ಬೆಂಗಳೂರು: ರಾಜ್ಯ ಸಚಿವ ಸಂಪುಟ ಉಪ ಸಮಿತಿ ನಿನ್ನೆ ಸಲ್ಲಿಸಿದ ಶಿಫಾರಸ್ಸಿನಂತೆ ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಸುಮಾರು 195 ತಾಲೂಕುಗಳನ್ನು ಬರಪೀಡಿತ ಎಂದು ಅಧಿಕೃತವಾಗಿ ಘೋಷಣೆ ಮಾಡಿ ಆದೇಶವನ್ನು ಹೊರಡಿಸಿದೆ.
ಇದೀಗ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ-2020ರ ಬರ ಘೋಷಣೆ ಮಾರ್ಗಸೂಚಿಯಲ್ಲಿನ ಮಾನದಂಡಗಳ ಅನ್ವಯದಂತೆ ಜಿಲ್ಲಾಧಿಕಾರಿಗಳಿಂದ ಬೆಳೆಹಾನಿಯ ಸಮೀಕ್ಷೆಯ ವರದಿಯ ಅನುಸಾರ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳ ಪೈಕಿ 195 ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಕಂಡು ಬಂದಿದೆ ಎಂದು ಹೇಳಿದೆ.
ಇದನ್ನೂ ಓದಿ:ಮಳೆಯಿಲ್ಲದೆ ರಾಜ್ಯ ಕಂಗಾಲು ಬರಪೀಡಿತ ತಾಲೂಕುಗಳ ಸಂಪೂರ್ಣ ಪಟ್ಟಿ ಶೀಘ್ರದಲ್ಲೇ ಪ್ರಕಟ: ರಾಜ್ಯ ಸರ್ಕಾರ
ಇನ್ನೂ 195 ತಾಲ್ಲೂಕುಗಳ ಪೈಕಿ 161 ತಾಲ್ಲೂಕುಗಳನ್ನು ತೀವ್ರ ಬರಪೀಡಿತ ತಾಲ್ಲೂಕು ಹಾಗೂ 34 ತಾಲ್ಲೂಕುಗಳನ್ನು ಸಾಧಾರಣ ಬರಪೀಡಿತ ತಾಲ್ಲೂಕು ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ 6 ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಯಾವುದು ಮೊದಲು ಅಲ್ಲಿಯವರೆಗೂ ಘೋಷಿಸಿ ಆದೇಶಿಸಿದೆ.
ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಬರ ನಿರ್ವಹಣೆಯ ಕಾರ್ಯಕ್ರಮಗಳನ್ನು ಕೈಗೊಳ್ಳಲು ಸರ್ಕಾರದಿಂದ ಕಾಲ ಕಾಲಕ್ಕೆ ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ನಿಯಮಗಳ ಅನ್ವಯ ಮಾರ್ಗಸೂಚಿಗಳನ್ನು ನೀಡಲಾಗುವುದು ಎಂದು ಹೇಳಿದೆ.
ಬರಪೀಡಿತ ತಾಲ್ಲೂಕುಗಳ ಪಟ್ಟಿ: