43 ಇಲಾಖೆಗಳಲ್ಲಿ 2.76 ಲಕ್ಷ ಹುದ್ದೆಗಳು ಖಾಲಿ: ಸರ್ಕಾರ

ಬೆಂಗಳೂರು: ಸರ್ಕಾರದ ಅಧಿಕೃತ ಮಾಹಿತಿಯೊಂದು ಶಿಕ್ಷಣ ಇಲಾಖೆ ಸೇರಿದಂತೆ ರಾಜ್ಯದ 43 ಇಲಾಖೆಗಳಲ್ಲಿ ಒಟ್ಟಾರೆ 2.76 ಲಕ್ಷ (2,76,386) ಹುದ್ದೆಗಳು ಖಾಲಿ ಉಳಿದಿರುವುದಾಗಿ ತಿಳಿಸಿದೆ. 4 ವೃಂದಗಳ ಹುದ್ದೆ ಸೇರಿದರೆ 2,76,386 ಲಕ್ಷ ಹುದ್ದೆಗಳು ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಉಳಿದಿವೆ .

ಆಡಳಿತದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ, ಖಾಲಿ ಇರುವ ವಿವಿಧ ಇಲಾಖೆಗಳ ಹುದ್ದೆಗಳನ್ನು ಭರ್ತಿ ಮಾಡಲು, ಆಡಳಿತ ಸುಧಾರಣಾ ಆಯೋಗವು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಈ ಶಿಫಾರಸಿಗೆ ಸರ್ಕಾರ ಕೂಡ ಸ್ಪಂದಿಸಿದ್ದು, ವಿವಿಧ ಇಲಾಖೆಗಳು ತಮ್ಮ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳ ಅನ್ವಯ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಸುಧಾರಣಾ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿ, ಆರ್ಥಿಕ ಇಲಾಖೆಯಿಂದ ಅನುಮೋದನೆ ಪಡೆದು ಹುದ್ದೆಗಳನ್ನು ಕಾಲಕಾಲಕ್ಕೆ ಭರ್ತಿ ಮಾಡಲು ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದೆ.

ಇದನ್ನೂ ಓದಿ: ಕೆ.ಎನ್‌. ರಾಜಣ್ಣ ಅವರನ್ನು ಮರಳಿ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಸಿದ್ದಲಿಂಗಸ್ವಾಮೀಜಿ ಆಗ್ರಹ

ರಾಜ್ಯ ಸರ್ಕಾರದ 43 ಇಲಾಖೆಗಳಲ್ಲಿ ಒಟ್ಟು 2,76,386 ಹುದ್ದೆಗಳು ಖಾಲಿ ಇವೆ. ಇವುಗಳಲ್ಲಿ 16,017 ಹುದ್ದೆಗಳು ಎ ದರ್ಜೆಯ ಹುದ್ದೆಗಳಾಗಿವೆ. 16,734 ಬಿ ದರ್ಜೆಯ ಹುದ್ದೆಗಳು, 1,66,021 ಸಿ ದರ್ಜೆಯ ಹುದ್ದೆಗಳು, 77,614 ಡಿ ದರ್ಜೆಯ ಹುದ್ದೆಗಳು ಖಾಲಿ ಉಳಿದಿವೆ ಎಂದು ಹೇಳಲಾಗಿದೆ. ಶಿಕ್ಷಣ ಇಲಾಖೆಯಲ್ಲಿ 70727 ಹುದ್ದೆಗಳು ಖಾಲಿ ಇವೆ. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 37,069 ಹುದ್ದೆಗಳು ಖಾಲಿ ಇದ್ದು, ಒಳಾಡಳಿತ ಇಲಾಖೆಯಲ್ಲಿ 26,168, ಕಂದಾಯ ಇಲಾಖೆಯಲ್ಲಿ 11,145, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 10,898 ಹುದ್ದೆಗಳು ಖಾಲಿ ಉಳಿದಿದೆ.

ಗ್ರೂಪ್-ಸಿ ವೃಂದದ 96,844 ಹುದ್ದೆಗಳನ್ನು (ಶೀಘ್ರಲಿಪಿಗಾರರು, ಬೆರಳಚ್ಚುಗಾರರು, ವಾಹನ ಚಾಲಕರು ಮತ್ತು ಗ್ರೂಪ್-ಡಿ ಸಮನಾಂತರ) ಮತ್ತು ತಾಂತ್ರಿಕ ಹುದ್ದೆಗಳನ್ನು ಗುತ್ತಿಗೆ, ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದೆ.

ಇದನ್ನೂ ನೋಡಿ: ಧರ್ಮಸ್ಥಳ ಕೊಲೆ ಪ್ರಕರಣ : ಕಾಂಗ್ರೆಸ್‌, ಬಿಜೆಪಿಯ ನಾಯಕರುಗಳೆ.. ನಿಮಗೆ ಮನುಷ್ಯತ್ವ ಇಲ್ಲವೆ? Janashakthi Media

Donate Janashakthi Media

Leave a Reply

Your email address will not be published. Required fields are marked *