ಬೆಂಗಳೂರು: “ಗ್ರೀನ್ ಬೆಂಗಳೂರು” ಯೋಜನೆಯಡಿ ಜೂನ್ 27ರಂದು ನಗರದಲ್ಲಿ 15 ಲಕ್ಷ ಸ್ಥಳೀಯ ಗಿಡಗಳನ್ನು ನೆಡುವ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಆಯೋಜಿಸುತ್ತಿದೆ. ಈ ಮೂಲಕ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸುವ ಗುರಿಯನ್ನು ಸಂಸ್ಥೆ ಹೊಂದಿದೆ. ಗ್ರೀನ್
ನಾಡಪ್ರಭು ಕೆಂಪೇಗೌಡ ಜಯಂತಿಯ ಅಂಗವಾಗಿ ನಡೆಯಲಿರುವ ಈ ಸಸಿ ನೆಡುವ ಅಭಿಯಾನವು ಶಿವರಾಮ ಕಾರಂತ ಲೇಔಟ್, ನಾಡಪ್ರಭು ಕೆಂಪೇಗೌಡ ಲೇಔಟ್ ಹಾಗೂ ಬನಶಂಕರಿ 6ನೇ ಹಂತದಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್ ನೇತೃತ್ವ ವಹಿಸಲಿದ್ದಾರೆ.
ಇದನ್ನೂ ಓದಿ: ಮಳೆಗಾಲದಲ್ಲೇ ರೈತರ ಕಳವಳ: ಭೂಸ್ವಾಧೀನ, ನೀರಾವರಿ ಸಮಸ್ಯೆಗಳಿಂದ ಕರ್ನಾಟಕದಾದ್ಯಂತ ಪ್ರತಿಭಟನೆ
ಅಭಿಯಾನದಲ್ಲಿ ಪಾಲ್ಗೊಳ್ಳುವ ಸ್ವಯಂಸೇವಕರಿಗೆ ಉಚಿತ ಬಸ್ ಸೌಲಭ್ಯ ಹಾಗೂ ಬೆಳಗಿನ ಉಪಹಾರ ವ್ಯವಸ್ಥೆ ಮಾಡಲಾಗುತ್ತದೆ ಎಂದು ಬಿಡಿಎ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರತಿ ಭಾಗವಹಿಸುವವರಿಗೆ 30 ಗಿಡಗಳನ್ನು ನೆಡುವ ಗುರಿ ನೀಡಲಾಗಿದ್ದು, ಕಾರ್ಯ ಪೂರ್ಣಗೊಳಿಸಿದವರಿಗೆ ಪ್ರಮಾಣಪತ್ರ ನೀಡಲಾಗುತ್ತದೆ. ಆಸಕ್ತರು www.greenbengalurubybda.in ವೆಬ್‌ಸೈಟ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ನೋಡಿ: SIR ತೀರ್ಪಿನ ಒಳನೋಟ: ಸಂವಿಧಾನ, ನಾಗರಿಕತ್ವ ಮತ್ತು ಮತದಾನದ ಹಕ್ಕು |ಜಸ್ಟೀಸ್ ಗೋಪಾಲಗೌಡ
