್ಯೆಯನ್ನು ಕಡಿಮೆ ಮಾಡುವ ಪ್ರಯತ್ನ ಇದಾಗಿದೆ. ಏಕೆಂದರೆ, ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿ ಕೋಟಾದಲ್ಲಿ ಸರಕಾರದ ಸುಳ್ಳನ್ನು ನಾವು ಬಹಿರಂಗಪಡಿಸಿದ್ದಕ್ಕೆ ಈ ರೀತಿ ನಡೆದುಕೊಂಡಿದ್ದಾರೆʼʼ ಎಂದು ಹೇಳಿದರು.

“ಯಾವುದೇ ಬಿಜೆಪಿ ಸದಸ್ಯರು ಜಾಧವ್‌ ಅವರನ್ನು ಅವಹೇಳನ ಮಾಡಿಲ್ಲ. ನಾನು ಅವರಲ್ಲಿ ಕ್ಷಮೆಯಾಚಿಸಿದ್ದೇನೆ. ಆದರೆ, ಅದರ ಹೊರತಾಗಿಯೂ ಅವರು ಅಮಾನತುಗೊಳಿಸಿದ್ದಾರೆ. ಉದ್ಧವ್‌ ಠಾಕ್ರೆ ಸರಕಾರ ತಾಲಿಬಾನ್​​ನಂತೆ ವರ್ತಿಸುತ್ತಿದೆ. ನಾನು ಈ ಕ್ರಮವನ್ನು ಖಂಡಿಸುತ್ತೇನೆʼʼ ಎಂದು ಬಿಜೆಪಿ ಶಾಸಕ ಆಶಿಶ್ ಶೆಲಾರ್ ಹೇಳಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *