ಈ ವರ್ಷದಲ್ಲಿ 2 ಲಕ್ಷ ಅಕ್ರಮ ಪಂಪ್ ಸೆಟ್ ಗಳು ಸಕ್ರಮ: ಇಂಧನ ಸಚಿವ ಕೆ.ಜೆ.ಜಾರ್ಜ್

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಈವರೆಗೆ 2.5 ಲಕ್ಷ ಪಂಪ್ ಸೆಟ್ ಗಳು ಸಕ್ರಮ: ವಿಜಯಪುರದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳೊಂದಿಗೆ ಸಭೆ

ವಿಜಯಪುರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 2.5 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಬಾಕಿ ಇರುವ 2 ಲಕ್ಷ ಪಂಪ್ ಸೆಟ್ ಗಳನ್ನು ಇನ್ನೊಂದು ವರ್ಷದಲ್ಲಿ ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಅಕ್ರಮ

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿಧಿಗಳು ಹಾಗೂ ಇಲಾಖೆ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, “ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಯೋಜನೆ 2004ರಿಂದಲೇ ಜಾರಿಯಲ್ಲಿದ್ದು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಈ ಯೋಜನೆಯಡಿ 4.5 ಲಕ್ಷ ಅರ್ಜಿಗು ಬಾಕಿ ಇದ್ದವು. ಪ್ರಸ್ತುತ 2.5 ಲಕ್ಷ ಪಂಪ್ ಸೆಟ್ ಗಳನ್ನು ಅಕ್ರಮಗೊಳಿಸಲಾಗಿದೆ. ಬಾಕಿ ಉಳಿದ ಅರ್ಜಿಗಳನ್ನು ಇತ್ಯರ್ಥಗೊಳಿಸಿದ ಬಳಿಕ ಹೊಸದಾಗಿ ಬಂದ ಅರ್ಜಿಗಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾ ಕೈಗೊಳ್ಳಲಾಗುವುದು,” ಎಂದರು. ಅಕ್ರಮ

“ರೈತರಿಗೆ ನಿರಂತರ 7 ಗಂಟೆ ಸೇರಿದಂತೆ ರಾಜ್ಯದ ಜನರಿಗೆ ದಿನದ 24 ಗಂಟೆಗಳ ಕಾಲ ವಿದ್ಯುತ್‌ ಪೂರೈಸಲಾಗುತ್ತಿದೆ.ವಿಜಯಪುರ ಜಿಲ್ಲೆಯಲ್ಲಿ 353 ಕೃಷಿ ಮಾರ್ಗಗಳಿಗೆ ಹಗಲು ವೇಳೆ 7 ಗಂಟೆ 3 ಫೇಸ್, 165 ಮಾರ್ಗಗಳಲ್ಲಿ ಹಗಲು 4 ಗಂಟೆ ರಾತ್ರಿ 3 ಮೂರು ಗಂಟೆಗಳ ಕಾಲ , 42 ಕೃಷಿ ಮಾರ್ಗದಲ್ಲಿ ಹಗಲು 3 ಮತ್ತು ರಾತ್ರಿ 4 ಗಂಟೆಗಳ ಕಾಲ ತ್ರೀ ಫೇಸ್ ಹಾಗೂ 43 ಕೃಷಿ ಮಾರ್ಗಗಳಲ್ಲಿ ಹಗಲು 3 ಗಂಟೆ ರಾತ್ರಿ 3 ಗಂಟೆಗಳ ಕಾಲ ತ್ರೀ ಫೇಸ್ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ”, ಎಂದು ಸಚಿವರು ಮಾಹಿತಿ ನೀಡಿದರು.

ಇದನ್ನೂ ಓದಿ: ಬಿಜೆಪಿಗೆ ಮತ್ತೊಂದು ಬಿಗ್‌ ಶಾಕ್: ಜೆಡಿಯು ಯೂಟರ್ನ್

“ರಾಜ್ಯದಲ್ಲಿ ಕುಸುಮ್-ಬಿ ಯೋಜನೆಯಡಿ ರೈತರಿಗೆ ಶೇ. 80ರ ಸಬ್ಸಿಡಿ ದರದಲ್ಲಿ ಸೋಲಾರ್ ಪಂಪ್ ಸೆಟ್ ಒದಗಿಸುವುದು ಮತ್ತು ಕುಸುಮ್‌- ಸಿ ಯೋಜನೆಯಡಿ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸುವ ಫೀಡರ್ ಗಳ ಸೋಲರೈಸೇಷನ್ ಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ವಿದ್ಯುತ್ ಫೀಡರ್ ಗಳಿಂದ 500 ಮೀಟರ್ ಗಿಂತ ಹೆಚ್ಚು ಅಂತರದಲ್ಲಿರುವ ಕೃಷಿ ಪಂಪ್ ಸೆಟ್ ಗಳನ್ನು ಸೋಲಾರ್ ವಿದ್ಯುತ್ ಪಂಪ್ ಸೆಟ್ ಗಳಾಗಿ ಪರಿವರ್ತಿಸಲಾಗುತ್ತಿದೆ. ಇದರಿಂದ ರೈತರಿಗೆ ಹೆಚ್ಚಿನ ಅನುಕೂಲಗಳಾಗಿವೆ”, ಎಂದರು.

ಜನಪ್ರತಿನಿಧಗಳೊಂದಿಗೆ ನಿರಂತರ ಸಂಪರ್ಕ ಅಗತ್ಯ*
ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡು ಜನಪ್ರತಿನಿಧಿಗಳ ಬಳಿ ಬರುತ್ತಾರೆ. ಹೀಗಾಗಿ ವಿದ್ಯುತ್ ಸಮಸ್ಯೆಗಳ ಬಗ್ಗೆಯೂ ಅವರಿಗೆ ಹೆಚ್ಚಿನ ಮಾಹಿತಿ ಇರುತ್ತದೆ. ಹೀಗಾಗಿ ಹೆಸ್ಕಾಂ ಇಂಜಿನಿಯರ್ ಗಳು, ಲೈನ್ ಮ್ಯಾನ್ ಗಳು ತಮ್ಮ ವ್ಯಾಪ್ತಿಯ ಜನಪ್ರತಿನಿಧಿಗಳೊದಿಗೆ ನೇರ ಸಂಪರ್ಕದಲ್ಲಿದ್ದುಕೊಂಡು ಸ್ಥೀಯ ಮಟ್ಟ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಇಂಡಿ ಕ್ಷೇತ್ರದ ಶಾಸಕ ಯಶವಂತರಾಯ ಗೌಡ ಮಾತನಾಡಿ, ಜನರಿಗೆ ವಿದ್ಯುತ್ ಸಮಪರ್ಕವಾಗಿ ಪೂರೈಕೆಯಾಗಲು ಕ್ರಮ ಕೈಗೊಳ್ಳಯವುದರ ಜತೆಗೆ ವಿದ್ಯುತ್ ಕಾಮಗಾರಿ ವಿಳಂಬವಾಗದಂತೆ ನೋಡಿಕೊಳ್ಳಬೇಕು. ಕುಡಿಯುವ ನೀರಿಗೆ ವಿದ್ಯುತ್ ವ್ಯವಸ್ಥೆ ಸಮರ್ಪಕವಾಗಿ ಪೂರೈಕೆಯಾಗಬೇಕು. ಹಳೆಯ ಕಂಬ, ವೈರ್‌ ಗಳನ್ನು ಬದಲಿಸಬೇಕು ಎಂದು ಹೇಳಿದಾಗ, ಈ ಬಗ್ಗೆ ಗಮನಹರಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ಸಂಸದ ರಮೇಶ್ ಜಿಗಜಿಣಗಿ, ಶಾಸಕರಾದ ಅಶೋಕ ಮಲ್ಲಪ್ಪ ಮನಗೂಳಿ, ಭೀಮನಗೌಡ (ರಾಜುಗೌಡ) ಬಸನ ಗೌಡ ಪಾಟೀಲ್, ವಿಠ್ಠಲ್ ದೊಂಡಿಬಾ ಕಟಕದೊಂಡ, ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಅಪ್ಪಾಸಿ ಬಬಲೇಶ್ವರ್, ಮಹಾನಗರ ಪಾಲಿಕೆಯ ಮೇಯರ್ ಮಹೇಜಬಿನ ಅಬ್ದುಲರಜಾಕ್ ಹೊರ್ತಿ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕನಾನ ಅಬ್ದುಲ್ ಹಮೀನ್ ಮುಶ್ರೀಪ್, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಿಷಿ ಆನಂದ, ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ವೈಶಾಲಿ ಎಂ.ಎಲ್., ತಾಂತ್ರಿಕ ನಿರ್ದೇಶಕ ಜಗದೀಶ ಸಾವಳಗಿ, ಹೆಸ್ಕಾಂ ಹಾಗೂ ಕೆಪಿಟಿಸಿಎಲ್ ಅಧಿಕಾರಿಗಳು ಪಾಲ್ಗೊಂಡಿದ್ದರು.

ಇದನ್ನೂ ನೋಡಿ: ಚಾಲಕರು| ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯಲ್ಲಿ ನೋಂದಾವಣಿ ಮಾಡಿಕೊಳ್ಳುವುದು ಹೇಗೆ?

Donate Janashakthi Media

Leave a Reply

Your email address will not be published. Required fields are marked *