ಕೋಟಾ: ಶಿವರಾತ್ರಿಯ ಹಬ್ಬದ ನಿಮಿತ್ತ ನಡೆಯುತ್ತಿದ್ದ ವಿಶೇಷ ವಿಶೇಷ ಮೆರವಣಿಗೆ ವೇಳೆ ವಿದ್ಯುತ್ ಅವಘಡ ಉಂಟಾಗಿ 15 ಮಕ್ಕಳಿಗೆ ಗಂಭಿರ ಗಾಯಗಳುಂಟಾಗಿವೆ. . ವಿದ್ಯುತ್ ಅವಘಡ
ಆ ಪೈಕಿ ಮೂವರು ವಿದ್ಯಾರ್ಥಿಗಳ ಸ್ಥಿತಿ ಚಿಂತಾಜನಕವಾಗಿದ್ದು, ಅವರೆಲ್ಲರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ರಾಜಸ್ಥಾನದ ಕೋಟಾದಲ್ಲಿ ಹೊರಟಿದ್ದ ಶಿವನ ಮೆರವಣಿಗೆಯಲ್ಲಿ ಭಾರಿ ಅವಘಡ ಸಂಭವಿಸಿದ್ದು, ಹೈ-ಟೆನ್ಶನ್ ವಿದ್ಯುತ್ ತಂತಿಯಿಂದಾಗಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ವಿದ್ಯುತ್ ಸ್ಪರ್ಶ ಉಂಟಾಗಿ ಸುಮಾರು 15 ಮಕ್ಕಳಿಗೆ ಗಾಯಗಳಾಗಿವೆ.
ಇದನ್ನು ಓದಿ : ಲೋಕಸಭೆ ಚುನಾವಣೆ: ಶೇ.50 ರಷ್ಟು ಅಭ್ಯರ್ಥಿಗಳ ಬಗ್ಗೆ ಇಂದು ನಿರ್ಣಯ: ಡಿಸಿಎಂ ಡಿ.ಕೆ. ಶಿವಕುಮಾರ್
ಮಕ್ಕಳ ಕಿರುಚಾಟ ಕೇಳಿದ ಕೂಡಲೇ ಅಲ್ಲಿದ್ದವರು ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸದ್ಯ ವೈದ್ಯರ ತಂಡ ಎಲ್ಲರಿಗೂ ಚಿಕಿತ್ಸೆ ನೀಡುತ್ತಿದೆ. ಘಟನೆ ಕುರಿತು ಮಾಹಿತಿ ಪಡೆದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕೂಡ ಆಸ್ಪತ್ರೆಗೆ ಆಗಮಿಸಿದ್ದಾರೆ. ಓಂ ಬಿರ್ಲಾ ಅವರೊಂದಿಗೆ ಇಂಧನ ಸಚಿವ ಹೀರಾಲಾಲ್ ನಗರ್ ಕೂಡ ಆಸ್ಪತ್ರೆಗೆ ಆಗಮಿಸಿದ್ದಾರೆ. ಗಾಯಗೊಂಡ ಎಲ್ಲ ಮಕ್ಕಳನ್ನು ಚಿಕಿತ್ಸೆಗಾಗಿ ಎಂಬಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದೊಂದು ಅತ್ಯಂತ ದುಃಖಕರ ಘಟನೆ. ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಒಬ್ಬರಿಗೆ ಶೇ.100 ರಷ್ಟು ಸುಟ್ಟ ಗಾಯಗಳಾಗಿವೆ. ಸಾಧ್ಯವಿರುವ ಎಲ್ಲ ಚಿಕಿತ್ಸೆ ನೀಡಲು ವಿಶೇಷ ತಂಡವನ್ನು ರಚಿಸಲಾಗಿದೆ. ಯಾವುದೇ ರೀತಿಯ ನಿರ್ಲಕ್ಷ್ಯ ಕಂಡುಬಂದಲ್ಲಿ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ಹೀರಾಲಾಲ್ ನಗರ್ ತಿಳಿಸಿದ್ದಾರೆ.
ಇದನ್ನು ನೋಡಿ : ಸಂಸದೀಯ ಪ್ರಜಾಸತ್ತೆಯ ಮೇಲೆ ಕೇಂದ್ರ ಸರ್ಕಾರದ ಕ್ರೂರ ಸವಾರಿ