ಇಂಫಾಲ: ಮಣಿಪುರದ ನೋನಿ ಜಿಲ್ಲೆಯಲ್ಲಿಂದು ಎರಡು ಶಾಲಾ ಬಸ್ಸು ಉರುಳಿದ ಪರಿಣಾಮವಾಗಿ 15 ಮಂದಿ ವಿದ್ಯಾರ್ಥಿಗಳು ಮೃತಪಟ್ಟಿದ್ದು, ಇನ್ನೂ ಹೆಚ್ಚಿನ ಮಂದಿಗೆ ಗಾಯಗಳಾಗಿವೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.
ರಾಜ್ಯ ರಾಜಧಾನಿ ಇಂಫಾಲದಿಂದ ಸುಮಾರು 55 ಕಿ.ಮೀ. ದೂರದಲ್ಲಿರುವ ಬೆಟ್ಟದ ಜಿಲ್ಲೆ ಲಾಂಗ್‌ಸೈ ಪ್ರದೇಶದ ಬಳಿಯ ಓಲ್ಡ್ ಕ್ಯಾಚಾರ್ ರಸ್ತೆಯಲ್ಲಿ ಈ ಅಪಘಾತ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನು ಓದಿ: ಪುಣೆ-ಬೆಂಗಳೂರು ಹೆದ್ದಾರಿ: ಸರಣಿ ಅಪಘಾತದಿಂದ 48 ವಾಹನಗಳು ಜಖಂ, 38 ಜನರಿಗೆ ಗಾಯ
ತಂಬಲ್ನು ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಪ್ರಯಾಣಿಸುವ ಎರಡು ಬಸ್ಸುಗಳಲ್ಲಿ ನೋನಿ ಜಿಲ್ಲೆಯ ಖೌಪುಮ್ ಗೆ ಶಾಲಾ ಅಧ್ಯಯನ ಪ್ರವಾಸಕ್ಕೆ ತೆರಳಿದರು. ವಿದ್ಯಾರ್ಥಿನೀಯರು ಪ್ರಯಾಣಿಸುತ್ತಿದ್ದ ಬಸ್ಸಿನ ಚಾಲಕನ ನಿಯಂತ್ರಣ ತಪ್ಪಿ ಉರುಳಿದೆ. ಇದರಿಂದ ಹೆಚ್ಚಿನ ವಿದ್ಯಾರ್ಥಿಗಳಿಗೆ ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ರಾಜ್ಯ ರಾಜಧಾನಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಹಳೇ ಕ್ಯಾಚಾರ್ ರಸ್ತೆಯಲ್ಲಿ ಶಾಲಾ ಮಕ್ಕಳು ಪ್ರಯಾಣ ಮಾಡುತ್ತಿದ್ದ ಬಸ್ಸು ಅಪಘಾತವಾಗಿದೆ ಎಂದು ಸುದ್ದಿ ಕೇಳಿ ಅತೀವ ದುಃಖವಾಯಿತು. ರಕ್ಷಣಾ ಕಾರ್ಯಾಚರಣೆಗಾಗಿ ಎಸ್‌ಡಿಆರ್‌ಎಫ್, ವೈದ್ಯಕೀಯ ತಂಡ ಮತ್ತು ಶಾಸಕರು ಸ್ಥಳಕ್ಕೆ ತೆರಳಿದ್ದಾರೆ. ಬಸ್ಸಿನಲ್ಲಿರುವ ಪ್ರತಿಯೊಬ್ಬರ ಸುರುಕ್ಷತೆಗಾಗಿ ಪ್ರಾರ್ಥಿಸುತ್ತೇನೆ’ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಟ್ವೀಟ್ ಮಾಡಿದ್ದಾರೆ.
ಇಲ್ಲಿ ಕ್ಲಿಕ್ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ