ಚೆನ್ನೈ: ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರ ಕಾರ್ಯನಿರ್ವಹಣೆ ಶೈಲಿ ವಿಚಾರದಲ್ಲಿ ಭಿನ್ನಾಭಿಪ್ರಾಯ ಮೂಡಿದ ಹಿನ್ನೆಲೆ ಐಟಿ ವಿಭಾಗದ ಮುಖ್ಯಸ್ಥ ರಾಜೀನಾಮೆ ಬೆನ್ನಲ್ಲೇ ಇದೀಗ ಬಿಜೆಪಿ ಐಟಿ ಘಟಕ ವಿಭಾಗದ 13 ಮಂದಿ ಪದಾಧಿಕಾರಿಗಳು ಪಕ್ಷ ತೊರೆದು ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ(ಎಐಎಡಿಎಂಕೆ) ಸೇರಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರೊಂದಿಗೆ ಭಿನ್ನಾಭಿಪ್ರಾಯ ಉಂಟಾದ ಹಿನ್ನೆಲೆಯಲ್ಲಿ ಪಕ್ಷದ ಐಟಿ ವಿಭಾಗದ ಮುಖ್ಯಸ್ಥರಾಗಿದ್ದ ಸಿಟಿ ಆರ್ ನಿರ್ಮಲ್ ಕುಮಾರ್ ರಾಜೀನಾಮೆ ನೀಡಿ ಎಐಎಡಿಎಂಕೆ ಪಕ್ಷ ಸೇರಿದ್ದಾರೆ.
ಇದನ್ನು ಓದಿ: ಎಐಡಿಕೆಎಂಕೆ ನಾಯಕತ್ವ: ಪಳನಿಸ್ವಾಮಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾನ್ಯವಲ್ಲವೆಂದ ಮದ್ರಾಸ್ ಹೈಕೋರ್ಟ್
ಬಿಜೆಪಿಗಾಗಿ ದುಡಿದಿದ್ದೇನೆ. ನಾನು ಯಾವುದೇ ಸ್ಥಾನಮಾನ ನಿರೀಕ್ಷೆ ಮಾಡಿಲ್ಲ ಎಂಬುದು ಜನರಿಗೆ ಗೊತ್ತಿದೆ. ಆದರೆ ಕಳೆದ ಕೆಲವು ದಿನಗಳಿಂದ ಪಕ್ಷದಲ್ಲಿನ ಘಟನೆಗಳನ್ನು ಪರಿಗಣಿಸಿ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಬಿಜೆಪಿ ಐಟಿ ವಿಭಾಗದ ಜಿಲ್ಲಾಧ್ಯಕ್ಷ ಓರತಿ ಅನ್ಬರಸು ಹೇಳಿದ್ದಾರೆ.
ಬಿಜೆಪಿ 10 ಐಟಿ ವಿಭಾಗದ ಜಿಲ್ಲಾ ಕಾರ್ಯದರ್ಶಿಗಳು ಮತ್ತು ಇಬ್ಬರು ಜಿಲ್ಲಾ ಉಪ ಕಾರ್ಯದರ್ಶಿಗಳ ಸಹಿಯನ್ನು ಹೊಂದಿದ ಹೇಳಿಕೆಯನ್ನು ಬಿಡುಗಡೆ ಮಾಡಲಾಗಿದೆ. ಮಂಗಳವಾರ ಬಿಜೆಪಿ ಬೌದ್ಧಿಕ ವಿಭಾಗದ ರಾಜ್ಯ ಕಾರ್ಯದರ್ಶಿ ಕೃಷ್ಣನ್, ಐಟಿ ವಿಭಾಗದ ರಾಜ್ಯ ಕಾರ್ಯದರ್ಶಿ ದಿಲೀಪ್ ಕಣ್ಣನ್, ತಿರುಚ್ಚಿ ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ವಿಜಯ್ ಮತ್ತು ರಾಜ್ಯ ಒಬಿಸಿ ವಿಭಾಗದ ಕಾರ್ಯದರ್ಶಿ ಅಮ್ಮು ಅವರು ಎಡಪ್ಪಾಡಿ ಪಳನಿಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಇಲ್ಲಿ ಕ್ಲಿಕ್ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ