ಮೊರಾರ್ಜಿ ವಸತಿ ಶಾಲೆ| ಉಪಾಹಾರ ಸೇವಿಸಿ 17 ವಿದ್ಯಾರ್ಥಿನಿಯರು ಅಸ್ವಸ್ಥ

ಕಲಬುರಗಿ : ಜೇವರ್ಗಿ ಪಟ್ಟಣದ ಓಂ ನಗರ ಬಡಾವಣೆಯ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆಯ 15 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ.

ಶನಿವಾರ ಬೆಳಗ್ಗೆ ವಸತಿ ಶಾಲೆಯಲ್ಲಿ ಉಪಾಹಾರ ಸೇವನೆ ಬಳಿಕ ಏಕಾಏಕಿ ವಾಂತಿ ಮಾಡಿಕೊಂಡು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು, ಅವರನ್ನು ಜೇವರ್ಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲರ ನಿರ್ಲಕ್ಷ್ಯದಿಂದ ಈ ರೀತಿಯಾಗಿದೆ ಎಂದು ಪೋಷಕರು ಆಕ್ರೋಶ ಹೊರಹಾಕಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ವಸತಿ ಶಾಲೆಯ ಪ್ರಾಂಶುಪಾಲರ ಮತ್ತು ವಾರ್ಡನ್ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಪ್ರಭು ದೊರೆ ಭೇಟಿ ನೀಡಿದ್ದು, ವಸತಿ ನಿಲಯದ ಆಹಾರದ ಗುಣಮಟ್ಟ ಪರೀಕ್ಷಿಸಿ, ತಪ್ಪಿದ್ದಲ್ಲಿ ಹಾಸ್ಟೆಲ್ ವಾರ್ಡನ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಮಾಜಿ ಶಾಸಕ ಹಾಗೂ ರಾಜ್ಯ ಜೆಡಿಎಸ್ ಕಾರ್ಯಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಅಸ್ವಸ್ಥಗೊಂಡ ವಿದ್ಯಾರ್ಥಿನಿಯರಿಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಜೇವರ್ಗಿ ಪಿಎಸ್ಸೈ ಸಂಗಮೇಶ ಅಂಗಡಿ, ತಾಲೂಕು ವೈದ್ಯರು, ಶಿಕ್ಷಕರ ವೃಂದವರು ಇದ್ದರು.

Donate Janashakthi Media

Leave a Reply

Your email address will not be published. Required fields are marked *