19 ಲಕ್ಷ ಮತಯಂತ್ರಗಳು ನಾಪತ್ತೆ: ಸಭಾಧ್ಯಕ್ಷರಿಗೆ ಪುರಾವೆಗಳನ್ನು ಸಲ್ಲಿಸಿದ ಕಾಂಗ್ರೆಸ್

ಬೆಂಗಳೂರು: 19 ಲಕ್ಷ ವಿದ್ಯುತ್ಮಾನ ಮತಯಂತ್ರಗಳು ಇವಿಎಂ ನಾಪತ್ತೆಯಾಗಿರುವುದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಪಕ್ಷವು ಪುರಾವೆಗಳು ಮತ್ತು ಕಾಗದ ಪತ್ರಗಳ ಸಮೇತ ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ದೂರು ಸಲ್ಲಿಸಿದೆ.

ಈ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ನಾಯಕ ಹೆಚ್. ಕೆ. ಪಾಟೀಲ್, ಇಂದು ನಮ್ಮ ಸಭಾಧ್ಯಕ್ಷರನ್ನು ಭೇಟಿ ಮಾಡಿದ್ದೇನೆ. 19 ಲಕ್ಷ ಇವಿಎಂ ಯಂತ್ರಗಳು ನಾಪತ್ತೆಯಾಗಿರುವ ಬಗ್ಗೆ ಪುರಾವೆಗಳು ಮತ್ತು ಕಾಗದ ಪತ್ರ ನೀಡಿದ್ದೇವೆ ಎಂದರು.

19 ಲಕ್ಷ ಇವಿಎಂ ಯಂತ್ರಗಳು ಕಾಣೆಯಾಗಿರುವ ಬಗ್ಗೆ ಕೇಂದ್ರ ಸರ್ಕಾರ ಈ ಬಗ್ಗೆ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಧೀಶರ ನೇತ್ವದಲ್ಲಿ ನ್ಯಾಯಾಂಗ ತನಿಖೆ ಮಾಡಬೇಕು ಎಂದು ಒತ್ತಾಯಿಸಲಾಗಿದೆ. ಇದಕ್ಕೆ ಪೂರಕವಾಗಿ 2,750 ಪುಟಗಳ ಕಾಗದ ಪತ್ರಗಳನ್ನು ಸಲ್ಲಿಸಲಾಗಿದೆ. ಮನೊರಂಜನ್ ಸಂತೋಷ್ ರಾಯ್ ಪಿಎಲ್ ಮಾಡಿದ್ದರು. ಅದರ ಮಾಹಿತಿಗಳನ್ನು ಸಭಾಧ್ಯಕ್ಷರಿಗೆ ಸಲ್ಲಿಸಿದ್ದೇವೆ ಎಂದರು.

ವಿಧಾನಸಭೆಯಲ್ಲಿ ಚುನಾವಣಾ ಸುಧಾರಣೆಗಳ ಬಗ್ಗೆ ಚರ್ಚೆ ಮಾಡಿದ್ದೇವೆ‌. ನಾನು ಸಹ ಚರ್ಚೆಯಲ್ಲಿ ಭಾಗಿಯಾಗಿದ್ದೆ. ಹಲವಾರು ಸದಸ್ಯರು ತಮ್ಮ ಅಭಿಪ್ರಾಯ ತಿಳಿಸಿದ್ದರು. ನಾನು ಮಾತಾಡುವಾಗ ಸದನದ ನಾಲ್ಕೈದು ವಿಷಯಗಳನ್ನು ಪ್ರಸ್ತಾಪ ಮಾಡಿದ್ದೆ. ನ್ಯಾಯಾಲಯಗಳಲ್ಲಿ ಚುನಾವಣಾ ವಿಚಾರಗಳಿಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ  ತಡವಾಗುತ್ತಿರುವ ಬಗ್ಗೆಯೂ ಮಾತನಾಡಿದ್ದೆ. ಇವಿಎಂ ಮತಯಂತ್ರಗಳು ಹ್ಯಾಕ್ ಮಾಡುವ ಬಗ್ಗೆ ಬಹಳಷ್ಟು ಜನರಿಗೆ ಅನುಮಾನವಿದೆ. ಇದನ್ನು ಹೋಗಲಾಡಿಬೇಕಿದೆ ಎಂದರು.

ಇನ್ನು ಪಿಎಸ್‌ಐ ಹಗರಣ, 40% ಕಮಿಷನ್ ಹಗರಣ, ಸಂತೋಷ್ ಪಾಟೀಲ್ ಆತ್ಮಹತ್ಯೆ, ದಿಂಗಾಲೇಶ್ವರ ಶ್ರೀಗಳ ಆರೋಪದ ನಂತರವೂ ನಳಿನ್ ಕುಮಾರ್ ಕಟೀಲ್ ಸಿದ್ದರಾಮಯ್ಯ ಅವರ ಬಗ್ಗೆ ಮಾತನಾಡಲು ಯಾವ ನೈತಿಕತೆಯಿದೆ ಎಂದು ಖಾರವಾಗಿ ನುಡಿದರು.

Donate Janashakthi Media

Leave a Reply

Your email address will not be published. Required fields are marked *