ಆರೋಗ್ಯ ವಿಮೆ ಮೇಲಿನ ಶೇ 18ರಷ್ಟು ಜಿಎಸ್‌ಟಿ ಮರುಪರಿಶೀಲಿಸಿ: ದಿನೇಶ್ ಗುಂಡೂರಾವ್ ಪ್ರಧಾನಿಗೆ ಪತ್ರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಕ್ರವಾರ  ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಪತ್ರ ಬರೆದಿದ್ದು, ಆರೋಗ್ಯ ವಿಮೆ ಮೇಲಿನ ಶೇ 18ರಷ್ಟು ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ)ಯನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ.

“ಸೆಪ್ಟೆಂಬರ್ 9 ರಂದು ನಿಗದಿಯಾಗಿರುವ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಹೆಲ್ತ್ ಇನ್ಶೂರೆನ್ಸ್ ಮೇಲಿನ ಶೇಕಡಾ 18 ರಷ್ಟು ತೆರಿಗೆಯನ್ನು ದಯವಿಟ್ಟು ಮರುಪರಿಶೀಲಿಸುವಂತೆ ದಿನೇಶ್ ಗುಂಡೂರಾವ್ ಅವರು ಪತ್ರದ ಮೂಲಕ ಮನವಿ ಮಾಡಿದ್ದಾರೆ”.

“ಯುನಿವರ್ಸಲ್ ಇನ್ಶೂರೆನ್ಸ್‌ನ ದೃಷ್ಟಿಕೋನವನ್ನು ಪ್ರತಿಪಾದಿಸುವ ಸರ್ಕಾರವು ತುಂಬಾ ಹೆಚ್ಚುತೆರಿಗೆ ವಿಧಿಸುವುದು ದುರದೃಷ್ಟಕರ ಮಾತ್ರವಲ್ಲ, ವಿಪರ್ಯಾಸವೂ ಆಗಿದೆ. 2047ರಲ್ಲಿನ ಆರೋಗ್ಯ ವಿಮೆಯಲ್ಲಿನ ಸಾರ್ವತ್ರೀಕರಣದ ದೃಷ್ಟಿಯಿಂದ ಇದು ಧನಾತ್ಮಕ ಹೆಜ್ಜೆಯಾಗಲಿದೆ ಎಂದು ದಿನೇಶ್ ಗುಂಡೂರಾವ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನು ಓದಿ :  ರಾಯಚೂರು ಶಾಲಾ ಅಪಘತ : ರಸ್ತೆ ಸುರಕ್ಷತೆಯ ಕ್ರಮಗಳು ಮತ್ತು ಮಕ್ಕಳಿಗೆ ಪರಿಹಾರಕ್ಕಾಗಿ ಎಸ್‌ಎಫ್‌ಐ (SFI) ಮನವಿ

ಆರೋಗ್ಯ ವಿಮೆ ಮೇಲೂ ಶೇ 18 ರಷ್ಟು ಜಿಎಸ್.ಟಿ ತೆರಿಗೆ ಹಾಕುವುದು ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ರಿದೆ. ಹೆಚ್ಚಿನ ತೆರಿಗೆಯಿಂದಾಗಿ ಹೆಲ್ತ್ ಇನ್ಸೂರೆನ್ಸ್ ಪ್ರೀಮಿಯಂ ದುಬಾರಿಯಾಗಿದ್ದು, ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಸಿಗುತ್ತಿಲ್ಲ. ಬಹುತೇಕ ಮಧ್ಯಮ ವರ್ಗದವರು ಇಂದು ಆರೋಗ್ಯ ವಿಮೆಗಳಿಂದ ದೂರವೇ ಉಳಿಯುತ್ತಿದ್ದಾರೆ. ಆದರೆ ವೈದ್ಯಕೀಯ ತುರ್ತು ಪರಿಸ್ಥಿತಿಗಳ ಸಂದರ್ಭಗಳಲ್ಲಿ ಹೆಲ್ತ್ ಇನ್ಶೂರೆನ್ಸ್‌ನ ರಕ್ಷಣೆ ಸಿಗದೆ ಇಡೀ ಕುಟುಂಬ ವರ್ಗವೇ ಆರ್ಥಿಕ ಸಂಕಷ್ಟಕ್ಕೆ ಸಿಲುಕುವುದನ್ನು ನಾವು ಕಾಣುತ್ತಿದ್ದೇವೆ ಎಂದಿದ್ದಾರೆ.

ಸಾರ್ವತ್ರಿಕ ಆರೋಗ್ಯ ರಕ್ಷಣೆಗೆ ಸರ್ಕಾರಗಳು ಸತತ ಪ್ರಯತ್ನಗಳನ್ನ ಮುಂದುವರಿಸಿವೆ.‌ ದೇಶದಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ಬರುವ ಮೊದಲೇ ಕರ್ನಾಟಕದಲ್ಲಿ ನಾವು 2018 ರಲ್ಲೇ ಆರೋಗ್ಯ ಕರ್ನಾಟಕ ಯೋಜನೆಯನ್ನ ಜಾರಿಗೊಳಿಸಿದ್ದೆವು. ಕೇಂದ್ರ ಸರ್ಕಾರವು “2047 ರ ವೇಳೆಗೆ ಸಾರ್ವತ್ರಿಕ ವಿಮಾ ಕವರೇಜ್” ಗುರಿಯೊಂದಿಗೆ ರಾಷ್ಟ್ರವ್ಯಾಪಿ ಮಿಷನ್ ಪ್ರಾರಂಭಿಸಿದೆ.. ಆದರೆ ಹೆಲ್ತ್ ಇನ್ಶೂರೆನ್ಸ್ ಅನ್ನು ಸಂಪೂರ್ಣವಾಗಿ ನಿರಾಕರಿಸುವಷ್ಟು ಹೆಚ್ಚಿನ ದರದಲ್ಲಿ ತೆರಿಗೆ ವಿಧಿಸುವುದು ವಿಪರ್ಯಾಸ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

‌2017 ರಿಂದಲೂ ಆರೋಗ್ಯ ವಿಮೆಯ ಮೇಲೆ ಶೇ 18 ರಷ್ಟು ಜಿಎಸ್.ಟಿ ಹೇರಲಾಗಿದೆ. GST ಯ ಹೆಚ್ಚಿನ ದರವು ಪ್ರೀಮಿಯಂಗಳ ವೆಚ್ಚದ ಮೇಲೆ ನೇರ ಪರಿಣಾಮ ಬೀರುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನು ನೋಡಿ : ಆಂಬ್ಯುಲೆನ್ಸ್‌ ನಿರಾಕರಣೆ : ಮಕ್ಕಳಿಬ್ಬರ ಶವ ಹೊತ್ತುಕೊಂಡೇ 15 ಕಿಮೀ ಸಾಗಿದ ಕುಟುಂಬ!Janashakthi Media

Donate Janashakthi Media

Leave a Reply

Your email address will not be published. Required fields are marked *