ಹೆಚ್ಚು ದರ ವಸೂಲಿ: ನಿಯಮ ಉಲ್ಲಂಘಿಸಿದ 15 ಆಟೋಗಳು ಸೀಜ್

ಬೆಂಗಳೂರು: ನಗರದಲ್ಲಿ ಸಾರಿಗೆ ಅಧಿಕಾರಿಗಳು ನಿಗದಿ ಮಾಡಿದ ದರಕ್ಕಿಂತಲೂ ಹೆಚ್ಚು ಹಣ ವಸೂಲಿ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಆಟೋ ಚಾಲಕರಿಗೆ ಶಾಕ್ ನೀಡಿದ್ದಾರೆ. ನಿಯಮ ಉಲ್ಲಂಘಿಸಿದ 15 ಆಟೋಗಳನ್ನು ಇದೀಗ RTO ಅಧಿಕಾರಿಗಳು ಸೀಜ್ ಮಾಡಿದ್ದಾರೆ.

ನಿಗದಿತ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಪ್ರಯಾಣಿಕರಿಂದ ದೂರು ಬಂದಿತ್ತು. ಈ ಹಿನ್ನೆಲೆ, ನಗರದಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ನಿಗದಿ ಮಾಡಿರುವ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡಿದರೆ ಕ್ರಮ ಕೈಗೊಳ್ಳಲಾಗುತ್ತದೆ.

ಇದನ್ನೂ ಓದಿ: ಜುಲೈ 4ರಂದು ಭೂ ಸ್ವಾಧೀನ ವಿರೋಧಿಸಿ ‘ನಾಡ ಉಳಿಸಿ ಸಮಾವೇಶ’

ಹೆಚ್ಚು ದರ ವಸೂಲಿ ಮಾಡುತ್ತಿರುವ ಚಾಲಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಲ್ಲದೆ ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಜರಗಿಸುವಂತೆ ಸಾರಿಗೆ ಇಲಾಖೆ ಕಮಿಷನರ್ ಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚಿಸಿದ್ದಾರೆ.

ಇದನ್ನೂ ನೋಡಿ: ಕೌಶಲ್ಯದ ಹೆಸರಲ್ಲಿ ಕಾರ್ಮಿಕ ಮಂಡಳಿಯ ಹಣ ವ್ಯಯ – ಕಾರ್ಮಿಕ ಸಂಘಟನೆಗಳ ಆಕ್ಷೇಪ

Donate Janashakthi Media

Leave a Reply

Your email address will not be published. Required fields are marked *