ಬೆಂಗಳೂರು: ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲು ಕ್ಷಣಗಣನೆ ಆರಂಭವಾಗಿದ್ದೂ, ಲೋಕಭವನದಲ್ಲಿ (ರಾಜಭವನ) ನಡೆಯುವ ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರ ದಂಡೇ ಭಾಗವಹಿಸುತ್ತಿದೆ. ಡಿಕೆ ಶಿವಕುಮಾರ್ ಜೊತೆಗೆ 13 ಮಂದಿ ಶಾಸಕರೂ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಶಾಸಕ
ಖುದ್ದು, ಡಿಕೆ ಶಿವಕುಮಾರ್ ಅವರೇ ಪೋನ್ ಕರೆ ಮಾಡಿ ಸಚಿವ ಸ್ಥಾನ ನೀಡಿರುವ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ನಿಂದ, ಸಚಿವರ ಪಟ್ಟಿ ಬಂದ ತಕ್ಷಣವೇ ಅದನ್ನು ರಾಜ್ಯಪಾಲರಿಗೆ ಕಳುಹಿಸಲಾಗಿದೆ. ಲೋಕ ಭವನದ ಗಾಜಿನ ಮನೆಯಲ್ಲಿ ಇಂದು ಸಂಜೆ 4.05ಕ್ಕೆ ಆಯೋಜಿಸಲಾಗಿರುವ ಭವ್ಯ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಹಾಗೂ ಅವರ ಸಂಪುಟದ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಇದನ್ನೂ ಓದಿ: 2028 ಚುನಾವಣೆ ಟಾರ್ಗೆಟ್: ಬಿಜೆಪಿ ಸಂಘಟನಾ ಪುನರ್ರಚನೆಗೆ ಮುಂದು
ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯಿರಿ. ಕರ್ನಾಟಕವನ್ನು ಯಶಸ್ವಿಯಾಗಿ ಮುನ್ನಡೆಸುತ್ತೀರಿ ಎಂಬ ಅದಮ್ಯ ವಿಶ್ವಾಸ ನನಗಿದೆ. ಹೊಸ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ. ಮತ್ತಷ್ಟು ಯಶಸ್ಸು ನಿಮ್ಮದಾಗಲಿ ಎಂದು ಸೋನಿಯಾ ಗಾಂಧಿ ಅವರು ಶುಭಾಶಯ ಹೇಳಿದ್ದಾರೆ ಎಂದು ಡಿಕೆ ಶಿವಕುಮಾರ್ ಕಚೇರಿ ತಿಳಿಸಿದೆ. ಡಿಕೆ ಶಿವಕುಮಾರ್, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಮಾಜಿ ಸಿಎಂ ಯಡಿಯೂರಪ್ಪರವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.
ಯಾರೆಲ್ಲಾ ಡಿಕೆ ಶಿವಕುಮಾರ್ ಜೊತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ, ಅದರ ಪಟ್ಟಿ ಟೇಬಲ್ ಫಾರ್ಮ್ಯಾಟ್’ನಲ್ಲಿ ನೀಡಲಾಗಿದೆ.

ಇದನ್ನೂ ನೋಡಿ: ನಳ ಇದೆ, ಪೈಪ್ ಇದೆ… ಆದರೆ ನೀರೇ ಇಲ್ಲ! ಕೊಡಗಿನ ಆದಿವಾಸಿಗಳ ಕಣ್ಣೀರಿನ ಕಥೆ Janashakthi Media
