15 ಸಾವಿರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳು ಖಾಲಿ: ಶೀಘ್ರವೇ ನೇಮಕಾತಿ ಆರಂಭ

Please follow and like us:
ಬೆಂಗಳೂರು: ರಾಜ್ಯದಲ್ಲಿ 10 ರಿಂದ 15 ಸಾವಿರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳು ಖಾಲಿ ಇದ್ದು, ಶೀಘ್ರದಲ್ಲಿಯೇ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸೆಪ್ಟೆಂಬರ್‌ 19ರಂದು ಹೇಳಿದ್ದಾರೆ.

ವಿಧಾನಸೌಧದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈಗಾಗಲೇ 545 ಪಿಎಸ್ಸೈ ಹುದ್ದೆಗಳ ನೇಮಕಾತಿ ಪೂರ್ಣಗೊಳಿಸಲಾಗಿದೆ. 402 ಪಿಎಸ್ಸೈ ಹುದ್ದೆಗಳ ನೇಮಕಾತಿಯಲ್ಲಿ 398 ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ 10 ರಿಂದ 15 ಸಾವಿರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳು ಖಾಲಿ ಇವೆ. ಇದನ್ನು ಭರ್ತಿ ಮಾಡಲಾಗುವುದು ಎಂದರು.

ಇದನ್ನೂ ಓದಿ: ಚಿತ್ರದುರ್ಗ | ದಾಖಲೆ ಸೃಷ್ಟಿಗೆ ಸಜ್ಜಾದ ಇತಿಹಾಸ ಪ್ರಸಿದ್ಧ ವಾಣಿ ವಿಲಾಸ ಸಾಗರ ಜಲಾಶಯ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ, ಬ್ಯಾಂಕ್ ದರೋಡೆ ಪ್ರಕರಣಗಳ ತನಿಖೆಯ ಬಗ್ಗೆ ಅಧಿಕಾರಿಗಳೊಂದಿಗೆ ಕೂಲಂಕುಶವಾಗಿ ಚರ್ಚೆ ಮಾಡಲಾಗಿದೆ. ಎಸ್ಸಿ, ಎಸ್ಟಿ ಸಮುದಾಯದ ಮೇಲಿನ ದೌರ್ಜನ್ಯ ಪ್ರಕರಣಗಳ ಬಗ್ಗೆ ಪರಿಶೀಲನೆ ಮಾಡಲಾಗಿದೆ. ಕಳೆದ ಮೂರು ವರ್ಷಗಳಿಗೆ ಹೋಲಿಸಿದರೆ ಶಿಕ್ಷೆ ಪ್ರಮಾಣ ಶೇ.10 ಆಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪರಿಶೀಲನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಡಿಸಿಆರ್‌ಇ ವಿಭಾಗದ ಡಿಜಿಪಿ ಕೆ.ರಾಮಚಂದ್ರರಾವ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್, ಎಡಿಜಿಪಿ ಆರ್.ಹಿತೇಂದ್ರ, ಗೃಹ ಇಲಾಖೆಯ ಕಾರ್ಯದರ್ಶಿ ಕೆ.ವಿ.ಶರತ್ ಚಂದ್ರ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ನೋಡಿ: ಕಾನೂನು ಅರಿವು | ಮಕ್ಕಳ ಕಸ್ಟಡಿ ಮತ್ತು ಪಾಲನೆ ಕಾನೂನುಗಳು | ಜನಶಕ್ತಿ ಮೀಡಿಯಾ, ಧ್ವನಿ ಲೀಗಲ್ ಟ್ರಸ್ಟ್

Please follow and like us:
Donate Janashakthi Media

Leave a Reply

Your email address will not be published. Required fields are marked *