ಕೃಷ್ಣರಾವ್‌ ಸಂತ್ರಸ್ತ ಯುವತಿಯನ್ನು ವಿವಾಹವಾಗದಿದ್ದರೆ ಆತನ ಮನೆಯಲ್ಲಿ ಧರಣಿ: ಪ್ರತಿಭಾ ಕುಳಾಯಿ

Please follow and like us:
ಮಂಗಳೂರು: ಪುತ್ತೂರಿನಲ್ಲಿ ಅವಿವಾಹಿತ ಯುವತಿಗೆ ಜನಿಸಿದ ಮಗು ಸ್ಥಳೀಯ ನಿವಾಸಿ ಕೃಷ್ಣ ರಾವ್‌ ಎಂಬಾತನದ್ದೇ ಎಂದು ಡಿಎನ್ಎ ಪರೀಕ್ಷೆಯಲ್ಲಿ ಸಾಬೀತುಗೊಂಡ ಹಿನ್ನೆಲೆಯಲ್ಲಿ ಆತ ಮಗುವಿನ ತಾಯಿಯನ್ನು ಇನ್ನಾದರೂ ವಿವಾಹ ಆಗಲೇಬೇಕು. ತಪ್ಪಿದಲ್ಲಿ ಆತನ ಮನೆಯಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನ್ಯಾಯಕ್ಕಾಗಿ ಧರಣಿ ನಡೆಸುವುದಾಗಿ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿಂದುಳಿದ ವರ್ಗಗಳ ಆಯೋಗ ಸದಸ್ಯೆ ಪ್ರತಿಭಾ ಕುಳಾಯಿ ಎಚ್ಚರಿಸಿದ್ದಾರೆ.

ಕೃಷ್ಣ ರಾವ್ ಒಪ್ಪಿದಲ್ಲಿ ಆತನ ಜೊತೆ ಯುವತಿಯ ಮದುವೆಯನ್ನು ನಾನೇ ಸ್ವಂತ ಖರ್ಚಿನಲ್ಲಿ ಮಾಡಿಸುತ್ತೇನೆ. ಪ್ರೀತಿ, ಪ್ರೇಮದ ಹೆಸರಲ್ಲಿ ಲೈಂಗಿಕ ಚಟುವಟಿಕೆ ನಡೆಸಿ, ಬಳಿಕ ಅರ್ಧದಲ್ಲೇ ಕೈಬಿಡುವ ಘಟನೆಗಳು ಮರುಕಳಿಸಬಾರದು. ಇದೊಂದು ಜಿಲ್ಲೆಗೆ ಕಪ್ಪು ಚುಕ್ಕೆ. ಹಾಗಾಗಿ ಈ ಘಟನೆ ಪ್ರೀತಿಸಿ, ಮಗು ಕರುಣಿಸಿ ಯುವತಿಯ ಬಾಳನ್ನು ಅರ್ಧಕ್ಕೇ ಕೈಬಿಡುವವರಿಗೆ ಒಂದು ಪಾಠವಾಗಬೇಕು ಎಂದರು.

ಇದನ್ನೂ ಓದಿ: ಉಡುಪಿ | ಬೈಂದೂರು ಕುಂದಾಪುರಗಳಿಗೆ ಕೆಎಸ್ಸಾರ್ಟಿಸಿ ಬಸ್ ಓಡಿಸಲು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ

ಯುವತಿ ಜೊತೆ ಎಂಟು ವರ್ಷಗಳಿಂದ ಸಂಪರ್ಕದಲ್ಲಿದ್ದ ಕೃಷ್ಣ ರಾವ್, ಕೊನೆಗೆ ವಿವಾಹವಾಗುವುದಾಗಿ ನಂಬಿಸಿ ಕೈಕೊಟ್ಟಿದ್ದಾನೆ. ಆತನ ಮನೆಯವರೂ ಈಗ ಅವರ ಮದುವೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇಂತಹ ಘಟನೆಗಳು ಸಮಾಜದಲ್ಲಿ ತಪ್ಪು ಸಂದೇಶಕ್ಕೆ ಕಾರಣವಾಗುತ್ತದೆ.

ಇವರಿಬ್ಬರನ್ನು ಒಂದುಗೂಡಿಸಿ ಸಂತ್ರಸ್ತೆಗೆ ನ್ಯಾಯ ಕೊಡಿಸುವಲ್ಲಿ ಹಿಂದುತ್ವ ಸಂಘಟನೆಗಳು, ಸ್ವಯಂಘೋಷಿತ ಮುಖಂಡರು ಕೈಚೆಲ್ಲುತ್ತಿರುವುದು ಸರಿಯಲ್ಲ. ಸಂತ್ರಸ್ತೆಯನ್ನು ಸಮುದಾಯ ಸಂಘಟನೆಯವರು ಕೈಬಿಟ್ಟಿದ್ದಾರೆ. ಹಾಗಿರುವಾಗ ಕೇವಲ ಸಮುದಾಯದ ಮುಖಂಡ ನಂಜುಂಡಿ ಮಾತ್ರ ಧೈರ್ಯ ತುಂಬಿ ಬೆಂಬಲಕ್ಕೆ ನಿಂತಿದ್ದಾರೆ. ಈ ಘಟನೆಯಲ್ಲಿ ಸಂತ್ರಸ್ತೆಗೆ ನ್ಯಾಯ ಕೊಡಿಸುವಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಪ್ರತಿಭಾ ಕುಳಾಯಿ ಆಗ್ರಹಿಸಿದರು.

ಇದನ್ನೂ ನೋಡಿ: ಗಾಂಧೀಜಿ ಪರಿಕಲ್ಪನೆ ಇಂದಿಗೂ ಪ್ರಸ್ತುತ – ನಾ ದಿವಾಕರ Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *