ಉತ್ತರಾಖಾಂಡ : ‘ಭೂಕುಸಿತದ ಕಾರಣ ಸುರಂಗದ ಎರಡೂ ಬದಿಗಳಲ್ಲಿ ದೊಡ್ಡ ಬಂಡೆಗಳು ಬಿದ್ದಿವೆ. ಅವುಗಳನ್ನು ತೆರವುಗೊಳಿಸಲು ಜೆಸಿಬಿಗಳನ್ನು ತರಲಾಗಿದೆ. ಕಾರ್ಮಿಕರು ಸುರಂಗದ ಒಳಗೆ ಸುರಕ್ಷಿತವಾಗಿದ್ದಾರೆ. ಸುರಂಗದಲ್ಲಿ ಸಾಕಷ್ಟು ಆಹಾರ ದಾಸ್ತಾನು ಇದೆ. ಆದ್ದರಿಂದ ಭಯಪಡುವ ಅವ್ಯಕತೆ ಇಲ್ಲ’ ಎಂದು ಜಿಲ್ಲಾಧಿಕಾರಿ ಜಿತೇಂದ್ರ ವರ್ಮಾ ತಿಳಿಸಿದರು. ಉತ್ತರಾಖಾಂಡ
ಇದನ್ನೂ ಓದಿ: ಮಾಲೆಗಾಂವ್ ಬಾಂಬ್ ಸ್ಫೋಟ: ಖುಲಾಸೆಯಾದವರು ನಿಜವಾಗಿಯೂ ಅಮಾಯಕರೇ?
ಪಿತೋರಾಗಢದಲ್ಲಿ ತೀವ್ರ ಮಳೆಯ ಕಾರಣ ಉಂಟಾದ ಭೂಕುಸಿತದಿಂದ ರಸ್ತೆ ಸಂಪರ್ಕ ಕಡಿತಗೊಂಡು ರಾಷ್ಟ್ರೀಯ ಜಲವಿದ್ಯುತ್ ಶಕ್ತಿ ನಿಗಮ ಲಿಮಿಟೆಡ್‌ನ (ಎನ್‌ಎಚ್‌ಪಿಸಿ) 19 ಕಾರ್ಮಿಕರು ಉತ್ತರಾಖಂಡದ ಘರಚೂಲಾ ಜಿಲ್ಲೆಯಲ್ಲಿರುವ ದೌಲಿಗಂಗಾ ವಿದ್ಯುತ್ ಯೋಜನೆಯ ಸುರಂಗದಲ್ಲಿ ಭಾನುವಾರ ಸಿಲುಕಿಕೊಂಡಿದ್ದರು.
ರಕ್ಷಣಾ ಕಾರ್ಯ ನಡೆಸಿ, 8 ಕಾರ್ಮಿಕರನ್ನು ಸುರಂಗದಿಂದ ಹೊರಗೆ ತರಲಾಗಿದೆ. ಉಳಿದ 11 ಮಂದಿ ಇನ್ನೂ ಸುರಂಗದಲ್ಲಿಯೇ ಸಿಲುಕಿಕೊಂಡಿದ್ದಾರೆ. ರಕ್ಷಣಾ ಕಾರ್ಯ ಮುಂದುವರಿಸಲಾಗಿದೆ.
‘ಭೂಕುಸಿತದಿಂದ ಅವಶೇಷಗಳು ನಿರಂತರವಾಗಿ ಬೀಳುತ್ತಿವೆ. ಇದರಿಂದ ರಕ್ಷಣಾ ಕಾರ್ಯಕ್ಕೆ ತೊಡಕಾಗಿದೆ. ವಿದ್ಯುತ್ ಉತ್ಪಾದನೆಗೆ ಯಾವುದೇ ತೊಡಕಾಗಿಲ್ಲ’ ಎಂದು ಮಾಹಿತಿ ನೀಡಿದರು.
ಇದನ್ನೂ ನೋಡಿ: ವಚನಾನುಭವ 33 | ಉದಕ ಮಜ್ಜನವಲ್ಲ ಪತ್ರೆ ಪೂಜೆಯಲ್ಲ Janashakthi Media
