ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ: ಶೀಘ್ರವೇ 19,000 ಶಿಕ್ಷಕರ ನೇಮಕಾತಿ

ಬೆಂಗಳೂರು: ನಗರದ ಕ್ವೀನ್ಸ್ ರಸ್ತೆಯಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ,  ಸರ್ಕಾರಿ ಶಾಲೆಗಳಲ್ಲಿ ಕೆಲ ಮೂಲಭೂತ ಸೌಕರ್ಯಗಳ ಅಭಾವಿರುವುದು ನಿಜ, ಅದನ್ನು ಹಂತ-ಹಂತವಾಗಿ ಬಗೆಹರಿಸಲಾಗುವುದು. ರಾಜ್ಯದ ಸರ್ಕಾರ ಶಾಲೆಗಳಲ್ಲಿ ಶಿಕ್ಷಕರ ಅಭಾವವಿದ್ದು, ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ.

ಶೀಘ್ರವೇ ರಾಜ್ಯದಲ್ಲಿ 19,000 ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಮಧು ಬಂಗಾರಪ್ಪ ತಿಳಿಸಿದ್ದೂ, ರಾಜ್ಯದಲ್ಲಿ ಒಳ ಮೀಸಲಾತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ವರದಿ ನೀಡಿದ ಬಳಿಕ 19 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಹೇಳಿದ್ದಾರೆ.

ರಾಜ್ಯದ ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಿಗೆ 5000 ಶಿಕ್ಷಕರು, ಉಳಿದ ಭಾಗದಲ್ಲಿ 5000 ಸೇರಿ ಒಟ್ಟು 10 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವುದಾಗಿ ಈಗಾಗಲೇ ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಇದರ ಜೊತೆಗೆ ಇನ್ನೂ ಒಂಬತ್ತು ಹುದ್ದೆಗಳು ಸೇರಿ 19 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಉದ್ದೇಶವಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಿಂಸೆಯಿಂದ ದೇಶದ ಒಗ್ಗಟ್ಟು, ಶಾಂತಿ, ಸಾಮರಸ್ಯವನ್ನು ಒಡೆದು ಹಾಕಲು ಸಾಧ್ಯವಿಲ್ಲ – ನಿತೀಶ್ ನಾರಾಯಣ್

ಇನ್ನೂ ಕಾಂಗ್ರೆಸ್ ಒತ್ತಾಯ ಜೋರಾದ ಬಳಿಕ ಈಗ ಕೇಂದ್ರ ಸರ್ಕಾರವು ಎಚ್ಚೆತ್ತು ಜನ ಗಣತಿಯ ಜೊತೆ ಜಾತಿ ಗಣತಿಯನ್ನು ಮಾಡುವುದಾಗಿ ಘೋಷಿಸಿರುವುದು ಸ್ವಾಗತಾರ್ಹ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ಮತ್ತು ನಮ್ಮ ರಾಷ್ಟ್ರದಾದ್ಯಂತ ಲಕ್ಷಾಂತರ ಸಮುದಾಯಗಳಿಗೆ ಇದೊಂದು ಗೆಲುವಿನ ಸಂಕೇತವಾಗಿದೆ. ಜಾತಿ ಗಣತಿ ನಡೆಸಲು ಬಿಜೆಪಿ ಸರ್ಕಾರದ ಈ ನಿರ್ಧಾರವು ನಮ್ಮ ನಾಯಕ ಶ್ರೀ ರಾಹುಲ್ ಗಾಂಧಿಯವರ ಅಚಲ ಬದ್ಧತೆಗೆ ಸಾಕ್ಷಿಯಾಗಿದೆ.

ನಮ್ಮ ನಾಯಕರಾದ ರಾಹುಲ್ ಗಾಂಧಿಯವರು, ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮತ್ತು ಎಲ್ಲಾ ಹಿರಿಯ ಕಾಂಗ್ರೆಸ್ ನಾಯಕರ ಅವಿರತ ಪ್ರತಿಪಾದನೆಯಿಂದಾಗಿ ಅಂತಿಮವಾಗಿ 11ವರ್ಷಗಳ ಬಳಿಕ ಈ ನಿರ್ಣಾಯಕ ವಿಷಯ ಮುನ್ನೆಲೆಗೆ ಬಂದಿದೆ.

ಈ ಗಣತಿಯು ದುರ್ಬಲ ವರ್ಗಗಳ ಸಬಲೀಕರಣ ಹಾಗೂ ವಿವಿಧ ಜಾತಿಗಳು ಎದುರಿಸುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಅಸಮಾನತೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪಾರದರ್ಶಕವಾಗಿ ಪರಿಶೀಲಿಸಿ, ವ್ಯವಸ್ಥಿತವಾಗಿ ಅಸಮಾನತೆಗಳನ್ನು ಪರಿಹರಿಸಲು ಜಾತಿ ಜನಗಣತಿ ಮುಖ್ಯ ಎಂದು ಹೇಳಿದ್ದಾರೆ.

ಆಗ ಮಾತ್ರ ನಾವೆಲ್ಲರೂ ದುರ್ಬಲರನ್ನು ಮೇಲೆತ್ತುವ ಮತ್ತು ನಿಜವಾಗಿಯೂ ಸಮಾನತೆಯ ಸಮಾಜವನ್ನು ಸೃಷ್ಟಿಸುವ ಪರಿಣಾಮಕಾರಿ ನೀತಿಗಳನ್ನು ರೂಪಿಸಲು ಸಾಧ್ಯವಾಗುವುದು ಎಂದು ತಿಳಿಸಿದೆನು.

ಇನ್ನೂ ಈ ವೇಳೆ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷರಾದ ರಮೇಶ್ ಬಾಬು, ಕೆಪಿಸಿಸಿ ಪದವೀಧರ ವಿಭಾಗದ ಅಧ್ಯಕ್ಷರಾದ ಎ.ಎನ್ ನಟರಾಜ ಗೌಡ, ಕೆಪಿಸಿಸಿ ಕಾರ್ಮಿಕರ ವಿಭಾಗದ ಅಧ್ಯಕ್ಷರಾದ ಪುಟ್ಟಸ್ವಾಮಿ ಗೌಡ, INTUC ಅಧ್ಯಕ್ಷರಾದ ಲಕ್ಷ್ಮೀ ವೆಂಕಟೇಶ್, ಕೆಪಿಸಿಸಿ ಪರಿಶಿಷ್ಟ ಜಾತಿ (ಎಸ್.ಸಿ) ಘಟಕದ ಅಧ್ಯಕ್ಷರಾದ ಧರ್ಮಸೇನ, ಕೆಪಿಸಿಸಿ ಪರಿಶಿಷ್ಟ ವಿಭಾಗದ ಅಧ್ಯಕ್ಷರಾದ ಎಂ.ವಿಜಯನಾಯಕ್, ಕೆಪಿಸಿಸಿ ಮಾಜಿ ಸೈನಿಕರ ವಿಭಾಗದ ಅಧ್ಯಕ್ಷರಾದ ಮಂಜುನಾಥ್ ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು.

ಇದನ್ನೂ ನೋಡಿ: ಮೇ ದಿನದ ವಿಶೇಷ | ಕೆಲಸದ ಅವಧಿ ಎಷ್ಟಿರಬೇಕು? ಕಾರ್ಮಿಕ ಕಾನೂನು ಏನು ಹೇಳುತ್ತದೆ? Janashakthi Media

Donate Janashakthi Media

Leave a Reply

Your email address will not be published. Required fields are marked *