ಗುಜರಾತ್‌ನಲ್ಲಿ ಬೆಂಕಿ ದುರಂತ: ಆಸ್ಪತ್ರೆಯಲ್ಲಿದ್ದ 18 ಕೋವಿಡ್ ರೋಗಿಗಳು ಸಜೀವ ದಹನ

ಗುಜರಾತ್: ಇಂದು ನಸುಕಿನಲ್ಲಿ ಗುಜರಾತ್ ರಾಜ್ಯದ ಬರೂಚ್ ನಗರದಲ್ಲಿ ಕೋವಿಡ್-19 ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮವಾಗಿ ಕನಿಷ್ಠ 18 ಮಂದಿ ಕೋವಿಡ್ ರೋಗಿಗಳು ಸಜೀವ ದಹನವಾಗಿದ್ದಾರೆ.

ಆಸ್ಪತ್ರೆಯ ಬೆಡ್ ಮತ್ತು ಸ್ಟ್ರೆಚರ್ಸ್ ಗಳ ಮೇಲೆ ಕೆಲವು ರೋಗಿಗಳು ಬೆಂಕಿಗೆ ಸಿಲುಕಿ ಒದ್ದಾಡಿ ಸಜೀವವಾಗಿ ದಹನದ ದೃಶ್ಯಗಳು ಭೀಕರತೆಯಿಂದ ಕೂಡಿದೆ.

ಇದನ್ನು ಓದಿ: ನಾವು ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೆ ಆರೋಗ್ಯ ವ್ಯವಸ್ಥೆಯನ್ನು ರಾಷ್ಟ್ರೀಕರಣಗೊಳಿಸುತ್ತಿದ್ದೆವು: ಕೇರಳ ಆರೋಗ್ಯ ಸಚಿವೆ ಕೆ.ಕೆ ಶೈಲಜಾ

ವೆಲ್‌ಫೇರ್ ಆಸ್ಪತ್ರೆಯಲ್ಲಿ ಸುಮಾರು 50 ಜನರು ಚಿಕಿತ್ಸೆ ಪಡೆಯುತ್ತಿದ್ದರು. ಶುಕ್ರವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯರು ಗಾಯಗೊಂಡಿರುವ ರೋಗಿಗಳನ್ನು ಕೂಡಲೇ ಬೇರೆಡೆಗೆ ಸ್ಥಳಾಂತರಿಸಿದ್ದಾರೆ.

ಬೆಳಗ್ಗೆ 6.30ರ ಹೊತ್ತಿಗೆ ಮೃತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ದುರಂತ ನಡೆದ ತಕ್ಷಣ 12 ರೋಗಿಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಬರೂಚ್ ಎಸ್ಪಿ ರಾಜೇಂದ್ರಸಿನ್ಹ ಚೂಡಾಸಮ, ಬೆಂಕಿ ಕಾಣಿಸಿಕೊಂಡ ನಂತರ ಹೊಗೆ ತುಂಬಿಕೊಂಡು ಉಸಿರುಗಟ್ಟಿ 12 ಮಂದಿ ರೋಗಿಗಳು ಕೋವಿಡ್ ವಾರ್ಡ್‌ನಲ್ಲಿ ಮೃತಪಟ್ಟಿದ್ದಾರೆ. ಉಳಿದ 6 ಮಂದಿ ರೋಗಿಗಳು ಚೇತರಿಸಿಕೊಳ್ಳಲಾಗದೆ ಮೃತಪಟ್ಟಿರಬಹುದೆಂದು ತಿಳಿದುಬಂದಿದೆ.

ಇದನ್ನು ಓದಿ: ಲಸಿಕೆ! ಲಸಿಕೆ!! ಲಸಿಕೆ!!!

ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುವ ವೆಲ್‌ಫೇರ್ ಆಸ್ಪತ್ರೆ ಬರೂಚ್-ಜಂಬುಸರ್ ಹೆದ್ದಾರಿಯಲ್ಲಿದ್ದು ರಾಜ್ಯದ ರಾಜಧಾನಿ ಅಹಮದಾಬಾದ್ ನಿಂದ 190 ಕಿಲೋ ಮೀಟರ್ ದೂರದಲ್ಲಿದೆ. ಟ್ರಸ್ಟ್ ಅಡಿಯಲ್ಲಿ ಕಾರ್ಯನಿರ್ವಹಿಸುವ ಈ ಆಸ್ಪತ್ರೆಯಲ್ಲಿ ಬೆಂಕಿ ದುರಂತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

ಕೆಲವೇ ಗಂಟೆಗಳಲ್ಲಿ ಬೆಂಕಿಯನ್ನು ಅಗ್ನಿಶಾಮಕ ಸಿಬ್ಬಂದಿ ನಂದಿಸಿದ್ದಾರೆ. ಉಳಿದ ರೋಗಿಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ವರ್ಗಾಯಿಸಲಾಗಿದೆ.

Donate Janashakthi Media

Leave a Reply

Your email address will not be published. Required fields are marked *