ಆರ್ ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಪ್ರಕರಣ ಸಚಿವ ಕೆಎನ್ ರಾಜಣ್ಣ  ತಲೆದಂಡ 15 ವಿಧೇಯಕಗಳು ಮಂಡನೆ

Please follow and like us:
ಬೆಂಗಳೂರು : ಸಚಿವ ಕೆಎನ್ ರಾಜಣ್ಣ  ತಲೆದಂಡ, ಆರ್ ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಪ್ರಕರಣ  ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನದ  ಎರಡನೇ ದಿನದ ಕಲಾಪ ನಡೆಯುತ್ತಿದೆ. ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಆಡಳಿತಾರೂಢ ಕಾಂಗ್ರೆಸ್  ವಿರುದ್ಧ ಮುಗಿಬಿದ್ದಿವೆ.
ಇದರ ನಡುವೆ ಇಂದು(ಆಗಸ್ಟ್ 12) ಬರೋಬ್ಬರಿ 15 ವಿಧೇಯಕಗಳು ಮಂಡನೆಯಾಗಿವೆ. ಸಚಿವರದ ಡಾ. ಜಿ ಪರಮೇಶ್ವರ್, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಸಂತೋಷ್ ಲಾಡ್, ಸುಧಕಾರ್ ಹಾಗೂ ಬೋಸರಾಜ ಪರವಾಗಿ ಕಾನೂನು ಸಚಿವ ಎಚ್ ಕೆ ಪಾಟೀಲ್ ವಿವಿಧ ಇಲಾಖೆಗೆ ಸಂಬಂಧಿಸಿದ 15 ವಿಧೇಯಕಗಳನ್ನ ಮಂಡನೆ ಮಾಡಿದ್ದಾರೆ.

ವಿಧಾನಸಭೆ ಅಧಿವೇಶದನ ಎರಡನೇ ದಿನವಾದ ಇಂದು ಒಂದೇ ದಿನ ಬರೋಬ್ಬರಿ 15 ವಿಧೇಯಕಗಳನ್ನು ಮಂಡಿಸಲಾಗಿದೆ. ಗೃಹ ಸಚಿವ ಪರಮೇಶ್ವರ್, ಆರೋಗ್ಯ ದಿನೇಶ್ ಗುಂಡೂರಾವ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಉನ್ನತ ಶಿಕ್ಷಣ ಸಚಿವ ಸುಧಕಾರ್ ಹಾಗೂ ಬೋಸರಾಜ ಪರವಾಗಿ ಎಲ್ಲಾ 15 ವಿಧೇಯಕಗಳನ್ನ ಕಾನೂನು ಸಚಿವ ಎಚ್ ಕೆ ಪಾಟೀಲ್ ಅವರು ಮಂಡಿಸಿದರು.

ಮಂಡನೆಯಾದ 15 ವಿಧೇಯಕಗಳಾವುವು?

  1. 2025ನೇ ಸಾಲಿನ ಕರ್ನಾಟಕ ಅಗ್ನಿಶಾಮಕದಳ (ತಿದ್ದುಪಡಿ) ವಿಧೇಯಕ ಮಂಡನೆ.
  2. 2025ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ವೈದ್ಯಾಧಿಕಾರಿಗಳ ಮತ್ತು ಇತರ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ವಿಧೇಯಕ ಮಂಡನೆ.
  3. 2025ನೇ ಸಾಲಿನ ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ವಿಧೇಯಕ ಮಂಡನೆ.
  4. 2025ನೇ ಸಾಲಿನ ಕರ್ನಾಟಕ ವೈದ್ಯಕೀಯ ನೋಂದಣಿ (ತಿದ್ದುಪಡಿ) ವಿಧೇಯಕ ಮಂಡನೆ.
  5. 2025ನೇ ಸಾಲಿನ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕ ಮಂಡನೆ.
  6. 2025ನೇ ಸಾಲಿನ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಮಂಡನೆ.
  7. 2025ನೇ ಸಾಲಿನ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಮಂಡನೆ.
  8. 2025ನೇ ಸಾಲಿನ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಮಂಡನೆ.
  9. 2025ನೇ ಸಾಲಿನ ಕೂಡಲ ಸಂಗಮ ಅಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕ ಮಂಡನೆ.
  10. 2025ನೇ ಸಾಲಿನ ಬನವಾಸಿ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಮಂಡನೆ.
  11. 2025ನೇ ಸಾಲಿನ ಸರ್ವಜ್ಞ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಮಂಡನೆ.
  12. 2025ನೇ ಸಾಲಿನ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ವಿಧೇಯಕ ಮಂಡನೆ.
  13. 2025ನೇ ಸಾಲಿನ ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ) ವಿಧೇಯಕ ಮಂಡನೆ.
  14. 2025ನೇ ಸಾಲಿನ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಮಂಡನೆ.
  15. ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಅವರಿಂದ ಒಂದು ವಿಧೇಯಕ ಮಂಡನೆ.
  16. 2025ನೇ ಸಾಲಿನ ಬಾಲ್ಯ ವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ವಿಧೇಯಕ ಮಂಡನೆ.

ಇದನ್ನೂ ನೋಡಿ: ಬಲ್ಡೋಟಾ ಕಾರ್ಖಾನೆಯಿಂದ ಕೆರೆ ಒತ್ತುವರಿ; ಜಾನುವಾರು ಸಮೇತ ವಿಭಿನ್ನ ಪ್ರತಿಭಟನೆ | Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *