ಬೆಂಗಳೂರು| 2 ಅಂತಸ್ತಿನ ಮನೆ ಕುಸಿತ

Please follow and like us:
ಬೆಂಗಳೂರು: ನೆನ್ನೆ ಸಂಜೆ 4:15ರ ಸುಮಾರಿಗೆ ಭೀಮಾ ನಗರದ ತಿಪ್ಪಸಂದ್ರದಲ್ಲಿ ಎರಡು ಅಂತಸ್ತಿನ ಮನೆ ಕುಸಿದಿರುವ ಘಟನೆ ನಡೆದಿದೆ.

ಮನೆಯ ಪಕ್ಕದಲ್ಲಿಯೇ ಮತ್ತೊಂದು ಕಟ್ಟಡಕ್ಕೆ ಪಾಯ ತೆಗೆಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಕಟ್ಟಡದಲ್ಲಿ ಐದು ಬಾಡಿಗೆ ಮನೆಗಳಿದ್ದವು. ಕಟ್ಟಡ ಕುಸಿದ ವೇಳೆ ಮನೆಯಲ್ಲಿದ್ದವರು ಹೊರಗೆ ಓಡಿದ್ದಾರೆ.

ಇದನ್ನೂ ಓದಿ: ದಲಿತ ಸಮಾವೇಶ ಮಾಡಬೇಡಿ ಅಂತ ಹೈಕಮಾಂಡ್ ಹೇಳಿಲ್ಲ- ಮುನಿಯಪ್ಪ

ಇನ್ನು ಮನೆಯ ಬೇಸ್‌ಮೆಂಟ್‌ನಲ್ಲಿದ್ದ ಐದಕ್ಕೂ ಹೆಚ್ಚು ಬೈಕ್‌ಗಳು ಜಖಂಗೊಂಡಿವೆ. ಕಟ್ಟಡ ಕುಸಿಯುವ ವೇಳೆ 6 ಮಂದಿ ಒಳಗಡೆ ಇದ್ದರು. ಸದ್ಯ ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು,ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ದೌಡಾಯಿಸಿದ್ದಾರೆ. ಕಟ್ಟಡ ಮತ್ತಷ್ಟು ಕುಸಿಯುವ ಸಾಧ್ಯತೆಯಿದ್ದು, ಮನೆಯ ಎರಡೂ ಕಡೆ ಬ್ಯಾರಿಕೇಡ್‌ ಹಾಕಿ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ.

ಇದನ್ನೂ ನೋಡಿ: ಬಹುರೂಪಿ : ಶರಣ ಚಳವಳಿಯ ಕನ್ನಡಿಯಲ್ಲಿ ವರ್ತಮಾನದ ಬಿಕ್ಕಟ್ಟುಗಳು ಹಾಗೂ ಬಿಡುಗಡೆಯ ದಾರಿ Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *