‘KPSC’ ಪರೀಕ್ಷೆಯಲ್ಲಿ ಭಾರಿ ಅಕ್ರಮ: ಒಂದೇ ಕೊಠಡಿಯ 20 ಅಭ್ಯರ್ಥಿಗಳು ಪಾಸ್!

ಬೆಂಗಳೂರು: ಕರ್ನಾಟಕ ಸಾರ್ವಜನಿಕ ಸೇವಾ ಆಯೋಗ (KPSC)ಯಲ್ಲಿ ಮತ್ತೊಮ್ಮೆ ಅಕ್ರಮದ ಆರೋಪಗಳು ಎದ್ದಿವೆ. KPSC ಗೆಜೆಟೆಡ್ ಪ್ರೊಬೆಷನರ್ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಬೃಹತ್ ಮಟ್ಟದ ಭ್ರಷ್ಟಾಚಾರ ಮತ್ತು ಗೋಲ್ಮಾಲ್ ನಡೆದಿದೆ ಉದ್ಯೋಗ ಆಕಾಂಕ್ಷಿಗಳು ಮತ್ತು ವಿದ್ಯಾರ್ಥಿ ಸಂಘಟನೆಗಳು ಗಂಭೀರ ಆರೋಪ ಮಾಡಿವೆ. ಪರೀಕ್ಷಾ ಫಲಿತಾಂಶದಲ್ಲಿ ಕಂಡುಬಂದಿರುವ ಕೆಲವು ಅಸಹಜ ಬೆಳವಣಿಗೆಗಳು ಉದ್ಯೋಗ ಆಕಾಂಕ್ಷಿಗಳಲ್ಲಿ ಭಾರೀ ಅಸಮಾಧಾನ ಮೂಡಿಸಿವೆ.

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಕೆಎಎಸ್ (KAS) ಪರೀಕ್ಷೆಯ ಫಲಿತಾಂಶದಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಒಂದೇ ಪರೀಕ್ಷಾ ಕೊಠಡಿಯಲ್ಲಿ ಕುಳಿತು ಪರೀಕ್ಷೆ ಬರೆದ ಸರಣಿ ಸಂಖ್ಯೆಯ (Serial Number) ಸುಮಾರು 15 ರಿಂದ 20 ಅಭ್ಯರ್ಥಿಗಳು ಒಟ್ಟಾಗಿ ಮುಖ್ಯ ಪರೀಕ್ಷೆಯಲ್ಲಿ (Mains) ಉತ್ತೀರ್ಣರಾಗಿರುವುದು ಭಾರೀ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಒಂದೇ ಪೋಷಕರ ಇಬ್ಬರು ಅಥವಾ ಮೂವರು ಮಕ್ಕಳು (ಅಕ್ಕ-ತಂಗಿ, ಅಣ್ಣ-ತಮ್ಮ) ಒಟ್ಟಾಗಿ ಆಯ್ಕೆಯಾಗಿರುವುದು ಭ್ರಷ್ಟಾಚಾರದ ಶಂಕೆಯನ್ನು ಬಲಪಡಿಸಿದೆ

ಗೊಂದಲದ ಹಾದಿ: ಈ ನೇಮಕಾತಿ ಪ್ರಕ್ರಿಯೆಯು ಮೊದಲಿನಿಂದಲೂ ಗೊಂದಲದಿಂದ ಕೂಡಿದೆ. ಕನ್ನಡ ಅನುವಾದದ ತಪ್ಪುಗಳು (Translation Errors), ಅಡ್ಮಿಟ್ ಕಾರ್ಡ್ ನೀಡುವಲ್ಲಿ ವಿಳಂಬ ಮತ್ತು ಕೋರ್ಟ್‌ನಲ್ಲಿ ಪ್ರಕರಣಗಳು ಬಾಕಿ ಇರುವಾಗಲೇ ಅವಸರವಸರವಾಗಿ ಫಲಿತಾಂಶ ಪ್ರಕಟಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ .

ಇದನ್ನೂ ಓದಿ: ಜಂತರ್ ಮಂತರ್ ಕನಸು ಮತ್ತೆ? ಅರವಿಂದ್ ಕೇಜ್ರಿವಾಲ್ ಎದುರು ಮೋದಿ ಸವಾಲಿನ ರಾಜಕೀಯ

ಪ್ರಮುಖ ಬೇಡಿಕೆಗಳು:

* ಪ್ರಕರಣವನ್ನು ಕೂಡಲೇ ಸಿಬಿಐ (CBI) ತನಿಖೆಗೆ ವಹಿಸಬೇಕು

* ಪ್ರಾಮಾಣಿಕವಾಗಿ ಅಭ್ಯಾಸ ಮಾಡಿದ ಅಭ್ಯರ್ಥಿಗಳಿಗೆ ನ್ಯಾಯ ಸಿಗಬೇಕು.

* ಮುಂದಿನ ದಿನಗಳಲ್ಲಿ ಪರೀಕ್ಷೆಗಳನ್ನು ನಡೆಸುವ ಜವಾಬ್ದಾರಿಯನ್ನು ಯುಪಿಎಸ್‌ಸಿಗೆ (UPSC) ವಹಿಸುವುದು ಉತ್ತಮ ಎಂದು ಸಲಹೆ ನೀಡಲಾಗಿದೆ .

* ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕೂಡಲೇ ಮಧ್ಯಪ್ರವೇಶಿಸಿ ತನಿಖೆಗೆ ಆದೇಶಿಸಬೇಕು ಮತ್ತು ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ

ಪ್ರಭಾವಿಗಳ ಹಸ್ತಕ್ಷೇಪ: ಪ್ರಭಾವಿ ರಾಜಕಾರಣಿಗಳು, ಐಎಎಸ್ ಅಧಿಕಾರಿಗಳು ಮತ್ತು ಕೆಪಿಎಸ್‌ಸಿ ಸದಸ್ಯರ ಮಕ್ಕಳು ಅಥವಾ ಸಂಬಂಧಿಕರಿಗೆ ಅನುಕೂಲ ಮಾಡಿಕೊಡಲು ಈ ಕುತಂತ್ರ ನಡೆಸಲಾಗಿದೆ ಎಂದು ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ರಾಜ್ಯಾಧ್ಯಕ್ಷ ಕಾಂತ ಕುಮಾರ್ ಆರೋಪಿಸಿದ್ದಾರೆ.

CBI ತನಿಖೆಗೆ ಒತ್ತಾಯ: ಈ ಹಗರಣದ ಆಳವನ್ನು ಪತ್ತೆಹಚ್ಚಲು ರಾಜ್ಯ ತನಿಖಾ ಸಂಸ್ಥೆಗಳಿಂದ ಸಾಧ್ಯವಿಲ್ಲ, ಆದ್ದರಿಂದ ಕೂಡಲೇ ಪ್ರಕರಣವನ್ನು ಸಿಬಿಐ (CBI) ತನಿಖೆಗೆ ವಹಿಸಬೇಕು ಅಥವಾ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಅಭ್ಯರ್ಥಿಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ.ಪ್ರಾಮಾಣಿಕವಾಗಿ ಅಭ್ಯಾಸ ಮಾಡಿದ ಅಭ್ಯರ್ಥಿಗಳಿಗೆ ನ್ಯಾಯ ಸಿಗಬೇಕು ಮತ್ತು ಅರ್ಹರಿಗೆ ಮಾತ್ರ ಕೆಲಸ ಸಿಗಬೇಕು ಎಂಬುದು ಹೋರಾಟಗಾರರ ಪ್ರಮುಖ ಬೇಡಿಕೆಯಾಗಿದೆ.

ಇದನ್ನೂ ನೋಡಿ: “ಸಂಘಟನೆ ಹಕ್ಕಿಗೆ ಕೈ ಹಾಕಿದರೆ ಹೋರಾಟ ತೀವ್ರ: ಮೀನಾಕ್ಷಿ ಸುಂದರಂ ಎಚ್ಚರಿಕೆ” Janashakthi Media

Donate Janashakthi Media

Leave a Reply

Your email address will not be published. Required fields are marked *