ಬೆಂಗಳೂರು: ಕಮಲ್ ಚಂದ್ರಾ ನಿರ್ದೇಶನದಲ್ಲಿ ಮೂಡಿ ಬಂದಿರುವ ಕಪೂರ್ ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಹಮಾರೆ ಬಾರಹ” ಚಲನಚಿತ್ರ ಪ್ರದರ್ಶನಕ್ಕೆ ರಾಜ್ಯ ಸರ್ಕಾರ ನಿಷೇಧ ಹೇರಿದೆ.
ಮುಸ್ಲಿಂ ಮಹಿಳೆಯರ ಕುರಿತಾಗಿ ಅವಹೇಳನ ದೃಶ್ಯಗಳು ‘ಹಮಾರೆ ಬಾರಹ’ ಸಿನಿಮಾದಲ್ಲಿ ತೊರಿಸಿಲಾಗಿದೆ ಎಂದು ಆಕ್ರೋಶ ವ್ಯಕ್ತವಾದ ಕಾರಣ ರಾಜ್ಯದಲ್ಲಿ ಸಿನಿಮಾ ಪ್ರದರ್ಶನಕ್ಕೆ ಕರ್ನಾಟಕ ಸರ್ಕಾರ ನಿಷೇಧ ಹೇರಿದೆ.
ಟ್ರೇಲರ್ ವೀಕ್ಷಿಸಿದ ನಂತರ ಹಲವಾರು ಅಲ್ಪಸಂಖ್ಯಾತ ಸಂಘಟನೆಗಳು ಮತ್ತು ನಿಯೋಗಗಳ ಮನವಿಯನ್ನು ಪರಿಗಣಿಸಿ ಕರ್ನಾಟಕ ಸರ್ಕಾರ, ಕರ್ನಾಟಕ ಚಿತ್ರಮಂದಿರಗಳ (ನಿಯಂತ್ರಣ) ಕಾಯಿದೆ, 1964 ರ ಸೆಕ್ಷನ್‌ಗಳ ಅಡಿಯಲ್ಲಿ ‘ಹಮಾರೆ ಬಾರಹ ’ ಚಲನಚಿತ್ರವನ್ನು ಎರಡು ವಾರಗಳವರೆಗೆ ಅಥವಾ ಮುಂದಿನ ಆದೇಶದವರೆಗೆ ಬಿಡುಗಡೆ ಅಥವಾ ಪ್ರಸಾರವನ್ನು ನಿಷೇಧಿಸಿದೆ.
ಮುಸ್ಲಿಂ ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯದ ಕತೆಯನ್ನು ಒಳಗೊಂಡಿದೆ. ಸಿನಿಮಾದ ಟೀಸರ್ ಈಗಾಗಲೇ ಬಿಡುಗಡೆ ಆಗಿದ್ದು, ಗಮನ ಸೆಳೆದಿದೆ. ಆದರೆ ಕೆಲಸ ದೃಶ್ಯಗಳಲ್ಲಿ ಮೌಲಾ ಒಬ್ಬ, ಮಹಿಳೆಯರು ಕೇವಲ ಪುರುಷರ ಭೋಗ ವಸ್ತುಗಳು, ಅವರಿಗೆ ಸ್ವಾತಂತ್ರ್ಯ ನೀಡುವಂತಿಲ್ಲ ಎಂಬಿತ್ಯಾದಿ ಭಾಷಣ ಮಾಡುತ್ತಿರುವ ದೃಶ್ಯದಿಂದ ಪ್ರಾರಂಭವಾಗುವ ಟೀಸರ್, ಮುಸ್ಲಿಂ ಮಹಿಳೆಯರ ಮೇಲೆ ಅವರ ಪತಿ ನಡೆಸುತ್ತಿರುವ ದೌರ್ಜನ್ಯದ ದೃಶ್ಯಗಳನ್ನು ಕಟ್ಟಿಕೊಡಲಾಗಿದೆ.
ರಾಜ್ಯದಲ್ಲಿ ಬಿಡುಗಡೆ ಮಾಡಲು ಅನುಮತಿಸಿದರೆ ಅದು ಕೋಮು ಉದ್ವಿಗ್ನತೆಯನ್ನು ಉಂಟುಮಾಡುತ್ತದೆ ಎಂಬ ಕಾರಣವಿರುವುದಾಗಿ ತಿಳಿದುಬಂದಿದೆ.