ಟೋಕಿಯೋ ಒಲಿಂಪಿಕ್ಸ್ : ಪುರುಷರ ಹಾಕಿ – ನಾಕೌಟ್ ಹಂತಕ್ಕೆ ಭಾರತ

ಟೋಕಿಯೋ : ಮನ್‌ಪ್ರೀತ್ ಸಿಂಗ್ ನೇತೃತ್ವದ ಭಾರತೀಯ ಹಾಕಿ ತಂಡವು ಟೋಕಿಯೋ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಅದ್ಭುತ ಪ್ರದರ್ಶನ ತೋರುತ್ತಿದ್ದು ನಾಕೌಟ್‌ ಹಂತಕ್ಕೇರುವಲ್ಲಿ ಯಶಸ್ವಿಯಾಗಿದೆ. ಗ್ರೂಪ್‌ ಹಂತದ ಕೊನೆಯ ಪಂದ್ಯದಲ್ಲಿ ಆತೀಥೇಯ ಜಪಾನ್ ವಿರುದ್ದ 5-3 ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ರ‍್ಯಾಂಕಿಂಗ್‌ನಲ್ಲಿ ಮೂರನೇ ಸ್ಥಾನಕ್ಕೇರಿ ಶ್ರೇಷ್ಠ ಸಾಧನೆ ಮಾಡಿದೆ.

ಟೋಕಿಯೋ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ‘ಎ’ ಗುಂಪಿನಲ್ಲಿ ಸ್ಥಾನ ಪಡೆದಿರುವ ಭಾರತ ಹಾಕಿ ತಂಡವು ಆಡಿದ 5 ಪಂದ್ಯಗಳ ಪೈಕಿ 4 ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಕ್ವಾರ್ಟರ್‌ ಫೈನಲ್‌ಗೆ ಲಗ್ಗೆಯಿಟ್ಟಿದೆ. ಇದೇ ವೇಳೆ ಅಂತಾರಾಷ್ಟ್ರೀಯ ಹಾಕಿ ಫೆಡರೇಷನ್‌ ಬಿಡುಗಡೆ ಮಾಡಿದ ನೂತನ ರ‍್ಯಾಂಕಿಂಗ್‌ನಲ್ಲಿ ಒಂದು ಸ್ಥಾನ ಮೇಲೇರುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದೆ.

1980ರ ಒಲಿಂಪಿಕ್ಸ್‌ನಲ್ಲಿ ಭಾರತೀಯ ಹಾಕಿ ತಂಡವು ಪದಕದ ಬೇಟೆಯಾಡಿತ್ತು. ಇದಾದ ಬಳಿಕ ಭಾರತೀಯರ ಪಾಲಿಗೆ ಹಾಕಿಯಲ್ಲಿ ಒಲಿಂಪಿಕ್ಸ್ ಪದಕ ಗೆಲ್ಲುವುದು ಕಬ್ಬಿಣದ ಕಡಲೆಯಾಗಿತ್ತು. ಆದರೆ ಮನ್‌ಪ್ರೀತ್ ಸಿಂಗ್ ನೇತೃತ್ವದ ಭಾರತ ಹಾಕಿ ತಂಡವು ಒಲಿಂಪಿಕ್ಸ್‌ನಲ್ಲಿ ಪದಕದ ಬೇಟೆಯಾಡಬಲ್ಲ ನೆಚ್ಚಿನ ತಂಡಗಳಲ್ಲಿ ಒಂದು ಎನಿಸಿದೆ.

 

Donate Janashakthi Media

Leave a Reply

Your email address will not be published. Required fields are marked *