ಹಾವೇರಿ: ರಟ್ಟಿಹಳ್ಳಿ ತಾಲ್ಲೂಕಿನ ಮಾಸೂರು ನಿವಾಸಿಯಾಗಿದ್ದ ಶುಶ್ರೂಷಕಿ ಸ್ವಾತಿ ಬ್ಯಾಡಗಿ ಎಂಬುವವರ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಚಿತ್ರದುರ್ಗದ ಬಳಿ ಬಂಧಿಸಲಾಗಿದೆ.
ಮಾ. 3ರಂದು ನಡೆದಿದ್ದ ಕೊಲೆ ಪ್ರಕರಣ ಸಂಬಂಧ ಪ್ರಮುಖ ಆರೋಪಿ ನಯಾಜ್ ಬೆಣ್ಣಿಗೇರಿ ಅವರನ್ನು ಪೊಲೀಸರು ಬಂಧಿಸಿದ್ದರು. ಕೃತ್ಯದಲ್ಲಿ ಭಾಗಿಯಾಗಿದ್ದ ಮಾಸೂರಿನ ದುರ್ಗಾಚಾರಿ ಹಾಗೂ ವಿನಯ ಅಲಿಯಾಸ್ ವಿನಾಯಕ ತಲೆಮರೆಸಿಕೊಂಡಿದ್ದರು. ಅವರ ಪತ್ತೆಗೆ ವಿಶೇಷ ತಂಡ ರಚಿಸಲಾಗಿತ್ತು.
ಇಬ್ಬರೂ ಆರೋಪಿಗಳು ಬೆಂಗಳೂರಿನಲ್ಲಿರುವ ಸಂಬಂಧಿಕರ ಮನೆಯಲ್ಲಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಬೆಂಗಳೂರಿಗೆ ಹೋಗಿದ್ದ ಪೊಲೀಸರು, ಮನೆಯಲ್ಲಿ ಪರಿಶೀಲನೆ ನಡೆಸಿದ್ದರು. ಪೊಲೀಸರು ಬರುವ ಸುಳಿವು ಅರಿತಿದ್ದ ಆರೋಪಿಗಳು, ಅಲ್ಲಿಂದ ಪರಾರಿಯಾಗಿದ್ದರು.
ಇದನ್ನೂ ಓದಿ: ಸ್ಟಾರ್‌ಲಿಂಕ್ ವ್ಯವಹಾರ ನಿಲ್ಲಬೇಕು-ಸಿಪಿಐ(ಎಂ) ಪೊಲಿಟ್‍ಬ್ಯುರೊ
ಇದಾದ ನಂತರವೂ ಪೊಲೀಸರು ಆರೋಪಿಗಳಿಗಾಗಿ ಶೋಧ ಮುಂದುವರಿಸಿದ್ದಾರೆ. ರಾತ್ರಿ ಚಿತ್ರದುರ್ಗ ಬಳಿ ಆರೋಪಿಗಳಿರುವ ಮಾಹಿತಿ ಲಭ್ಯವಾಗಿತ್ತು. ಅಲ್ಲೀಗೆ ಹೋದ ಪೊಲೀಸರ ತಂಡ ಇಬ್ಬರೂ ಬಂಧಿಸಿ ಹಾವೇರಿಯತ್ತ ಕರೆತರುತ್ತಿದೆ.
‘ಸ್ವಾತಿ ಕೊಲೆ ಪ್ರಕರಣದಲ್ಲಿ ನಯಾಜ್‌ನನ್ನು ಮಾತ್ರ ಬಂಧಿಸಲಾಗಿತ್ತು. ಇದೀಗ ದುರ್ಗಾಚಾರಿ ಹಾಗೂ ವಿನಯ್‌ನನ್ನು ಬಂಧಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿಸಲಾಗಿದೆ’ ಎಂದು ಹಾವೇರಿ ಎಸ್ಪಿ ಅಂಶುಕುಮಾರ ತಿಳಿಸಿದರು.
ಇದನ್ನೂ ನೋಡಿ: ದಿಗಂತ್ ಪ್ರಕರಣಕ್ಕೆ ಮತೀಯ ಬಣ್ಣ | ಬಿಜೆಪಿ ಹಾಗೂ ಸಂಘಪರಿವಾರದವರ ಮೇಲೆ ಸುಮೋಟೋ ಪ್ರಕರಣ ದಾಖಲಿಸಿ